ಜಿಲ್ಲೆಯ ಅಧಿಕಾರಿಗಳಿಗೆ ಒಂದು ದಿನದ ಕಾಯರ್ಾಗಾರ

ಬೆಳಗಾವಿ, 19 : ಸಿಗರೇಟ ಸೇವನೆಯಿಂದ ನಮ್ಮ ಆರೋಗ್ಯ ಹಾಳಾಗುವುದಲ್ಲದೆ ಇನ್ನೊಬ್ಬರ ಆರೋಗ್ಯವು ಕೂಡಾ ಹಾಳಾಗುತ್ತದೆ. ನಾವೆಲ್ಲರೊ ಪರೋಕ್ಷವಾಗಿ ತಂಬಾಕು ಸೇವನೆಗೆ ಒಳಗಾಗುತ್ತಿದ್ದೆವೆ ಎಂದು ಬಿಮ್ಸ ಆಸ್ಪತ್ರೆ ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ. ಹುಸೇನಸಾಬ ಖಾಜಿ ಅವರು ಕಾಯರ್ಾಗಾರ ಉದ್ಘಾಟಿಸಿ ಮಾತನಾಡಿದರು.

ರಾಷ್ಟ್ರೀಯ ಆರೋಗ್ಯ ಅಭಿಯಾನ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ,ವಾತರ್ಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಬೆಳಗಾವಿ, ಹಾಗೂ ಮಹಾನಗರ ಪಾಲಿಕೆ,ಸಮಾಜ ಕಲ್ಯಾನ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೆಳಗಾವಿ, ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಬೆಳಗಾವಿ ಇವರ ಸಹಯೋಗದಲ್ಲಿ ಗುರುವಾರ (ಜ.17) ರಂದು ಜಿಲ್ಲೆಯ ವಿವಿದ ಇಲಾಖೆ ಅಧಿಕಾರಿಗಳಿಗೆ " ತಂಬಾಕು  ಹಾಗೂ ತಂಬಾಕಿನಿಂದಾಗುವ ದುಷ್ಪರಿಣಾಮದ" ಬಗ್ಗೆ ಒಂದು ದಿನದ ತರಬೇತಿ ಕಾಯರ್ಾಗಾರ"ವನ್ನು ಜಿಲ್ಲಾ ತರಬೇತಿ ಕೇಂದ್ರ ಬೆಳಗಾವಿ ಜರುಗಿಸಿತು.

ಅತಿಥಿಗಳಾಗಿ ಆಗಮಿಸಿದ ಜಿಲ್ಲಾ ತರಬೇತಿ ಕೇಂದ್ರ ಬೆಳಗಾವಿ ಪ್ರಾಂಶುಪಾಲರಾದ ಡಾ. ಸರೋಜ ತಿಗಡಿ ಇವರು ಮಾತನಾಡುತ್ತಾ ಗಭರ್ಿಣಿ ಮಹಿಳೆಯರು ತಂಬಾಕು ಸೇವನೆ ಮಾಡುವುದರಿಂದ ಮಹಿಳೆಯರಲ್ಲಿ ನಿಜರ್ೀವ ಜನನ, ಅವಧಿ ಪೂರ್ಣ ಜನನ ಹಾಗೂ ಕಡಿಮೆ ತೂಕ ಇರುವ ಮಕ್ಕಳು ಮತ್ತು ಜನನವಾದರು ಅಂಗವಿಕಲತೆಯಾಗಿ ಹುಟ್ಟುವ ಮಕ್ಕಳ ಪ್ರಮಾಣ ಜಾಸ್ತಿಯಾಗಿರುತ್ತದೆ ಎಂದು ತಿಳಿಸಿದರು.  

