ಹಾವೇರಿ14: ಜಿಲ್ಲೆಗೆ ವೈದ್ಯಕೀಯ ಕಾಲೇಜು ಮಂಜೂರಾಗಿದ್ದು, ಶೀಘ್ರದಲ್ಲಿಯೇ ಕಟ್ಟಡ ಕಾಮಗಾರಿಗೆ ಮುಖ್ಯಮಂತ್ರಿಗಳಿಂದ ಅಡಿಗಲ್ಲು ಕಾರ್ಯಕ್ರಮ ಜರುಗಲಿದೆ ಎಂದು ಗೃಹ ಮತ್ತು ಸಹಕಾರಿ ಖಾತೆ ಸಚಿವರು ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದ ಕೆ.ಇ.ಬಿ. ಸಭಾಭವನದಲ್ಲಿ ರವಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಮತ್ತು ತಾಲೂಕು ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘಗಳ ಆಶ್ರಯದಲ್ಲಿ ಜರುಗಿದ ಮಹಷರ್ಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ, ಮಹಷರ್ಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.
ಕೇಂದ್ರದ ಶೇ.60 ಮತ್ತು ರಾಜ್ಯದ ಶೇ.40ರ ಅನುದಾನದಲ್ಲಿ ಮೆಡಿಕಲ್ ಕಾಲೇಜು ನಿಮರ್ಾಣವಾಗಲಿದೆ. ಅದರಂತೆ ವಾಲ್ಮೀಕಿ ಭವನ ಕಾಮಗಾರಿ ಪೂರ್ಣವಾಗಲು ಅಗತ್ಯ ಅನುದಾನ ಒದಗಿಸಿ ಸೀಮಿತ ಸಮಯದಲ್ಲಿ ಸಂಪೂರ್ಣಗೊಳಿಸಲಾಗುವುದು. ರಾಜ್ಯದಲ್ಲಿ ಎಸ್.ಟಿ.ಜನಾಂಗಕ್ಕೆ 7.5 ಮೀಸಲಾತಿಯನ್ನು ಒದಗಿಸುವ ನಿಟ್ಟಿನಲ್ಲಿ ಪ್ರಯತ್ನಮಾಡಲಾಗುವುದು. ಸಮಾಜದ ಬದಲಾವಣೆಯ ಹರಿಕಾರ ಎಲ್.ಜಿ.ಹಾವನೂರು ಸ್ಮಾರಕ ನಿವೇಶನ ಖರೀದಿಗೆ ಅನುದಾನವನ್ನು ಒದಗಿಸಲಾಗುವುದು ಎಂದು ಹೇಳಿದರು.
ನಾನು ಜಲಸಂಪನ್ಮೂಲ ಸಚಿವನಾಗಿದ್ದ ಸಂದರ್ಭದಲ್ಲಿ ಮಾನ್ಯ ಮುಖ್ಯಮಂತ್ರಿಗಳು ತುಂಗಭದ್ರಾ ಮೇಲ್ದಂಡೆ ಯೋಜನೆಯಡಿ ಒಂದು ಲಕ್ಷ ಎಕರೆ ನೀರಾವರಿ ಯೋಜನೆಗೆ ಚಾಲನೆ ನೀಡಿದ್ದರು. ಇದೀಗ ಜಿಲ್ಲೆಯ ಬ್ಯಾಡಗಿ ಹಾಗೂ ಹಾನಗಲ್ ತಾಲೂಕಿನ ನಾಲ್ಕು ಏತ ನೀರಾವರಿಗೆ ಯೋಜನೆ ಮಾನ್ಯ ಮುಖ್ಯಮಂತ್ರಿಗಳು ಅನುಮೋದನೆ ನೀಡಿದ್ದಾರೆ. ಅರಣ್ಯ ಕ್ಷೇಮಾಭಿವೃದ್ಧಿಗೆ ಶೀಘ್ರವಾಗಿ ಸಮಿತಿ ರಚನೆ ಮಾಡಲಾಗುವುದು ಎಂದು ಭರವಸೆ ನೀಡಿದ ಅವರು, ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವಆರಂಭವಾಗಿದ್ದು, ಜಿಲ್ಲೆಯ ಕಟ್ಟಕಡೆಯ ವ್ಯಕ್ತಿಗೂ ಸಕರ್ಾರದ ಯೋಜನೆಗಳು ತಲುಪಲು ಸಮಾಜದ ಸಹಕಾರ ಸಹಾಯ ಮುಖ್ಯವಾಗಿದೆ ಎಂದು ಹೇಳಿದರು.
