ಹಾವೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಮತ್ತು ತಾಲೂಕು ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘಗಳ ಆಶ್ರಯದಲ್ಲಿ ರವಿವಾರ ಆಯೋಜಿಸಲಾದ ಮಹರ್ಷಿ ವಾಲ್ಮೀಕಿ ಭಾವಚಿತ್ರ ಮೆರವಣಿಗೆ ಶಾಸಕರಾದ ನೆಹರು ಓಲೇಕಾರ ಅವರು ಚಾಲನೆ ನೀಡಿದರು.
ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ಜಗ್ಗಲಿಗೆ ಬಾರಿಸುವ ದೃಶ್ಯ ಸಾರ್ವಜನಿಕ ಗಮನ ಸೆಳೆಯಿತು. ಮೆರವಣಿಗೆಯಲ್ಲಿ ಜಗ್ಗಲಿಗೆ ಹಾಗೂ ಡೊಳ್ಳು ಕುಣಿತ ತಂಡಗಳು, ವಿವಿಧ ಸ್ತಬ್ದ ಚಿತ್ರಗಳು , ಮಹಿಳಾ ಡೊಳ್ಳು ಕುಣಿತ ತಂಡ ನೋಡುಗರ ಮನಸೂರುಗೊಂಡವು. ನಗರದ ಪ್ರಮುಖ ಬೀದಿಗಳ ಮೂಲಕ ಸಂಚರಿಸಿದ ಆಕರ್ಷಕ ಮೆರವಣಿಗೆ ಕೆ.ಇ.ಬಿ.ಸಭಾಭವನ ತಲುಪಿತು.
ಹುಕ್ಕೇರಿಮಠದ ಸದಾಶಿವ ಮಹಾಸ್ವಾಮಿಗಳು, ಜಿ.ಪಂ.ಸದಸ್ಯ ಕೊಟ್ರೇಶಪ್ಪ ಬಸೇಗಣ್ಣಿ, ಜಿಲ್ಲಾ ಪೊಲೀಸ್ ವರಿಷ್ಠ್ಠಾಧಿಕಾರಿ ಕೆ.ಜಿ.ದೇವರಾಜ್, ಅಪರ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾಜರ್ುನ ಬಾಲದಂಡಿ, ಜಿಲ್ಲಾ ಪಂಚಯಾತಿ ಸಹಾಯಕ ಕಾರ್ಯದಶರ್ಿ ಜಾಫರ್ ಸುತಾರ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿದರ್ೆಶಕ ಅಂದಾನೆಪ್ಪ ವಡಗೇರಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ರಾಜು ಕೂಲೇರ, ವಾಲ್ಮೀಕಿ ಸಂಘದ ಜಿಲ್ಲಾ ಅಧ್ಯಕ್ಷ ರಮೇಶ ಆನವಟ್ಟಿ ಸೇರಿದಂತೆ ಸಮಾಜದ ಮುಖಂಡರು ಭಾಗವಹಿಸಿದ್ದರು.