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಬೆಳಗಾವಿ ಆರ್.ಎಲ್.ಲಾ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಪ್ರೋ. ಡಿ. ವಾಯ್. ಕುಲಕಣರ್ಿ ಅವರು ತಂಬಾಕಿನ ಕಾನೂನು ಅರಿವು ಕೋಟ್ಪಾ-2003ರ ಬಗ್ಗೆ ಸೆಕ್ಷನ್-4ರ ಪ್ರಕಾರ ಸಾರ್ವಜನಿಕ ಸ್ಥಳಗಳಲ್ಲಿ ಕಾನೂನು ಉಲ್ಲಂಘಿಸಿ ಧೂಮಪಾನ ಮಾಡುವ ವ್ಯಕ್ತಿಗಳಿಗೆ 200 ರೂಪಾಯಿ ದಂಡ ವಿಧಿಸಲಾಗುವುದು. ಸೆಕ್ಷನ್-5 ಪ್ರಕಾರ ತಂಬಾಕು ಉತ್ಪನ್ನಗಳ ನೇರ ಹಾಗೂ ಪರೋಕ್ಷ ಜಾಹೀರಾತು ನಿಷೇದ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಸೆಕ್ಷನ್-6ರ ಪ್ರಕಾರ  ತಂಬಾಕು ಉತ್ಪನ್ನಗಳ ಅಪ್ರಾಪ್ತ ವಯಸ್ಕರಿಗೆ ನಿಯಂತ್ರಣ ಮಾಡುವುದು ಹಾಗೂ ಸೆಕ್ಷನ್ -6(ಬಿ)  ಪ್ರಕಾರ ಶಿಕ್ಷಣ ಸಂಸ್ಥೆಗಳ 100 ಮೀಟರ ಒಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ. ಸೆಕ್ಷನ್-7ರ ಪ್ರಕಾರ ಸಿಗರೇಟ ಮತ್ತು ಇತರ ತಂಬಾಕು ಉತ್ಪನ್ನಗಳ ಮೇಲೆ ನಿದರ್ಿಷ್ಟ ಆರೋಗ್ಯ ಎಚ್ಚರಿಕೆಗಳ ಸಂದೇಶಗಳಿಲ್ಲದೆ ಮಾರಾಟ ಮಾಡುವುದು ಅಪರಾಧವಾಗಿದೆ ಎಂದು ಹೇಳಿದರು.

       ಅಧ್ಯಕ್ಷತೆ ವಹಿಸಿದ ಜಿಲ್ಲಾ ಸಮೀಕ್ಷಣಾಧಿಕಾರಿಗಳು ಹಾಗೂ ತಂಬಾಕು ನಿಯಂತ್ರಣಾಧಿಕಾರಿಗಳಾದ ಡಾ. ಬಿ. ಎನ್ ತುಕ್ಕಾರ ಅವರು ತಂಬಾಕು ಹಾಗೂ ತಂಬಾಕಿನ ಉತ್ಪನ್ನಗಳಿಂದ ಮನುಷ್ಯನ ಆರೋಗ್ಯದ ಮೇಲೆ ಹಲುವಾರು ರೀತಿಯ ದುಷ್ಪರಿಣಾಮ ಬಿರುತ್ತಿವೆ ಹಾಗೂ ತಂಬಾಕಿನಲ್ಲಿ ವಿವಿಧ ರೀತಿಯ ರಾಸಾಯನಿಕ ಅಂಶಗಳಿರುತ್ತವೆ ಹೀಗಾಗಿ ಸಾರ್ವನಿಕರು ತಂಬಾಕು ಸೇವನೆ ತ್ಯಜಿಸಬೇಕು ಎಂದು ಕರೆ ನೀಡಿದರು. ಈ ಕಾಯರ್ಾಗಾರದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಸಮಾಜ ಕಾರ್ಯಕತರ್ೆಯಾದ ಕವಿತಾ ರಾಜನ್ನವರ ನಿರೂಪಿಸಿದರು. ಹಾಗೂ ಜಿಲ್ಲಾ ಸಲಹೆಗಾರರು ಶ್ವೇತಾ ಪಾಟೀಲ ವಂದಿಸಿದರು.