ಇದು 21 ನೇ ಶತಮಾನ, ಖಡ್ಗ ಹಿಡಿದು ಯುದ್ಧ ಮಾಡುವುದಲ್ಲ. ಇದು ಜ್ಞಾನದ ಯುಗವಾಗಿದ್ದು ಜ್ಞಾನವಿದ್ದವರು ಜಗತ್ತನ್ನು ಆಳುತ್ತಿದ್ದಾರೆ. ಜ್ಞಾನ, ವಿದ್ಯೆಗೆ ಮಹತ್ವ ನೀಡಿ ಮಕ್ಕಳನ್ನು ಎಲ್ಲ ಕ್ಷೇತ್ರಗಳಲ್ಲಿಯೂ ಮುಂದೆ ತರುವುದು ಪಾಲಕರ ಹಾಗೂ ಸಕರ್ಾರದ ಆದ್ಯ ಕರ್ತವ್ಯವಾಗಿದೆ. ಗ್ರಾಮೀಣ ಪ್ರದೇಶದಲ್ಲಿನ ಎಸ್.ಟಿ. ಸಮುದಾಯ ಮಕ್ಕಳನ್ನು ಇಂದಿನ ಸ್ಪಧರ್ಾತ್ಮಕ ಯುಗಕ್ಕೆ ಸಿದ್ಧಪಡಿಸಬೇಕು. ಶಿಕ್ಷಣ, ಉದ್ಯೋಗ, ರಾಜಕೀಯ ಕ್ಷೇತ್ರ ಇವುಗಳನ್ನು ಪಡೆಯಲು ಸಮುದಾಯವು ಸಂಘಟಿತ ಪ್ರಯತ್ನವನ್ನು ಮಾಡಬೇಕು. ಕೈಗಾರಿಕೆ, ಉದ್ಯೋಗ ಸೃಷ್ಠಿ, ಶಿಕ್ಷಣ, ಎಲ್ಲ ಕ್ಷೇತ್ರಗಳಲ್ಲಿ ಎಸ್.ಟಿ ಸಮುದಾಯ ಮುಂದಿರಬೇಕು. ಈ ನಿಟ್ಟಿನಲ್ಲಿ ಮಕ್ಕಳಿಗೆ ತರಬೇತಿಯನ್ನು ನೀಡಿದರೇ ಅವರು ಬೆಳೆಯುತ್ತಾರೆ. ವಾಲ್ಮೀಕಿಯವರೂ ಎಲ್ಲರಿಗೂ ಸ್ಪೂತರ್ಿಸೆಲೆಯಾಗಿದ್ದಾರೆ, ಅವರು ಸೂರ್ಯ-ಚಂದ್ರ ಇರುವವರೆಗೂ ಬೆಳಗಬೇಕು ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಶಾಸಕರಾದ ನೆಹರು ಓಲೇಕಾರ ಅವರು ಮಾತನಾಡಿ, ಈ ಹಿಂದೆ ವಾಲ್ಮೀಕಿ ಭವನ ಕಟ್ಟಡಕ್ಕೆ ನಿವೇಶ ನೀಡಲಾಗಿತ್ತು. ಈಗ ಕಟ್ಟಡ ಕಾಮಗಾರಿಗೆ ಅಗತ್ಯವಾದ ಅನುದಾನ ಮಂಜೂರಾತಿಗೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಳ್ಳಲಾಗುವುದು. ಮುಂದಿನ ವರ್ಷದ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ವಾಲ್ಮೀಕಿ ಭವನದಲ್ಲಿ ಆಚರಿಸೋಣ ಎಂದು ಹೇಳಿದರು.
