ಹಾನಗಲ್ 22: ತಾಲೂಕಿನ ಸಾವಿಕೇರಿ ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಉದ್ಯೋಗ ಖಾತ್ರಿ ಯೋಜನೆಯಡಿ ನಿರ್ಮಿಸಿದ ಅಂಗನವಾಡಿ ಕೇಂದ್ರದ ನೂತನ ಕಟ್ಟಡವನ್ನು ಶಾಸಕ ಶ್ರೀನಿವಾಸ ಮಾನೆ ಉದ್ಘಾಟಿಸಿದರು.
ತಾಲೂಕಿನಲ್ಲಿ ಪ್ರತಿಯೊಂದು ಅಂಗನವಾಡಿ ಕೇಂದ್ರಗಳಿಗೆ ಸುಸಜ್ಜಿತ ಕಟ್ಟಡ ನಿರ್ಮಿಸುವಲ್ಲಿ ಕಾಳಜಿ ವಹಿಸಲಾಗಿದೆ. ಜೊತೆಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಿ ಸಂತಸದ ಕಲಿಕೆಗೆ ಪೂರಕ ವಾತಾವರಣ ಸೃಷ್ಟಿಸಲಾಗುತ್ತಿದೆ. ಅಗತ್ಯವಿದ್ದ ಕಡೆಗಳಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಎಲ್.ಕೆ.ಜಿ., ಯು.ಕೆ.ಜಿ. ಆರಂಭಕ್ಕೆ ಕ್ರಮ ಕೈಗೊಳ್ಳಲಾಗಿದೆ. ಒಟ್ಟಾರೆ ತಾಲೂಕಿನಲ್ಲಿ ಶೈಕ್ಷಣಿಕ ಕ್ಷೇತ್ರದ ಸುಧಾರಣೆಗೆ ಪ್ರಥಮಾಧ್ಯತೆ ನೀಡಲಾಗಿದೆ ಎಂದು ಶಾಸಕ ಮಾನೆ ಈ ಸಂದರ್ಭದಲ್ಲಿ ತಿಳಿಸಿದರು.
ಸಮ್ಮಸಗಿ ಗ್ರಾಪಂ ಅಧ್ಯಕ್ಷೆ ಹೇಮಾವತಿ ದೊಡ್ಡಮನಿ, ಸದಸ್ಯರಾದ ಯಲ್ಲಪ್ಪ ಜಿಗಳಿಕೊಪ್ಪ, ಫಕ್ಕೀರ್ಪ ಹರಿಜನ, ಶಿವಾನಂದ ವಡ್ಡರ, ನವೀನ ದೇಶಪಾಂಡೆ, ಕಾರ್ಯದರ್ಶಿ ಶಿವಾನಂದ ಬಾರ್ಕಿ, ಮುಖಂಡರಾದ ಬಸಣ್ಣ ತೊರವಂದ, ಪರಶುರಾಮ ತಳವಾರ, ಮೆಹಬೂಬ್ ಅಲಿ ಹೊಂಡದ, ರಾಜೂ ಗಾಡಗೇರ ಸೇರಿದಂತೆ ಇನ್ನೂ ಹಲವರು ಉಪಸ್ಥಿತರಿದ್ದರು.