ಪೇಶಾವರ್ 30: ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಇಮ್ರಾನ್ ಖಾನ್ ಆಗಸ್ಟ್ 11ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಆಗಸ್ಟ್ 14ರ ಮೊದಲು ಇಮ್ರಾನ್ ಖಾನ್ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಈ ಮೊದಲು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಪಾಕಿಸ್ತಾನ ತೆಹ್ರೀಕ್ ಇ ಇನ್ಸಾಫ್ ಸಂಸ್ಥಾಪಕ ಇಮ್ರಾನ್ ಖಾನ್ ಪಕ್ಷ ಪಾಕಿಸ್ತಾನ ಚುನಾವಣೆಯಲ್ಲಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆದರೆ ಸಕರ್ಾರ ರಚಿಸಲು ಬೇಕಾದಷ್ಟು ಬಹುಮತ ಸಿಕ್ಕಿರಲಿಲ್ಲವಾಗಿತ್ತು.
ಚುನಾವಣೆಯಲ್ಲಿ ಗೆಲುವು ಸಾಧಿಸಿದ ಸಣ್ಣ ಪಕ್ಷಗಳು ಹಾಗೂ ಪಕ್ಷೇತರರ ನೆರವಿನೊಂದಿಗೆ ಸಕರ್ಾರ ರಚಿಸುವುದಾಗಿ ಪಿಟಿಐ(ಪಾಕಿಸ್ತಾನ ತೆಹ್ರೀಕ್ ಇ ಇನ್ಸಾಫ್) ಪಕ್ಷ ಘೋಷಿಸಿತ್ತು. ಆಗಸ್ಟ್ 11ರಂದು ಖಾನ್ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸವುದಾಗಿ ತಿಳಿಸಿದ್ದಾರೆಂದು ರೇಡಿಯೋ ಪಾಕಿಸ್ತಾನ್ ವಿವರಿಸಿದೆ.