ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿಗಳಿಂದ ಶ್ರಮದಾನ ಕಾರ್ಯಕ್ರಮ

Shramadaan program by students at the police station

ತಾಳಿಕೋಟಿ 02: ಪಟ್ಟಣದ ಎಸ್‌.ಕೆ.ಕಲಾ,ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದ ಎನ್‌.ಎಸ್‌. ಎಸ್‌. ಎನ್‌.ಸಿ.ಸಿ. ಹಾಗೂ ಸ್ಕೌಟ್ಸ್‌ ಮತ್ತು ಗೈಡ್ಸ್‌ ವಿದ್ಯಾರ್ಥಿಗಳಿಂದ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಸ್ವಚ್ಛತಾ (ಶ್ರಮದಾನ) ಕಾರ್ಯಕ್ರಮ ಸೋಮವಾರ ಹಮ್ಮಿಕೊಳ್ಳಲಾಯಿತು.  

ನಂತರ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಠಾಣಾ ಪಿಎಸ್‌ಐ ಆರ್‌.ಎಸ್‌. ಭಂಗಿ ಅವರು ಸ್ವಚ್ಛತೆಯ ಮಹತ್ವದ ಕುರಿತು ಮಾತನಾಡಿ ವಿದ್ಯಾರ್ಥಿಗಳ ಶ್ರಮದಾನ ಕಾರ್ಯಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.  

ಇದೇ ಸಂದರ್ಭದಲ್ಲಿ ಅವರು ವಿದ್ಯಾರ್ಥಿಗಳಿಗೆ ಪೋಕ್ಸೋ, ಸೈಬರ್ ಅಪರಾಧಗಳು,ರಸ್ತೆ ಸುರಕ್ಷತಾ ನಿಯಮ ಹಾಗೂ ಕಳ್ಳತನದ ಪ್ರಕರಣಗಳನ್ನು ತಡೆಯಲು ಅನುಸರಿಸಬಹುದಾದ ಮುಂಜಾಗ್ರತಾ ಕ್ರಮಗಳ ಕುರಿತು ವಿಸ್ತೃತ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಎನ್‌.ಎಸ್‌. ಎಸ್‌.ಅಧಿಕಾರಿ ಡಾ.ಅಜಯ ಅಬ್ಬಾರ್, ಈರಮ್ಮ,ಎನ್‌.ಸಿ.ಸಿ. ಅಧಿಕಾರಿ ಡಾ.ರಾಘವೇಂದ್ರ, ಸ್ಕೈಟ್ಸ್‌ ಮತ್ತು ಗೈಡ್ಸ್‌ ಮುಖ್ಯಸ್ಥ ಡಾ.ಅಶೋಕ ಹಾಗೂ ಠಾಣಾ ಸಿಬ್ಬಂದಿಗಳು ಇದ್ದರು.