ಮತಗಟ್ಟೆ ಸುತ್ತ ಪ್ರತಿಬಂಧಕಾಜ್ಞೆ: ಜಿಲ್ಲಾಧಿಕಾರಿ

ಹಾವೇರಿ: ವಿಧಾನಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯ ಹಿರೇಕೆರೂರು ಮತ್ತು ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರಗಳಿಗೆ ಡಿಸೆಂಬರ್ 5 ರಂದು ಮತದಾನ ಜರುಗಲಿದೆ. ಮತದಾನ ಪೂರ್ವ  ಡಿ. 3ರ ಸಂಜೆ 6 ಗಂಟೆಯಿಂದ ಡಿ. 5ರ ಸಂಜೆ 6 ಗಂಟೆವರೆಗೆ ಸಿ. ಆರ್.ಪಿ.ಸಿ. 1973ರ ಕಲಂ 144ರ ಮೇರೆಗೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ. ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆಬೀಳಲಿದೆ ಎಂದು  ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೃಷ್ಣ ಬಾಜಪೇಯಿ ಅವರು ಆದೇಶ ಹೊರಡಿಸಿದ್ದಾರೆ.

 ಕ್ಷೇತ್ರದ ಹೊರಗಿನ ವ್ಯಕ್ತಿಗಳಿಗೆ ಅವಕಾಶವಿಲ್ಲ: ಹಿರೇಕೆರೂರು ಮತ್ತು ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರಗಳ ಮತಗಟ್ಟೆಗಳ ಸುತ್ತ 100 ಮೀಟರ್ ಅಂತರದಲ್ಲಿ ಪ್ರಚಾರದ ಸಲುವಾಗಿ ಐದು ಅಥವಾ ಐದಕ್ಕಿಂತ ಹೆಚ್ಚು ಜನರು ಗುಂಪು ಕೂಡುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಲಾಗಿದೆ.

ಮತಗಟ್ಟೆಗಳ ಸುತ್ತ 100 ಮೀಟರ್ ಅಂತರದಲ್ಲಿ ಮೊಬೈಲ್ ಪೋನ್, ಕಾಡ್ಲರ್ೇಸ್ ಫೋನ್ ಅಥವಾ ಇನ್ನಿತರೆ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ಒಯ್ಯುವುದನ್ನು  ನಿಷೇಧಿಸಲಾಗಿದೆ(ಚುನಾವಣಾ ಕಾರ್ಯದಲ್ಲಿ ನಿರತರಾದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹೊರತುಪಡಿಸಿ). ಮತಗಟ್ಟೆ ಸುತ್ತ 100 ಮೀಟರ್ ಪರಿಮಿತಿಯಲ್ಲಿ ಪ್ರಚಾರಕ್ಕೆ ಸಂಬಂಧಿಸಿದ ಪೋಸ್ಟರ್, ಬ್ಯಾರ್ ಅಥವಾ ಇನ್ನಾವುದೇ ವಸ್ತುಗಳನ್ನು ಬಳಸುವಂತಿಲ್ಲ. 

ಜಿಲ್ಲೆಯಾದ್ಯಂತ ಪ್ರತಿಬಂಧಕಾಜ್ಞೆ ಅಧಿಯಲ್ಲಿ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ. ಬಹಿರಂಗ ಪ್ರಚಾರ ಡಿಸೆಂಬರ್ 3 ರ ಸಂಜೆ 6 ಕ್ಕೆ ಮುಕ್ತಾಗೊಳ್ಳಲಿದ್ದು, ರಾಣೇಬೆನ್ನೂರು ಮತ್ತು ಹಿರೇಕೆರೂರು ವಿಧಾನಸಭಾ ಕ್ಷೇತ್ರಗಳ ಮತದಾರರಲ್ಲದವರು ಈ ಎರಡು ಕ್ಷೇತ್ರಗಳ ವ್ಯಾಪ್ತಿಯಿಂದ ಹೊರಗಡೆ ಹೋಗಲು ಆದೇಶಿಸಲಾಗಿದೆ.

