ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ

ಬೆಂಗಳೂರು, ಫೆ. 26, ಪಾಕ್ ಪರ ಘೋಷಣೆ ಕೂಗಿದ್ದ ಅಮೂಲ್ಯ ಲಿಯಾನ್ಳನ್ನು ನ್ಯಾಯಾಲಯ ನಾಲ್ಕು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿದೆ.ಇತ್ತೀಚೆಗೆ ಫ್ರೀಡಂ ಪಾರ್ಕ್ನಲ್ಲಿ ನಡೆದ ಸಿಎಎ ವಿರೋಧಿ ಸಮಾವೇಶದಲ್ಲಿ 'ಪಾಕಿಸ್ತಾನ್ ಜಿಂದಾಬಾದ್' ಎಂದಿದ್ದ ಅಮೂಲ್ಯಳನ್ನು ಉಪ್ಪಾರಪೇಟೆ ಪೊಲೀಸರು ವಶಕ್ಕೆ ಪಡೆದು, ರಾತ್ರೋರಾತ್ರಿ ನ್ಯಾಯಾಧೀಶರ ಎದುರು  ಹಾಜರುಪಡಿಸಿದ್ದರು. ಆಕೆಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಇದೀಗ ಈ  ಪ್ರಕರಣದ ಬಗ್ಗೆ ಹೆಚ್ಚಿನ ವಿಚಾರಣೆಗಾಗಿ ಆಕೆಯನ್ನು 4 ದಿನಗಳ ಕಾಲ ಪೊಲೀಸರ ವಶಕ್ಕೆ  ನೀಡಲಾಗಿದೆ. ನ್ಯಾಯಾಂಗ ಬಂಧನದಲ್ಲಿರುವ ಅಮೂಲ್ಯಳನ್ನು ಮಂಗಳವಾರ ರಾತ್ರಿ 8  ಗಂಟೆಗೆ 5ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ನಂತರ ಆಕೆಯನ್ನು  ಆಕೆಯನ್ನು 4 ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಲಾಗಿದೆ.