ಶಿವಾಜಿ ಮೂರ್ತಿ ಮೆರವಣಿಗೆಗೆ ಚಾಲನೆ
ಬೆಳಗಾವಿ 12: ಗ್ರಾಮೀಣ ಕ್ಷೇತ್ರದ ಸುಳೇಭಾವಿ ಗ್ರಾಮದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಯ ಪ್ರತಿಷ್ಟಾಪನೆ ಹಿನ್ನೆಲೆಯಲ್ಲಿ ಬೆಳಗಾವಿ ಅನಗೋಳದ ಮೂರ್ತಿಕಾರರ ಸ್ಥಳದಲ್ಲಿ ಮೂರ್ತಿಗೆ ಪೂಜೆ ಸಲ್ಲಿಸಿದ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್, ಮೂರ್ತಿಯ ಭವ್ಯ ಮೆರವಣಿಗೆ ಚಾಲನೆ ನೀಡಿದರು. ಬೆಳಗಾವಿಯಿಂದ ಸುಳೇಭಾವಿಗೆ ಮೆರವಣಿಗೆ ತಲುಪಲಿದ್ದು, ಶೀಘ್ರದಲ್ಲೇ ಈ ಭಾಗದ ಗುರು ಹಿರಿಯರ, ಸ್ಥಳೀಯ ಮುಖಂಡರ ಜೊತೆ ಚರ್ಚಿಸಿ, ಮೂರ್ತಿಯ ಪ್ರತಿಷ್ಟಾಪನೆಯ ದಿನಾಂಕವನ್ನು ನಿಗದಿಪಡಿಸಲಾಗುವುದು ಎಂದು ಅವರು ತಿಳಿಸಿದರು. ಈ ವೇಳೆ ಗ್ರಾಮದ ಹಿರಿಯರು, ಮುಖಂಡರು, ಯುವಕರು ಉಪಸ್ಥಿತರಿದ್ದರು.