ದ್ವಿತೀಯ ಸಂಸ್ಥಾಪನಾ ದಿನಾಚರಣೆ

Second Foundation Day Celebration

ದ್ವಿತೀಯ ಸಂಸ್ಥಾಪನಾ ದಿನಾಚರಣೆ 

ಹಾವೇರಿ  11:  ಹಾವೇರಿ ವಿಶ್ವವಿದ್ಯಾಲಯದ ದ್ವಿತೀಯ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ  ಏಪ್ರಿಲ್ 12 ರಂದು ಬೆಳಿಗ್ಗೆ 11 ಗಂಟೆಗೆ ಕೆರಿಮತ್ತಿಹಳ್ಳಿಯಲ್ಲಿರುವ ಹಾವೇರಿ ವಿಶ್ವವಿದ್ಯಾಲಯದ ಸಭಾಭವನದಲ್ಲಿ ಜರುಗಲಿದೆ. ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬಸವರಾಜ ಶಿವಣ್ಣನವರ ಉದ್ಘಾಟನೆ ನೆರವೇರಿಸಲಿದ್ದು, ಹಾವೇರಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸುರೇಶ ಹೆಚ್‌.ಜಂಗಮಶೆಟ್ಟಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಅಶೋಕ ಆಲೂರ,  ಕರ್ನಾಟಕ ಕೃಷಿ ಬೆಲೆ ಆಯೋಗದ ಅಧ್ಯಕ್ಷ ಡಾ.ಅಶೋಕ ದಳವಾಯಿ, ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ,  ನಾವೀನ್ಯತೆ ಸಲಹೆಗಾರ ರಾಜಶೇಖರ ಹಿರೇಮಠ ಹಾಗೂ ಅಂತರಾಷ್ಟ್ರೀಯ ಶೈಕ್ಷಣಿಕ ಸಲಹೆಗಾರ ಡಾ.ಶಿವಾನಂದ ಉತ್ಲಾಸರ ಅವರು  ಭಾಗವಹಿಸಲಿದ್ದಾರೆ.