ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಏಪ್ರಿಲ್ 13ರಂದು ಪ್ರತಿಭಟನೆ

Protest against central government on April 13, condemning price hike

ಗದಗ 12 : ಗ್ಯಾಸ್, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಏ. 13ರಂದು ರವಿವಾರ ಬೆಳಗ್ಗೆ 10ಕ್ಕೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. 

ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೃಷ್ಣಗೌಡ ಎಚ್‌. ಪಾಟೀಲ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದ್ದು, ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಅಕ್ಷಯ ಪಾಟೀಲ ಪಾಲ್ಗೊಳ್ಳುವರು.  

ಕಾರಣ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪಕ್ಷದ ಮಾಜಿ ಹಾಗೂ ಹಾಲಿ ಶಾಸಕರು, ಪಕ್ಷದ ಜಿಲ್ಲಾ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾ ಪಂಚಾಯತ್, ತಾಲೂಕ ಪಂಚಾಯತ, ಗ್ರಾಮ ಪಂಚಾಯತ, ಎಪಿಎಂಸಿ ಪಕ್ಷದ ಅಧ್ಯಕ್ಷರು, ಸದಸ್ಯರು, ಹಾಗೂ ನಗರಸಭೆ, ಪಟ್ಟಣ ಪಂಚಾಯ್ತಿ ಪುರಸಭೆ ಅಧ್ಯಕ್ಷರು ಹಾಗೂ ಸದಸ್ಯರು, ಮಹಿಳಾ ಕಾಂಗ್ರೆಸ್, ಯುವ ಕಾಂಗ್ರೆಸ್, ಎಸ್‌ಸಿ/ಎಸ್‌ಟಿ, ಅಲ್ಪಸಂಖ್ಯಾತರ, ವಿದ್ಯಾರ್ಥಿ ಕಾಂಗ್ರೆಸ್, ಕಾಂಗ್ರೆಸ್ ಸೇವಾದಳ, ಹಿಂದುಳಿದ ವರ್ಗ, ಸಾಮಾಜಿಕ ಜಾಲತಾಣ, ರಾಜೀವಗಾಂಧಿ ಪಂಚಾಯತ ಸಂಘಟನೆ, ಮಾಜಿ ಸೈನಿಕರ ವಿಭಾಗ, ಮೀನುಗಾರ ವಿಭಾಗ, ಕಾರ್ಮಿಕರ ವಿಭಾಗ, ಐಎನ್‌ಟಿಯುಸಿ, ಕಾನೂನು ಮತ್ತು ಮಾನವ ಹಕ್ಕು ವಿಭಾಗ, ಕಿಸಾನ್ ಮತ್ತು ಖೆತ್ ಮಜದೂರ ವಿಭಾಗ, ಮಾಜಿ ಸೈನಿಕರ ವಿಭಾಗ, ವೈದ್ಯರ ವಿಭಾಗ, ವೃತ್ತಿಪರ ವಿಭಾಗ, ಪದವಿಧರ ಹಾಗೂ ಶಿಕ್ಷಕರ ವಿಭಾಗ, ನೀತಿ ಮತ್ತು ಸಂಶೋಧನೆ ತರಬೇತಿ ವಿಭಾಗ, ವಿಕಲಚೇತನರ ವಿಭಾಗ, ಲಿಗಲ್ ರೀಪಾರ್ಮ್ಸ್‌ ವಿಭಾಗ, ಐ,ಟಿ, ಮತ್ತು ಡಾಟಾ ವಿಭಾಗ, ಮಾಧ್ಯಮ ಮತ್ತು ಸಂಪರ್ಕ ಇಲಾಖೆ ವಿಭಾಗ, ಅಧ್ಯಕ್ಷರು ಹಾಗೂ ಸದಸ್ಯರು, ಪಕ್ಷದ ಅಭಿಮಾನಿಗಳು ಪಾಲ್ಗೊಳ್ಳಬೇಕು ಎಂದು ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ   ವಿನಂತಿದೆ.