ಯುವಕರಿಗೆ ಸನ್ಮಾರ್ಗದಲ್ಲಿ ಸಾಗುವಂತೆ ಪ್ರೇರೆಪಿಸುವ ಶ್ರೀಮಠದ ಕಾರ್ಯ ಮುಖ್ಯ: ಕುಲಕರ್ಣಿ

Srimat's work of inspiring youth to follow the right path is important: Kulkarni

ಜಮಖಂಡಿ 17: ಇಂದಿನ ಯುವಕರಿಗೆ ಸಂಸ್ಕಾರ ಕೊಟ್ಟು ಸನ್ಮಾರ್ಗದಲ್ಲಿ ಸಾಗುವಂತೆ ಪ್ರೇರೆಪಿಸುವ ಶ್ರೀಮಠದ ಕಾರ್ಯ ಮುಖ್ಯವಾಗಿದೆ. ಜಮಖಂಡಿ ಆಧ್ಯಾತ್ಮಿಕ ಕ್ಷೇತ್ರದ ಕೇಂದ್ರವಾಗಿದೆ. ಜಗತ್ತಿಗೆ ಆಧ್ಯಾತ್ಮಿಕ ಸಂದೇಶಗಳನ್ನು ನೀಡುವ ಮೂಲಕ ಮುಂದೆ ಸಾಗುತ್ತಿದೆ ಎಂದು ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ ಹೇಳಿದರು. 

ನಗರದ ಐತಿಹಾಸಿಕ ಓಲೇಮಠದ ಆಶ್ರಯದಲ್ಲಿ ಬಸವ ಜಯಂತಿ ನಿಮಿತ್ತ ಏ.15 ರಿಂದ ಏ.29 ರವರೆಗೆ ಹಮ್ಮಿಕೊಂಡಿರುವ ಶರಣರ ವಚನ ಪ್ರವಚನ, ಸದ್ಭಾವನ ಪಾದಯಾತ್ರೆ ಅಂಗವಾಗಿ ಸಂಜೆ ನಡೆದ ವಚನ ಜಾತ್ರಾ ಮಹೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. 

ವಿಧಾನ ಪರಿಷತ್ ಮಾಜಿ ಸದಸ್ಯ ಜಿ.ಎಸ್‌. ನ್ಯಾಮಗೌಡ ಮುಖ್ಯ ಅತಿಥಿಯಾಗಿ ಮಾತನಾಡಿ, ಇಳಕಲ್‌ನ ವಿಜಯ ಮಹಾಂತೇಶ ಸಂಸ್ಥಾನ ಮಠದ ಮಹಾಂತ ಜೋಳಿಗೆಯ ಪರಿಕಲ್ಪನೆಯನ್ನು ಜಮಖಂಡಿಯಲ್ಲಿ ಅನುಷ್ಠಾನಗೊಳಿಸುತ್ತಿರುವುದು ಸಂತಸದ ಸಂಗತಿ. ಪುರಾತನ ಮಠವಾಗಿರುವ ಓಲೇಮಠ ಜಮಖಂಡಿ ನಗರಕ್ಕೆ ಕಳಶಪ್ರಾಯವಾಗಿದೆ ಎಂದರು. 

ಹುಲ್ಯಾಳ ಗುರುದೇವಾಶ್ರಮದ ಹರ್ಷಾನಂದ ಮಹಾಸ್ವಾಮಿಗಳು ಸಮ್ಮುಖ ವಹಿಸಿ ಮಾತನಾಡಿ, ಸುಳ್ಳು ಹೇಳುವುದಿಲ್ಲ, ಯಾರೊಂದಿಗೆ ಜಗಳ ಕಾಯುವುದಿಲ್ಲ, ಯಾವುದೇ ದುಶ್ಚಟ ಮಾಡುವುದಿಲ್ಲ ಎಂದು ಸಂಕಲ್ಪ ಮಾಡಿ ಜೀವನವನ್ನು ಪವಿತ್ರ ಮಾಡಿಕೊಳ್ಳಬೇಕು ಎಂದು ಆಶೀರ್ವಚನ ನೀಡಿದರು. 

ಮುತ್ತಿನಕಂತಿ ಹಿರೇಮಠದ ಶಿವಲಿಂಗ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಿ ಮಾತನಾಡಿ, ಇಂದಿನ ಮಕ್ಕಳೇ ನಾಳಿನ ನಾಯಕರು. ಆದ್ದರಿಂದ ಇಂದಿನ ಮಕ್ಕಳಿಗೆ ಸಂಸ್ಕಾರ ನೀಡುವುದು ಬಹಳ ಮುಖ್ಯವಾಗಿದೆ ಎಂದು ಆಶೀರ್ವಚನ ನೀಡಿದರು. 

ಕಲ್ಯಾಣಮಠದ ಗೌರಿಶಂಕರ ಶಿವಾಚಾರ್ಯ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಮಾಜಿ ಸೈನಿಕರ ಕ್ಷೇಮಾಭಿವೃದ್ಧಿ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ರಾಮು ಶಿರೋಳ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.ಹಿರಿಯ ವಕೀಲ ಡಾ.ತಾತಾಸಾಹೇಬ ಬಾಂಗಿ ಮಾತನಾಡಿದರು. ಝುಂಜರವಾಡದ ಬಸವರಾಜೇಂದ್ರ ಶರಣರು ಪ್ರವಚನ ನುಡಿಗಳನ್ನು ಹೇಳಿದರು. ಗಾಣಿಗ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಕೆ. ತುಪ್ಪದ, ಲೆಕ್ಕಪರಿಶೋಧಕ ಗೀರೀಶ ಬಾಂಗಿ ಇದ್ದರು. 

ನಿಖಿತಾ ಹಿರೇಮಠ, ಸಾನ್ವಿ ಬನ್ನಿಗಿಡದ ವಚನ ಪ್ರಾರ್ಥನೆ ಗೀತೆ ಹಾಡಿದರು. ಎಸ್‌.ವೈ. ಪಾಟೀಲ ಸ್ವಾಗತಿಸಿದರು. ಮುಖ್ಯ ಶಿಕ್ಷಕ ಶಂಕರ ಲಮಾಣಿ ನಿರೂಪಿಸಿದರು. ಓಲೇಮಠದ ಆನಂದ ದೇವರು ಶ್ರೀಗಳು ಶರಣು ಸಮರ​‍್ಿಸಿದರು.