ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿ: ಬಸವ ಜಯಮೃತ್ಯುಂಜಯ ಮಹಾಸ್ವಾಮಿಜಿಗೆ ಗೌರವ ಸನ್ಮಾನ
ಹುಬ್ಬಳ್ಳಿ 10: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಅನುಷ್ಠಾನ ಹಾಗೂ ಲಿಂಗಾಯತ ಉಪ ಸಮಾಜಗಳನ್ನು ಕೇಂದ್ರ ಸರ್ಕಾರದ ಒಬಿಸಿ ಮೀಸಲಾತಿಗೆ ಬೃಹತ್ರಾ್ಯಲಿ, ಧರಣಿ ಸತ್ಯಾಗ್ರಹ, ಹೊರಾಟಗಳ ಮೂಲಕ ನಿರಂತರ ಪಂಚಮಸಾಲಿ ಸಮಾಜದ ಸಂಘಟನೆ, ಬಡ ಮಕ್ಕಳ ಶಿಕ್ಷಣ, ಉದ್ಯೋಗದಲ್ಲಿ ಮಿಸಲಾತಿ ಸಿಗಲಿ ಎಂಬ ಮಹೋನ್ನತ ಉದ್ಧೇಶ ಹೊಂದಿರುವ ಪಾದಯಾತ್ರೆಯ ಪ್ರವರ್ತಕ-ಮೀಸಲಾತಿಯ ಕ್ರಾಂತಿಯೋಗಿ ಧರ್ಮಕ್ಷೇತ್ರ ಕೂಡಲಸಂಗಮ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠದ ಪ್ರಥಮ ಜಗದ್ಗುರು ಶ್ರೀ ಬಸವ ಜಯಮೃತ್ಯುಂಜಯ ಮಹಾಸ್ವಾಮಿಜಿಯವರು ಹುಬ್ಬಳ್ಳಿಗೆ ಆಗಮಿಸಿದಾಗ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಗೌರವ ಸನ್ಮಾನ ಕಾರ್ಯಕ್ರಮದಲ್ಲಿ ಪಂಚಮಸಾಲಿ ಜಗದ್ಗುರು ಮಹಾಪೀಠದ ಪ್ರಥಮಜಗದ್ಗುರು ಶ್ರೀ ಬಸವ ಜಯಮೃತ್ಯುಂಜಯ ಮಹಾಸ್ವಾಮಿಜಿಅವರಿಗೆಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಸದಸ್ಯರು ಮಾಲಾರೆ್ಣ ಮಾಡಿಗೌರವಾರೆ್ಣಜೊತೆಗೆದರ್ಶನ ಆಶೀರ್ವಾದ ಪಡೆದರು. ಭಕ್ತಿ ಪೂರ್ವಕ ಪ್ರಣಾಮಗಳನ್ನು ಹಾಗೂ ಅಭಿನಂದನೆಗಳನ್ನು ಸಲ್ಲಿಸಿದರು.ಸ್ವಾಮಿಜಿಯವರುಕೈಗೊಂಡ ಹೊರಾಟ ಯಶಸ್ವಿಯಾಗಲಿ ಎಂದು ಶುಭಕೋರಿದರು.ದಯಾಘನನಾದ ಪರಮಾತ್ಮನುಅವರಿಗೆಉತ್ತಮಆರೋಗ್ಯಭಾಗ್ಯಕೊಟ್ಟುಕಾಪಾಡಲಿ ಎಂದು ಪ್ರಾರ್ಥಿಸಿದ್ದಾರೆ. ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ‌್ಯದರ್ಶಿ, ಕರ್ನಾಟಕಜ್ಞಾನ ವಿಜ್ಞಾನ ಸಮಿತಿಯಜಿಲ್ಲಾಘಟಕದಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್‌ನಜಿಲ್ಲಾಘಟಕದಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕಡಾ. ಸುರೇಶ ಡಿ. ಹೊರಕೇರಿ, ಶಿವಾನಂದ ಬೆಂಗೇರಿ, ಎಚ್.ಎಸ್.ರಾಮನಗೌಡರ, ಬಸವರರಾಜ ಬಳಿಗಾರ, ಕೊಟ್ರೇಶ, ಕಿಶೋರ ಶಿರಸಂಗಿ, ಈಶ್ವರ, ಸಮಾಜದ ಮುಖಂಡರು ಭಾಗವಹಿಸಿದ್ದರು.