ಗಡಿಭಾಗದಲ್ಲಿ ಕಟ್ಟೆಚ್ಚರ: ಜಿಲ್ಲೆಯ ಗಡಿ ಪ್ರದೇಶಗಳಲ್ಲಿ ಇರುವ ಚೆಕ್ ಪೋಸ್ಟ್ಗಳಲ್ಲಿ ಹೊರಗಿನ ಜಿಲ್ಲೆಯಿಂದ ಬರುವ ಎಲ್ಲಾ ರೀತಿಯ ವಾಹನಗಳನ್ನು ಕಡ್ಡಾಯವಾಗಿ ಸೂಕ್ಷ್ಮವಾಗಿ ಪರಿಶೀಲಿಸಲು ಆದೇಶಿಸಲಾಗಿದೆ.

ವಿಧಾನಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯ ಹಿರೇಕೆರೂರು ಮತ್ತು ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರಗಳಿಗೆ ಡಿಸೆಂಬರ್ 5 ರಂದು ಮತದಾನ ಜರುಗಲಿದೆ.  ಡಿಸೆಂಬರ್ 3ರ ಸಂಜೆ 6 ಗಂಟೆಯಿಂದ ಡಿಸೆಂಬರ್ 5ರ ಮಧ್ಯರಾತ್ರಿ 12 ಗಂಟೆವರೆಗೆ ಜಿಲ್ಲೆಯ ಗಡಿ ಭಾಗದ ವಿವಿಧ ಪ್ರದೇಶಗಳಲ್ಲಿ  ಮದ್ಯಮಾರಾಟ ಹಾಗೂ ಮದ್ಯಪಾನ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೃಷ್ಣ ಬಾಜಪೇಯಿ ಅವರು ಆದೇಶ ಹೊರಡಿಸಿದ್ದಾರೆ.

ಧಾವರಾಡ ಜಿಲ್ಲೆಯ ವರೂರು ಗ್ರಾಮ ಹಾಗೂ ಹಾವೇರಿ ಜಿಲ್ಲೆಗೆ ಹೊಂದಿರಿರುವ ಇತರೆ ಗ್ರಾಮಗಳು, ಬಳ್ಳಾರಿ ಜಿಲ್ಲೆಯ ಹೊಳಲು ಮತ್ತು ಹಾವೇರಿ ಜಿಲ್ಲೆಗೆ ಹೊಂದಿಕೊಂಡಿರುವ ಇತರೆ ಗ್ರಾಮಗಳ ವ್ಯಾಪ್ತಿಯಲ್ಲಿ , ದಾವಣಗೆರೆ ಜಿಲ್ಲೆಯ ಹರಿಹರ ನಗರಸಭೆ ವ್ಯಾಪ್ತಿಯಲ್ಲಿ 5 ಕಿ.ಮೀ., ಹೊನ್ನಾಳಿ ಪಟ್ಟಣ, ರಾಣೇಬೆನ್ನೂರು ಮತ್ತು ಹಿರೇಕೆರೂರು ಕ್ಷೇತ್ರಕ್ಕೆ ಹೊಂದಿಕೊಂಡಿರುವ ದಾವಣಗೆರೆ ಜಿಲ್ಲೆಯ ಇತರೆ ಗ್ರಾಮಗಳ ವ್ಯಾಪ್ತಿಯಲ್ಲಿ, ಹಾವೇರಿ ಜಿಲ್ಲೆಗೆ ಹೊಂದಿಕೊಂಡಿರುವ ಶಿವಮೊಗ್ಗ ಜಿಲ್ಲೆಯ ಗಡಿ ಗ್ರಾಮಗಳ ಹಾಗೂ ಜಿಲ್ಲಾ ಗಡಿಯಿಂದ ಹತ್ತಿರವಿರುವ ಸನ್ನದುಗಳ ವ್ಯಾಪ್ತಿಯಲ್ಲಿ ಈ ಆದೇಶ ಜಾರಿಯಲ್ಲಿರುತ್ತದೆ ಎಂದು ತಿಳಿಸಿದ್ದಾರೆ.

