ಶಿವಶರಣೆ ಮಹಾಸಾದ್ವಿ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮ

Shivasharane Mahasadvi Hemaraddi Mallamma Jayanti Program

ಹಾವೇರಿ 10 : ಹೇಮರೆಡ್ಡಿ ಮಲ್ಲಮ್ಮನ ತತ್ವಾದರ್ಶಗಳು ಹಾಗೂ ಜೀವನ ಶೈಲಿ ಎಲ್ಲರಿಗೂ ದಾರೀದೀಪವಾಗಿದೆ. ಇಂದಿನ ಯುವ ಸಮೂಹ ಅವರ ಜೀವನ ಕುರಿತು ತಿಳಿದುಕೊಳ್ಳಬೇಕು ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್‌.ಎನ್‌.ಎನ್‌.ಗಾಜಿಗೌಡ್ರ ಅವರು ಹೇಳಿದರು. ನಗರದ ಗಾಂಧಿ ಭವನದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಹಾಗೂ ಹಾವೇರಿ ಜಿಲ್ಲಾ ರೆಡ್ಡಿ ಜನಸಂಘದ ಸಹಯೋಗದಲ್ಲಿ ಶಿವಶರಣೆ ಮಹಾಸಾದ್ವಿ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಎಂ.ಎಂ.ಮೈದೂರ ಅವರು ಮಾತನಾಡಿ,ಹೇಮರೆಡ್ಡಿ ಮಲ್ಲಮ್ಮ ತತ್ವಜ್ಞಾನಿ ಎಂದು ಹೆಸರುವಾಸಿಯಾಗಿದ್ದರು. ಅವರ ಜೀವನ ಚರಿತ್ರೆ ಅಮೂಲ್ಯವಾಗಿದೆ. ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಠಾಗ ಸಮಾಜಕ್ಕೆ ಉತ್ತಮ ಕೊಡುಗೆ ನೀಡಲು ಸಾಧ್ಯ ಎಂದು ಹೇಳಿದರು. ಶ್ರೀ ಹೊಸಮಠದ ಬಸವಶಾಂತಲಿಂಗ ಸ್ವಾಮಿಗಳು ಸಾನಿಧ್ಯವಹಿಸಿ ಆಶಿರ್ವಚನ ನೀಡಿದರು.ಹಿರೇಕೆರೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕ ಡಾ.ಕಾಂತೇಶರೆಡ್ಡಿ ಗೋಡಿಹಾಳ ಅವರು ಹೇಮರಡ್ಡಿ ಮಲ್ಲಮ್ಮ ಜೀವನದ ಕುರಿತು ಉಪನ್ಯಾಸ ನೀಡಿದರು.

ನಗರಸಭೆ ಉಪಾಧ್ಯಕ್ಷ ಮಲ್ಲಕಾರ್ಜುನ ಸಾತೇನಹಳ್ಳಿ,ಸದಸ್ಯ ಸಂಜೀವಕುಮಾರ ನೀರಲಗಿ, ಉಪ ವಿಭಾಗಾಧಿಕಾರಿ ಚನ್ನಪ್ಪ, ತಹಸೀಲ್ದಾರ ಶರಣಮ್ಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಆರ್‌. ವಿ. ಚಿನ್ನಿಕಟ್ಟಿ, ನಗರಸಭೆ ಆಯುಕ್ತರು,ಹಾವೇರಿ ಜಿಲ್ಲಾ ರೆಡ್ಡಿ ಜನಸಂಘದ ಕಾರ್ಯದರ್ಶಿ ಬಿ.ವಿ.ದೊಡ್ಡಗೌಡ್ರ,ಸಮಾಜದ ಮುಖಂಡರು ಇತರರು ಉಪಸ್ಥಿತರಿದ್ದರು.