ಗ್ರಾಮಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ನರೇಗಾ ಮುಖ್ಯ ಪಾತ್ರ ವಹಿಸುತ್ತದೆ : ಚಂದ್ರಶೇಖರ ಬಿ ಕಂದಕೂರ
ರೋಣ :- ಉದ್ಯೋಗ ಖಾತರಿ ಯೋಜನೆಯಡಿ ನಡೆಸಲಾಗುವ ಕೆಲಸಗಳು ಗ್ರಾಮದ ಜನರ ಮನಸ್ಸಲ್ಲಿ ಉಳಿಯುವಂತಿರಬೇಕು. ಗುರಿ ಸಾಧನೆಯ ಜೊತೆಗೆ ಗ್ರಾಮದ ಅಭಿವೃದ್ಧಿ ಯಲ್ಲಿ ಶಾಶ್ವತ ವಾಗಿರುವ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ತಾಲೂಕ ಪಂಚಾಯತ ಕಾರ್ಯ ನಿರ್ವಾಹಕ ಅಧಿಕಾರಿ ಚಂದ್ರಶೇಖರ ಬಿ ಕಂದಕೂರ ಅಭಿಪ್ರಾಯ ಪಟ್ಟರು..ತಾಲೂಕ ಪಂಚಾಯತ ಸಭಾ ಭವನದಲ್ಲಿ ಆಚರಿಸಲಾದ ನರೇಗಾ ದಿವಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ನರೇಗಾ ಯೋಜನೆಯು ಮೊದಲು ಜನರಿಗೆ ಉದ್ಯೋಗವನ್ನು ಮಾತ್ರ ಕೊಡುವ ಕೆಲಸವನ್ನು ಮಾಡುತ್ತಿತ್ತು, ಅದಾದ ಬಳಿಕ 2013 ಗ್ರಾಮಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಕೆಲಸ ಮಾಡಲಾಯಿತು. ಆವಾಗಿನಿಂದ ಗ್ರಾಮಗಳು ಅಭಿವೃದ್ಧಿ ಹೊಂದಲು ನರೇಗಾ ಮುಖ್ಯ ಕಾರಣವಾಗುತ್ತಿದೆ. ಸದ್ಯ ಗ್ರಾಮಗಳಲ್ಲಿ ಗುಣ ಮಟ್ಟದ ಆಸ್ತಿ ಸೃಜನೆ ಮಾಡುವುದು ನಮ್ಮ ನಿಮ್ಮೆಲ್ಲರ ಕೆಲಸ ಎಂದರು. ಸರಕಾರ ಜಾರಿಗೆ ತಂದ ಯಾವುದೇ ಯೋಜನೆ ಯಶಸ್ವಿಯಾಗುವಲ್ಲಿ ಸಮರ್ಥ ಕಾರ್ಯ ಪಡೆಯ ಪಾತ್ರ ಬಹುಮುಖ್ಯವಾಗುತ್ತದೆ. ಸರಕಾರಿ ವ್ಯವಸ್ಥೆಯಲ್ಲಿ ಯೋಜನೆಗಳ ಯಶಸ್ಸಿಗೆ ಸರಕಾರಿ ಅಧಿಕಾರಿಗಳು, ನೌಕರರ ಜತೆಗೆ ಆಯಾ ಯೋಜನೆಯ ಸಿಬ್ಬಂದಿಯ ಸಹಕಾರ ಬೇಕಾಗಿರುತ್ತದೆ. ಅದು ನಮ್ಮ ತಾಲೂಕ ಪಂಚಾಯತಿ ಹಾಗೂ ಗ್ರಾಮ ಪಂಚಾಯತಿ ಅಲ್ಲಿ ಉತ್ತಮ ರೀತಿಯಲ್ಲಿ ಸಿಗುತ್ತಿದೆ ಎಂದರು. ಕಾರ್ಯಕ್ರಮ ದಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ತಾಲೂಕ ಪಂಚಾಯತ ಸಿಬ್ಬಂದಿಗಳು, ನರೇಗಾ ಸಿಬ್ಬಂದಿಗಳು ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿಗಳು ಸೇರಿದಂತೆ ಅನೇಕರು ಭಾಗವಹಿಸಿದ್ದರು... ಕೊಟ್ಹಣ್ಣು ಹಂಪಲದ ಕಿಟ್ ವಿತರಣೆ ನರೇಗಾ ದಿನಾಚರಣೆ ಪ್ರಯುಕ್ತ ಪಟ್ಟಣದ ಡಾ. ಪಂಡಿತ ಭೀಮಸೇನ್ ಜೋಶಿ ಸಾರ್ವಜನಿಕ ಸರಕಾರಿ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಾಹಕ ಅಧಿಕಾರಿಗಳಾದ ಚಂದ್ರಶೇಖರ ಬಿ ಕಂದಕೂರ ಅವರ ನೇತ್ರತ್ವದಲ್ಲಿ ತಾಲೂಕ ಪಂಚಾಯತ ಹಾಗೂ ನರೇಗಾ ಸಿಬ್ಬಂದಿಗಳಿಂದ ಬಡ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು