ಲೋಕದರ್ಶನ ವರದಿ
ರಾಷ್ಟ್ರೀಯ ಸೇವಾ ಯೋಜನೆ ಶಿಬಿರ; ವಿವಿಧ ಕಾರ್ಯಕ್ರಮ
ಕೊಪ್ಪಳ 15: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಿರೇ ಸಿಂದೋಗಿಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ 2024- 25 ಎರಡನೇ ದಿನದ ಕಾರ್ಯಕ್ರಮದಲ್ಲಿ ಡಾ. ಎಂ ಎಂ ಜೋಶಿ ನೇತ್ರಾಲಯ ಹಾಗೂ ವಿಜ್ಞಾನ ಸಂಸ್ಥೆ ಕೊಪ್ಪಳ ಇವರು ವತಿಯಿಂದ ಸಮಗ್ರ ಕಣ್ಣಿನ ತಪಾಸಣೆ ಕಾರ್ಯಕ್ರಮವನ್ನು ನೆರವೇರಿಸಲಾಯಿತು ಈ ಕಾರ್ಯಕ್ರಮದಲ್ಲಿ ಬಸಯ್ಯ ಹಿರೇಮಠ್, ನವೀನ್ ಕುಮಾರ್ ಹಾಗೂ ತೇಜಸ್ವಿನಿ ವೈ ವೈದ್ಯಾಧಿಕಾರಿಗಳು ಆಗಮಿಸಿ, ಈ ಗ್ರಾಮೀಣ ಭಾಗದ ಜನರಿಗೆ ಉಚಿತ ನೇತ್ರತಪಾಷಣೆಯನ್ನ ಮಾಡಲ್ಪಟ್ಟರು. ಈ ಕಾರ್ಯಕ್ರಮದಲ್ಲಿ ಗ್ರಾಮೀಣ ಪ್ರದೇಶದ ಜನರು ಇದರ ಸದುಪಯೋಗವನ್ನು ಪಡಿಸಿಕೊಂಡರು ನಂತರ ಸಾಯಂಕಾಲ 6:00ಗೆ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಅಸ್ಪೃಶ್ಯತೆ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಉದ್ದೇಶ ಗಳ ಕುರಿತು ಕಿರು ನಾಟಕಗಳನ್ನ ಗ್ರಾಮೀಣ ಪ್ರದೇಶದಲ್ಲಿ ಅಗತ್ಯವಿರುವ ದೃಷ್ಟಿಕೋನಗಳಿಗೆ ಸಂಬಂಧಿಸಿದಂತೆ ಬಿತ್ತರಿಸಲ್ಪಟ್ಟರು.