ಕೊಪ್ಪಳ 20 : ರಾಜ್ಯ ಸರ್ಕಾರದ ಸಮರ್ಣ ಸಂಕಲ್ಪ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಕೇಂದ್ರ ಸರ್ಕಾರದ ವಿರೋಧ ಪಕ್ಷದ ನಾಯಕ ಕಾಂಗ್ರೆಸ್ ಪಕ್ಷದ ವರಿಷ್ಠ ರಾಹುಲ್ ಗಾಂಧಿ ಅವರನ್ನು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಜಮೀರ್ ಅಹ್ಮದ್ ಖಾನ್ ರವರು ಹೊಸಪೇಟೆಯಲ್ಲಿ ಮಂಗಳವಾರದಂದು ಆತ್ಮೀಯವಾಗಿ ಸ್ವಾಗತಿಸಿ ಅವರನ್ನು ಸನ್ಮಾನಿಸಿ ಬರಮಾಡಿಕೊಂಡರು.
ಇದೆ ವೇಳೆ ತಾಂಡ ನಿವಾಸಿಗಳಿಗೆ ಅವರು ಹಕ್ಕುಪತ್ರ ವಿತರಣೆ ಮಾಡಿದರು ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸೇರಿದಂತೆ ರಾಜ್ಯ ಉಸ್ತುವಾರಿ ಎಐಸಿಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ವಿಜಯನಗರ ಶಾಸಕ ಎಚ್ ಆರ್ ಗವಿಯಪ್ಪ, ಅಲ್ಲದೆ ಅನೇಕ ಗಣ್ಯರು ಸಚಿವರು ಜನಪ್ರತಿನಿಧಿಗಳು ಪಾಲ್ಗೊಂಡಿದ್ದರು