ಮಹಾ ಡಿಜಿಪಿಯಾಗಿ ರಶ್ಮಿ ಶುಕ್ಲಾ ಮರುನೇಮಕ

ಡಿಜಿಪಿ ರಶ್ಮಿ ಶುಕ್ಲಾ

ಮಹಾರಾಷ್ಟ್ರ 26: ವಿಧಾನಸಭಾ ಚುನಾವಣೆ ಮುಗಿದ ನಂತರ ಮಹಾರಾಷ್ಟ್ರ ಸರ್ಕಾರವು ಐಪಿಎಸ್ ಅಧಿಕಾರಿ ರಶ್ಮಿ ಶುಕ್ಲಾ ಅವರನ್ನು ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಆಗಿ ಮರುನೇಮಕಗೊಳಿಸಿದೆ ಎಂದು ರಾಜ್ಯ ಗೃಹ ಇಲಾಖೆ ಸೋಮವಾರ ಸಂಜೆ ಆದೇಶ ಹೊರಡಿಸಿದೆ.

ಚುನಾವಣೆಗೆ ಮುನ್ನ ಭಾರತೀಯ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಶುಕ್ಲಾ ಅವರನ್ನು ಡಿಜಿಪಿ ಹುದ್ದೆಯಿಂದ ವಜಾಗೊಳಿಸಿದ ನಂತರ ಸಂಜಯ್ ಕುಮಾರ್ ವರ್ಮಾ ಅವರು ಈ ಹಿಂದೆ ರಾಜ್ಯದ ಉನ್ನತ ಪೊಲೀಸ್ ಅಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.