ಕೊಪ್ಪಳ 08: ಕೃಷಿ ಇಲಾಖೆಯಿಂದ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಅಗತ್ಯ ಪೂರ್ವಸಿದ್ಧತೆ ಕೈಗೊಳ್ಳಲಾಗಿದೆ ಕೊಪ್ಪಳ ಜಂಟಿ ಕೃಷಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪ ಅವರು ತಿಳಿಸಿದ್ದಾರೆ.
ಈ ವರ್ಷದ ಮುಂಗಾರು ಹಂಗಾಮಿಗಾಗಿ ಕೃಷಿ ಇಲಾಖೆಯು ಪೂರ್ವಸಿದ್ಧತೆ ಕೈಗೊಂಡಿದ್ದು, ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಪೂರೈಕೆಯ ನಿಟ್ಟಿನಲ್ಲಿ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಗುಣನಿಯಂತ್ರಣ ಸಪ್ತಾಹವನ್ನು ಮೇ 5 ರಿಂದ ಮೇ 9ರ ವರೆಗೆ ಆಚರಿಸಲಾಗುತ್ತಿದೆ. ಈ ಸಪ್ತಾಹದ ಅಂಗವಾಗಿ ಉಪ ಕೃಷಿ ನಿರ್ದೇಶಕರು-1 ಅವರ ನೇತೃತ್ವದಲ್ಲಿ ತಂಡಗಳನ್ನು ರಚಿಸಿ, ಸಹಾಯಕ ಕೃಷಿ ನಿರ್ದೇಶಕರು, ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಮಾರಾಟ ಮಳಿಗೆಗಳಿಗೆ ತಪಾಸಣೆ ನಡೆಸುತ್ತಿದ್ದಾರೆ.
ಈ ವರೆಗೆ 159 ಮಳಿಗೆಗಳಿಗೆ ಭೇಟಿ ನೀಡಲಾಗಿದ್ದು, 79 ಬೀಜ ಮಾದರಿಗಳು, 123 ರಸಗೊಬ್ಬರ ಮಾದರಿಗಳು ಮತ್ತು 67 ಕೀಟನಾಶಕ ಮಾದರಿಗಳನ್ನು ತೆಗೆದು ಗುಣಮಟ್ಟ ಪರೀಶೀಲನೆಗಾಗಿ ಪ್ರಯೋಗಾಲಯಗಳಿಗೆ ಕಳುಹಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.