  ಜಾಹೀರಾತಿಗೆ ಪೂವರ್ಾನುಮತಿ ಕಡ್ಡಾಯ: ಮತದಾನ ಪೂರ್ವ ಮಾರ್ಗಸೂಚಿ ಪಾಲಿಸಲು ವಿದ್ಯುನ್ಮಾನ ಮತ್ತು ಪತ್ರಿಕಾ ಮಾಧ್ಯಮಗಳಿಗೆ ಸೂಚಿಸಲಾಗಿದೆ. ಡಿಸೆಂಬರ್ 4 ಹಾಗೂ 5 ರಂದು ಅಭ್ಯಥರ್ಿಗಳು ಅಥವಾ ಸಂಸ್ಥೆಗಳು ಯಾವುದೇ ವ್ಯಕ್ತಿಯು ದಿನಪತ್ರಿಕೆಗಳಲ್ಲಿ ಯಾವುದೇ ರೀತಿಯ ಜಾಹೀರಾತು ಪ್ರಕಟಿಸಬೇಕಾದರೆ ಆ ಜಾಹೀರಾತಿಗೆ ಜಿಲ್ಲಾ ಮಟ್ಟದ  ಮಾಧ್ಯಮ ಪ್ರಮಾಣೀಕರಣ ಹಾಗೂ  ಕಣ್ಗಾವಲು ಸಮಿತಿಯ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಪ್ರಕಟಿಸಬೇಕಾದ ಜಾಹೀರಾತಿನ ಎರಡು ಸ್ವಯಂ ದೃಢೀಕೃತ ಪ್ರತಿಯೊಂದಿಗೆ ನಿಗಧಿತ ಅಜರ್ಿ ನಮೂನೆಯನ್ನು ಡಿಸೆಂಬರ್ 2ರೊಳಗೆ ಎಂ.ಸಿ.ಎಂ.ಸಿ ಸಮಿತಿಗೆ ಸಲ್ಲಿಸಿ ಪೂವರ್ಾನುಮತಿ ಪಡೆಯಬೇಕು. 

ಟಿವಿ, ರೇಡಿಯೋ, ಕೇಬಲ್ ನೆಟ್ ವಕರ್್ ಎಲ್ಲ ಡಿಜಿಟಲ್ ಮಾಧ್ಯಮಗಳಲ್ಲಿ  ಸೇರಿದಂತೆ ಇಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ಮತದಾನಕ್ಕೆ ನಿಗದಿಪಡಿಸಿದ ಅವಧಿ ಕೊನೆಗೊಳ್ಳುವ 48 ಗಂಟೆ ಮುಂಚಿತವಾಗಿ ಚುನಾವಣೆ ಸಂಬಂಧಿಸಿದ ವಿಷಯಗಳ ಪ್ರಸಾರವನ್ನು ಪ್ರಜಾಪ್ರತಿನಿಧಿ ಕಾಯ್ದೆ 1951ರ ಕಲಂ 126ರ ಪ್ರಕಾರ ನಿಷೇಧಿಸಲಾಗಿದೆ. ಚುನಾವಣೆ ಫಲಿತಾಂಶ ಮೇಲೆ ಪ್ರಭಾವ ಅಥವಾ ಪರಿಣಾಮ ಬೀರುವ ವಿಷಯಗಳನ್ನು ಬಿತ್ತರಿಸಬಾರದು. ಕಾಯ್ದೆಯನ್ನು ಉಲ್ಲಂಘಿಸಿದವರಿಗೆ ಎರಡು ವರ್ಷದವರೆಗೆ ವಿಸ್ತರಿಸಬಹುದಾಗದ ಕಾರಾಗೃಹ ಶಿಕ್ಷೆ ಅಥವಾ ದಂಡ  ಅಥವಾ ಎರಡನ್ನು ವಿಧಿಸಬಹುದಾಗಿದೆ.  ಡಿಸೆಂಬರ್ 5 ರಂದು ಮತದಾನ ಜರುಗುವುದರಿಂದ ಡಿಸೆಂಬರ್ 3ರ ಸಂಜೆ  6ಗಂಟೆಯಿಂದ  ಇಸೆಂಬರ್ 5ರ ಸಂಜೆ 6-30ರವರೆಗೆ ಚುನಾವಣೆ ಸಂಬಂಧಿಸಿದ ಚಚರ್ೆ, ವಿಶ್ಲೇಷಣೆ, ಚುನಾವಣೋತ್ತರ ಸಮೀಕ್ಷೆ ಒಳಗೊಂಡಂತೆ ಫಲಿತಾಂಶದ ಪ್ರಭಾವ ಬೀರುವಂತೆ ಸಮೀಕ್ಷೆ ಪ್ರಸಾರ ಮಾಡದಂತೆ ಆಯೋಗ ಮಾರ್ಗಸೂಚಿ ಹೊರಡಿಸಿದೆ.