ವಿಜಯಪುರ 07: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಅಹಲ್ಯಾಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣಾ ಕೇಂದ್ರ, ಯಶೋಧರಮ್ಮ ದಾಸಪ್ಪ ದತ್ತಿ ಪೀಠ ಹಾಗೂ ಸ್ನಾತಕ ಮಹಿಳಾ ಅಧ್ಯಯನ ವಿಭಾಗ, ಬಿ.ಎಲ್.ಡಿ.ಇ. ಸಂಸ್ಥೆಯ ಎಸ್.ಬಿ.ಎಸ್. ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಿಳಾ ಮಹಿಳಾ ಮಹಾವಿದ್ಯಾಲಯ ಇವರ ಸಹಯೋಗದೊಂದಿಗೆ ‘ಪ್ರೊ.ಎಚ್.ಎಸ್.ಶ್ರೀಮತಿ ಅವರ ಬದುಕು ಮತ್ತು ಬರಹ’ ಕುರಿತು ರಾಜ್ಯ ಮಟ್ಟದ ವಿಚಾರ ಸಂಕಿರಣ ಕಾರ್ಯಕ್ರಮ ಇದೇ ಡಿ. 9ರಂದು ಬೆಳಿಗ್ಗೆ 11.00 ಗಂಟೆಗೆ ಡಾ.ಬಿ.ಆರ್.ಅಂಬೇಡ್ಕರ್ ಸಭಾಭವನದಲ್ಲಿ ಜರುಗಲಿದೆ.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಹಂಪಿ ಕನ್ನಡ ವಿಶ್ವವಿದ್ಯಾಲಯದ ಮಹಿಳಾ ಅಧ್ಯಯನ ವಿಭಾಗದ ವಿಶ್ರಾಂತ ಪ್ರಾಧ್ಯಾಪಕಿ ಪ್ರೊ.ಎಚ್.ಎಸ್.ಶ್ರೀಮತಿ ಭಾಗವಹಿಸಲಿದ್ದು, ದಿಕ್ಸೂಚಿ ಭಾಷಣಕಾರರಾಗಿ ತರೀಕೆರೆಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಮುಖ್ಯಸ್ಥೆ ಪ್ರೊ.ಸಬಿತಾ ಬನ್ನಾಡಿ ಭಾಗವಹಿಸಲಿದ್ದಾರೆ.
ಸಂಪನ್ಮೂಲ ವ್ಯಕ್ತಿಗಳಾಗಿ ತುಮಕೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ಗೀತಾ ವಸಂತ, ಹಂಪಿ ಕನ್ನಡ ವಿಶ್ವವಿದ್ಯಾಲಯದ ಮಹಿಳಾ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ.ಶಿವಾನಂದ ವಿರಕ್ತಮಠ, ಬೆಂಗಳೂರಿನ ಎಂ.ಎಸ್.ರಾಮಯ್ಯ ಅ.ವಿ.ವಿ ಸಮಾಜ ವಿಜ್ಞಾನಗಳ ವಿಭಾಗದ ಪ್ರೊಫೆಸರ್ ಆಫ್ ಎಮಿನೆನ್ಸ್ ಪ್ರೊ.ಆರ್. ಇಂದಿರಾ, ತುಮಕೂರು ವಿಶ್ವವಿದ್ಯಾಲಯದ ಮಹಿಳಾ ಅಧ್ಯಯನ ಕೇಂದ್ರದ ನಿರ್ದೇಶಕಿ ಡಾ.ಜ್ಯೋತಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ವಿವಿಯ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ವಹಿಸಲಿದ್ದಾರೆ. ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ ಉಪಸ್ಥಿತರಿರಲಿದ್ದಾರೆ ಎಂದು ಬಿ.ಎಲ್.ಡಿ.ಇ. ಸಂಸ್ಥೆಯ ಎಸ್.ಬಿ.ಎಸ್. ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಿಳಾ ಮಹಿಳಾ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ವೈ. ತಮ್ಮಣ್ಣ ಹಾಗೂ ಅಹಲ್ಯಾಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನ ಕೇಂದ್ರದ ಮುಖ್ಯಸ್ಥೆ ಪ್ರೊ. ಲಕ್ಷ್ಮಿದೇವಿ ವೈ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.