ಗದಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಬಿ. ಅಸೂಟಿ ಅವರ ಕಚೇರಿ ಪೂಜಾ ಕಾರ್ಯಕ್ರಮ
ಗದಗ 13: ನಗರದ ಮುಳಗುಂದ ನಾಕಾ ಸಮೀಪದ ಕೆಎಸ್‌ಆರ್‌ಟಿಸಿ ಡಿಪೋ ಎದುರಿನ ಉಪವಿಭಾಗಾಧಿಕಾರಿ ಕಚೇರಿ ಆವರಣದಲ್ಲಿ ಗದಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಬಿ. ಅಸೂಟಿ ಅವರ ಕಚೇರಿ ಪೂಜಾ ಕಾರ್ಯಕ್ರಮ ಏಪ್ರಿಲ್ 15ರಂದು ಬೆಳಗ್ಗೆ 11ಕ್ಕೆ ಜರುಗಲಿದೆ.
ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಕೆ.ಪಾಟೀಲ ಅವರು ಉದ್ಘಾಟಿಸಿ, ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಸಂಸದರಾದ ಬಸವರಾಜ ಬೊಮ್ಮಾಯಿ, ಸರ್ಕಾರಿ ಮುಖ್ಯ ಸಚೇತಕರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹ್ಮದ್, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಎಚ್.ಎಂ. ರೇವಣ್ಣ, ಉಪಾಧ್ಯಕ್ಷರಾದ ಎಸ್.ಆರ್. ಪಾಟೀಲ(ಬ್ಯಾಡಗಿ), ಕರ್ನಾಟಕ ಖನಿಜ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕರಾದ ಜಿ.ಎಸ್. ಪಾಟೀಲ, ಸಂಸದ ಪಿ.ಸಿ. ಗದ್ದಿಗೌಡರ, ವಿಧಾನ ಪರಿಷತ್ ಸದಸ್ಯರಾದ ಎಸ್.ವಿ. ಸಂಕನೂರ, ಪ್ರದೀಪ ಶೆಟ್ಟರ್, ನರಗುಂದ ಶಾಸಕರಾದ ಸಿ.ಸಿ. ಪಾಟೀಲ, ಡಾ. ಚಂದ್ರು ಲಮಾಣಿ, ಗದಗ-ಬೆಟಗೇರಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ್ ಬಬರ್ಚಿ, ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಮಣದೀಪ ಚೌದರಿ ಆಗಮಿಸುವರು.
ಗದಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ನೀಲಮ್ಮ ಬೋಳನವರ, ಹೇಮಂತಗೌಡ ಪಾಟೀಲ, ಶರಣಪ್ಪ ಬೆಟಗೇರಿ, ಪಿ.ಬಿ. ಅಳಗವಾಡಿ, ಪೀಪಕ ಲಮಾಣಿ, ಸದಸ್ಯರಾದ ಅಶೋಕ ಮಂದಾಲಿ, ರೂಪಾ ಅಂಗಡಿ, ಶಿವನಗೌಡ ಪಾಟೀಲ, ಶರೀಫ್ ಬಿಳೆಯಲಿ, ಬಸವರಾಜ ಬೆಳಧಡಿ, ವಿವೇಕ ಯಾವಗಲ್, ದೇವಪ್ಪ ಮೋರನಾಳ, ಪುಲಕೇಶಗೌಡ ಪಾಟೀಲ, ವಿರುಪಾಕ್ಷಪ್ಪ ಯಾರಸಿ, ಈಶಣ್ಣ ಹುಸಿಕಟ್ಟಿ, ರಾಜೀವ ಕುಂಬ, ಗೀತಾ ಬೀರಣ್ಣವರ, ವೀರಯ್ಯ ಮಠಪತಿ, ಫಕ್ರುಸಾಬ್ ಚಿಕ್ಕಮಣ್ಣೂರ ಹಾಗೂ ಆರ್.ಆರ್. ಗಡ್ಡದೇವರಮಠ ಪಾಲ್ಗೊಳ್ಳುವರು. ಜಿಲ್ಲಾಧಿಕಾರಿ ಸಿ.ಎರ್ನ. ಶ್ರೀಧರ್, ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.