ಬಳ್ಳಾರಿ 12: ಕರ್ನಾಟಕ ರಾಜ್ಯ ಗೊಲ್ಲ ಯಾದವ ಸಂಘದ ಶತಮಾನೋತ್ಸವ ಮತ್ತು ಶ್ರೀ ಕೃಷ್ಣ ಯಾದವಾನಂದ ಮಹಾಸ್ವಾಮಿಗಳ 16ನೇ ವರ್ಷದ ಪಟ್ಟಾಭಿಷೇಕ ಸಮಾರಂಭ ಕಾರ್ಯಕ್ರಮವನ್ನು ಇದೇ ತಿಂಗಳು 20ರಂದು ಬೆಳಗಾವಿಯ ಚಿಕ್ಕೋಡಿಯಲ್ಲಿ ಏರ್ಪಡಿಸಲಾಗಿದೆ.
ತರುವಾಯ ಲೋಕೋಪಯೋಗಿ ಸಚಿವರು ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ರವರನ್ನು ಭೇಟಿ ಮಾಡಿ ಸಮಾವೇಶದ ರೂಪರೇಷೆಗಳ ಬಗ್ಗೆ ಚರ್ಚೆ ನಡೆಸಿದರು.ಈ ಕಾರ್ಯಕ್ರಮಕ್ಕೆ ವಿಧಾನಪರಿಷತ್ ಸದಸ್ಯರು ಹಾಗೂ ರಾಜ್ಯ ಗೊಲ್ಲ ಯಾದವ ಸಂಘದ ಅಧ್ಯಕ್ಷರಾದ ಡಿ. ಟಿ. ಶ್ರೀನಿವಾಸ್ ರವರು, ಮಾಜಿ ಶಾಸಕರಾದ ಕೆ ಪೂರ್ಣಿಮಾ ಶ್ರೀನಿವಾಸ್ ರವರು ಹಾಗೂ ಕರ್ನಾಟಕ ರಾಜ್ಯ ಗೊಲ್ಲ ಯಾದವ ಸಂಘದ ಪದಾಧಿಕಾರಿಗಳು ಮತ್ತು ಬೆಳಗಾವಿ ಜಿಲ್ಲಾ ಸಮಾಜದ ಮುಖಂಡರುಗಳು ಇಂದು ಬೆಂಗಳೂರಿನಲ್ಲಿ ಆಗಮಿಸಿದ್ದರು ಎಂದುಕೆ.ಇ.ಚಿದಾನಂದಪ್ಪ , ಅಧ್ಯಕ್ಷರು ಬಳ್ಳಾರಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷರು ತಿಳಿಸಿದರು.