ಸಕರ್ಾರಿ ಪ್ರಥಮ ದಜರ್ೆ ಕಾಲೇಜು ಪ್ರಾಂಶುಪಾಲ ಡಾ.ರಮೇಶ ತೆವರಿ ಅವರು ಮಹಷರ್ಿ ವಾಲ್ಮೀಕಿ ಅವರ ಜೀವನದ ಕುರಿತು ಉಪನ್ಯಾಸ ನೀಡಿದರು.
ಹಕ್ಕು ಪತ್ರ ವಿತರಣೆ: ಇದೇ ಸಂದರ್ಭದಲ್ಲಿ ಅನುಸೂಚಿತ ಬುಡಕಟ್ಟು ಮತ್ತು ಇತರೆ ಪಾರಂಪರಿಕ ಅರಣ್ಯವಾಸಿಗಳ(ಅರಣ್ಯ ಹಕ್ಕುಗಳನ್ನು ಮಾನ್ಯ ಮಾಡುವ) ಅಧಿನಿಯಮ, 2006(2007ರ2) ಮತ್ತು ನಿಯಮಗಳು 2008( ನಿಯಮಗಳ ತಿದ್ದುಪಡಿ 2012)ರಡಿ ಹಿರೇಕೆರೂರು ತಾಲೂಕಿನ ಗುಡ್ಡದ ಮಾದಾಪೂರ , ಅಣಜಿ ನಾಗವಂದ ಗ್ರಾಮಗಳ 30 ಜನರಿಗೆ ಸಾಗುವಳಿ ಜಮೀನು ಹಕ್ಕು ಪತ್ರಗಳನ್ನು ಸಚಿವರು ವಿತರಿಸಿದರು.
ವಿದ್ಯಾರ್ಥಿಗಳಿಗೆ ಸನ್ಮಾನ:
ಕಳೆದ ಸಾಲಿನ ದ್ವಿತೀಯ ಪಿ.ಯು. ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ಪರಿಶಿಷ್ಟ ವರ್ಗದ ವಿದ್ಯಾಥರ್ಿಗಳಾದ ಸವಣೂರ ತಾಲೂಕು ಚಿಲ್ಲೂರಬಡ್ನಿಯ ಶಂಕ್ರಪ್ಪ ಹಲರ್ಾಪೂರ, ಹಾನಗಲ್ ತಾಲೂಕು ಹೋತನಹಳ್ಳಿಯ ಪಲ್ಲವಿ ವಾಗಣ್ಣನವರ, ಕೊಪ್ಪಗೊಂಡಕೊಪ್ಪದ ಅಂಬಿಕಾ ದೊಡಮನಿ, ಬಾಳಂಬೀಡದ ಅನ್ನಪೂರ್ಣ ಹೊಸೂರ, ರಾಣೇಬೆನ್ನೂರ ತಾಲೂಕಿನ ಮೇಘನಾ ಡಿ.ಕೆ. ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಸಕರಾದ ವಿರುಪಾಕ್ಷಪ್ಪ ಬಳ್ಳಾರಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಕೊಟ್ರೇಶಪ್ಪ ಬಸೇಗಣ್ಣಿ, ಸಿದ್ದರಾಜ ಕಲಕೋಟಿ, ಎನ್.ಎಂ.ಈಟೇರ, ವಿರುಪಾಕ್ಷಪ್ಪ ಕಡ್ಲಿ, ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ.ದೇವರಾಜ, ಅಪರ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ರಾಜು ಕೂಲೇರ, ಸಮಾಜ ಕಲ್ಯಾಣ ಇಲಾಖೆ ಉಪನಿದರ್ೆಶಕಿ ಚೈತ್ರಾ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿದರ್ೆಶಕ ಅಂದಾನೆಪ್ಪ ವಡಗೇರಿ, ಜಿ.ಪಂ.ಮಾಜಿ ಅಧ್ಯಕ್ಷ ಪರಮೇಶಪ್ಪ ಮೇಗಳಮನಿ, ವಾಲ್ಮೀಕಿ ಸಂಘದ ಜಿಲ್ಲಾ ಅಧ್ಯಕ್ಷ ರಮೇಶ ಆನವಟ್ಟಿ, ನಗರಸಭೆ ಮಾಜಿ ಅಧ್ಯಕ್ಷೆ ಮಂಜುಳಾ ಕರಬಸಮ್ಮನವರ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಸಂಘದ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.