18ರಿಂದ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟ
ವಿಜಯನಗರ 15: ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘ ಬೆಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿ ದಿನಾಂಕ 18, 19 ಹಾಗೂ 20ನೇ ಮೇ 2025 ರಂದು ಶಿವಮೊಗ್ಗ ನಗರದಲ್ಲಿ ಸರ್ಕಾರಿ ನೌಕರರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿರುತ್ತದೆ. 9 ಮತ್ತು 10 ನೇ ಏಪ್ರಿಲ್ 2025ರಂದು ಜರುಗಿದ ವಿಜಯನಗರ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಜಿಲ್ಲಾಮಟ್ಟದ ವಿವಿಧ ಕ್ರೀಡೆಗಳಲ್ಲಿ ವಿಜೇತರಾಗಿರುವ ನಾಲ್ಕುನೂರಕ್ಕೂ ಹೆಚ್ಚು ಸರ್ಕಾರಿ ನೌಕರರು ಭಾಗವಹಿಸಲಿದ್ದಾರೆ. ಜಿಲ್ಲೆಯ ನೌಕರರು ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಗೆದ್ದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಲಿ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ವಿಜಯನಗರ ಜಿಲ್ಲೆಯ ಜಿಲ್ಲಾಧ್ಯಕ್ಷರು ಹಾಗೂ ರಾಜ್ಯ ಉಪಾಧ್ಯಕ್ಷರಾದ ಜಿ. ಮಲ್ಲಿಕಾರ್ಜುನಗೌಡ ಮತ್ತು ಜಿಲ್ಲಾ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.