370ನೇ ವಿಧಿ ರದ್ದು ಸಮರ್ಥಿಸಿಕೊಂಡ ನಾಯ್ಡು, ಅಮಿತ್ ಶಾ

   ಚೆನ್ನೈ, ಆಗಸ್ಟ್ 11    ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿ ರದ್ದುಗೊಳಿಸಿರುವುದನ್ನು ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಸಮರ್ಥಿಸಿಕೊಂಡಿದ್ದಾರೆ.    ವೆಂಕಯ್ಯ ನಾಯ್ಡು ಅವರ ಪುಸ್ತಕ ಬಿಡುಗಡೆಯಲ್ಲಿ ಮಾತನಾಡಿದ ಅಮಿತ್ ಶಾ, ಕೇಂದ್ರದ ಈ ನಡೆಯಿಂದ ದೇಶಕ್ಕೆ ಒಳಿತಾಗಲಿದೆ. ಕಾಶ್ಮೀರದಲ್ಲಿ ಭಯೋತ್ಪಾದನೆ ಸಂಪೂರ್ಣವಾಗಿ ಸ್ಥಗಿತಗೊಳ್ಳಲಿದೆ ಎಂದರು.     ದೇಶದ ಸುರಕ್ಷತೆ ಮತ್ತು ಹಿತದೃಷ್ಟಿಯಿಂದ ಈ ವಿಧೇಯಕ ರದ್ದುಗೊಳಿಸುವ ಅಗತ್ಯವಿತ್ತು ಎಂದು ವೆಂಕಯ್ಯ ನಾಯ್ಡು ತಿಳಿಸಿದರು.  ಸಮಸ್ಯೆಯನ್ನು ರಾಷ್ಟ್ರೀಯ ದೃಷ್ಟಿಕೋನದಿಂದಲೂ ನೋಡಬೇಕು. ದೇಶದ ಜನ, ಜಮ್ಮು ಮತ್ತು ಕಾಶ್ಮೀರದವರ ಜೊತೆ ನಿಲ್ಲಬೇಕು ಎಂದು ನಾಯ್ಡು ಕರೆ ನೀಡಿದರು.     ರಾಜ್ಯದಲ್ಲಿ ಮಸೂದೆ ಅಂಗೀಕಾರಕ್ಕಾಗಿ ನಾಯ್ಡು ಅವರಿಗೆ ಧನ್ಯವಾದ ಅರ್ಪಿಸಿದ ಅಮಿತ್ ಶಾ, 370ನೇ ವಿಧಿ ರದ್ದುಗೊಳಿಸಿದ್ದು, ಕಾಶ್ಮೀರದಲ್ಲಿ ಭಯೋತ್ಪಾದನೆ ಕೊನೆಗೊಳ್ಳುತ್ತದೆ ಮತ್ತು ಕಾಶ್ಮೀರದ ಪ್ರಗತಿ ಮತ್ತು ಅಭಿವೃದ್ಧಿ ಸಾಧ್ಯವಾಗಲಿದೆ ಎಂದರು.