ರಾಷ್ಟ್ರೀಯ ಮತದಾರರ ದಿನಾಚರಣೆ ಜಿಲ್ಲೆಯ ವಿದ್ಯಾಥರ್ಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಕೊಪ್ಪಳ 11: ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಶಾಲೆ ಹಾಗೂ ಕಾಲೇಜು ವಿದ್ಯಾಥರ್ಿಗಳಿಗೆ ಪ್ರಬಂಧ ಮತ್ತು ರಸಪ್ರಶ್ನೆ ಕಾರ್ಯಕ್ರಮದಲ್ಲಿ ಕೊಪ್ಪಳ ಜಿಲ್ಲೆಯ ವಿದ್ಯಾಥರ್ಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ವೆಂಕಟರಾಜಾ ಅವರು ತಿಳಿಸಿದ್ದಾರೆ.  

ಜ. 25 ರಂದು ನಡೆಯುವ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದಲ್ಲಿ ಪ್ರಬಂಧ ಮತ್ತು ರಸಪ್ರಶ್ನೆ ಸ್ಪಧರ್ೆಯಲ್ಲಿ ವಿಜೇತರಾದ ವಿದ್ಯಾಥರ್ಿಗಳಿಗಾಗಿ ಜಿಲ್ಲಾ ಮಟ್ಟದ ಸ್ಪಧರ್ೆಯನ್ನು ಸ್ವೀಪ್ ಕಾರ್ಯಕ್ರಮದ ಅಧ್ಯಕ್ಷರಾದ ಜಿ.ಪಂ. ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿಗಳ ಸಮಕ್ಷಮದಲ್ಲಿ ಜಿ.ಪಂ. ಸಭಾಂಗಣದಲ್ಲ್ಲಿ ಗುರುವಾರದಂದು ಆಯೋಜಿಸಲಾಗಿತ್ತು.  

ಪ್ರೌಢ ಶಾಲಾ ಮಟ್ಟದ ಸ್ಪಧರ್ೆ: ಭಾರತ ನನ್ನ ಕನಸು ಎಂಬ ವಿಷಯದ ಕುರಿತು ಪ್ರೌಢ ಶಾಲಾ ವಿದ್ಯಾಥರ್ಿಗಳಿಗಾಗಿ ಆಯೋಜಿಸಲಾದ ಜಿಲ್ಲಾ ಮಟ್ಟದ ಪ್ರಭಂದ ಸ್ಪಧರ್ೆಗಳಲ್ಲಿ ವಿಜೇತರಾದವರ ವಿವರ ಇಂತಿದೆ.  ಕೊಪ್ಪಳ ಜಿಲ್ಲೆಯ ಯಲಬುಗರ್ಾ ತಾಲೂಕಿನ ಬೇವೂರು ಗ್ರಾಮದ ಸಕರ್ಾರಿ ಪದವಿ ಪೂರ್ವ ಕಾಲೇಜು ಪ್ರೌಡ ಶಾಲಾ ವಿಭಾಗದ ವಿದ್ಯಾಥರ್ಿನಿ ಶ್ರೀದೇವಿ ಹಡಪದ ಪ್ರಥಮ ಮತ್ತು ಕೊಪ್ಪಳ ತಾಲೂಕಿನ ಕೋಳೂರು ಗ್ರಾಮದ ಸಕರ್ಾರಿ ಪ್ರೌಢ ಶಾಲೆಯ ವಿದ್ಯಾಥರ್ಿನಿ ರೂಪಾ ಮಲ್ಲಪ್ಪ ದ್ವೀತಿಯ ಸ್ಥಾನವನ್ನು ಪಡೆದಿದ್ದಾರೆ.  ರಸಪ್ರಶ್ನೆ ಸ್ಪಧರ್ೆಯಲ್ಲಿ ಜಿಲ್ಲೆಯ ಕುಷ್ಟಗಿ ತಾಲೂಕಿನ ಗವಿಸಿದ್ದೇಶ್ವರ ಪ್ರೌಢ ಶಾಲೆಯ ಮಹಾಂತೇಶ ತಂದೆ ಯಂಕಪ್ಪ ಕನಸಾವಿ ಮತ್ತು  ಬಸವರಾಜ ಎಸ್. ದೋಟಿಹಾಳ ಎಂಬ ವಿದ್ಯಾಥರ್ಿಗಳು ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.    

ಯುನಿವಸರ್ಿಟಿ ಮಟ್ಟದ ಸ್ಪಧರ್ೆ: ರಸಪ್ರಶ್ನೆ ಸ್ಪಧರ್ೆ ಯುನಿವಸರ್ಿಟಿ ಮಟ್ಟದಲ್ಲಿ ಜಿಲ್ಲಾ ಮಟ್ಟದಲ್ಲಿ ವಿಜೇತರಾದವರ ವಿದ್ಯಾಥರ್ಿಗಳ ವಿವರ ಇಂತಿದೆ.  ದ್ವಿತೀಯ ವರ್ಷದ ಎಂ.ಬಿ.ಬಿ.ಎಸ್ ವಿದ್ಯಾಥರ್ಿ ಇಮ್ರಾನ್ ಖಾನ್ ಪ್ರಥಮ ಸ್ಥಾನ ಮತ್ತು ಪ್ರಥಮ ವರ್ಷದ ಎಂ.ಬಿ.ಬಿ.ಎಸ್ ವಿದ್ಯಾಥರ್ಿನಿ ಅಶ್ವಿನಿ ಪರವಣ್ಣನವರ ದ್ವಿತೀಯ ಸ್ಥಾನವನ್ನು ಪಡೆದುಕೊಂಡು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.     

ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಿದ್ಯಾಥರ್ಿಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ವೆಂಕಟ್ ರಾಜಾ ಅವರು ಇದೇ ಸಂದರ್ಭದಲ್ಲಿ ಅಭಿನಂದಿಸಿದ್ದಾರೆ.  ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು, ಪ್ರೌಢ ಶಾಲೆಯ ವಿದ್ಯಾಥರ್ಿಗಳು ಹಾಗೂ ವೈಧ್ಯಕೀಯ ಮಹಾವಿದ್ಯಾಲಯದ ವಿದ್ಯಾಥರ್ಿಗಳು ಸೇರಿ ಸುಮಾರು 150 ಜನರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.