ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಕ್ರಮ ವಹಿಸಬೇಕು: ಸಚಿವ ಸತೀಶ ಜಾರಕಿಹೊಳಿ

Steps should be taken for effective implementation of guarantee schemes: Minister Satish Jarkiholi

ಬೆಳಗಾವಿ 27: ಜಿಲ್ಲೆಯಲ್ಲಿ ಶಕ್ತಿ ಯೋಜನೆ, ಗೃಹ ಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮಿ ಹಾಗೂ ಯುವ ನಿಧಿ ಗ್ಯಾರಂಟಿ ಯೋಜನೆಗಳ ಸೌಲಭ್ಯವನ್ನು ಅರ್ಹ ಫಲಾನುಭವಿಗಳಿಗೆ ದೊರಕಿಸುವ ನಿಟ್ಟಿನಲ್ಲಿ, ಸಮರ​‍್ಕವಾಗಿ ಅನುಷ್ಠಾನಗೊಳಿಸಲು ಅಧಿಕಾರಿಗಳು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಲೋಕೋಪಯೋಗಿ ಹಾಗೂ  ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.ಜಿಲ್ಲಾ ಪಂಚಾಯತ್ ವಿಡಿಯೋ ಸಂವಾದ ಸಭಾಂಗಣದಲ್ಲಿ ಮಂಗಳವಾರ (ಮೇ.27) ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. 

ರಾಜ್ಯದ ಜನರ ಹಿತದೃಷ್ಟಿಯಿಂದ ಸರ್ಕಾರ 5 ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, ಜನಪರ ಯೋಜನೆಗಳಾಗಿವೆ. ಯೋಜನೆಗಳನ್ನು ಇನ್ನಷ್ಟು  ಪರಿಣಾಮಕಾರಿ ಅನುಷ್ಠಾನಗೊಳಿಸಲು ಎಲ್ಲ ಅಧಿಕಾರಿಗಳು, ಸಮಿತಿ ಸದಸ್ಯರು ಶ್ರಮವಹಿಸಬೇಕು ಎಂದರುಕೆಲವು ಗ್ರಾಮಗಳಿಗೆ ಸರಿಯಾದ ಸಮಯಕ್ಕೆ ಸರ್ಕಾರಿ ಬಸ್ ಸಂಚಾರ ಇಲ್ಲ. ಅಂತಹ ಗ್ರಾಮಗಳಿಗೆ ಬಸ್ ವ್ಯವಸ್ಥೆ ಕಲ್ಪಿಸಬೇಕು. ಕೆಲವು ಕಡೆಗಳಲ್ಲಿ ಪಡಿತರ ಪಡೆಯಲು ಜನರು ಅಕ್ಕಪಕ್ಕದ ಗ್ರಾಮದಿಂದ ಬರಬೇಕಿದೆ. ಆಯಾ ಗ್ರಾಮಗಳಿಗೆ ಪಡಿತರ ಸರಬರಾಜು ಮಾಡುವ ಬಗ್ಗೆ ಕ್ರಮ ಕೈಗೊಳ್ಳುವ ಬಗ್ಗೆ ಸೂಚನೆ ನೀಡಿದರು.ಯುವನಿಧಿ ಯೋಜನೆಯ ವ್ಯಾಪ್ತಿಯಲ್ಲಿ ಬರುವ, ನೋಂದಾಯಿಸಿದ ಫಲಾನುಭವಿಗಳಿಗೆ ಯೋಜನೆ ಸರಿಯಾದ ಮಾದರಿಯಲ್ಲಿ ಬಳಕೆಯಾಗುವಂತೆ ವಿದ್ಯಾರ್ಥಿಗಳಿಗೆ ಬರುವ ಹಣದಿಂದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯಲು ಪುಸ್ತಕಗಳನ್ನು ಖರೀದಿ ಮಾಡುವ ನಿಟ್ಟಿನಲ್ಲಿ ಅವರಿಗೆ ತಿಳಿ ಹೇಳುವ ಕೆಲಸ ಸಂಬಂಧಪಟ್ಟ ಇಲಾಖೆ ನಿರ್ವಹಿಸಬೇಕು ಎಂದು ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು. 

ಸಭೆಯಲ್ಲಿ ಬೆಳಗಾವಿ ಉತ್ತರ ವಿಧಾನಸಭಾ ಶಾಸಕ ಆಸೀಫ್ ರಾಜು ಸೇಠ, ಚ. ಕಿತ್ತೂರು ಶಾಸಕ ಬಾಬಾಸಾಹೇಬ್ ಪಾಟೀಲ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ವಿನಯ ನಾವಲಗಟ್ಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ರಾಹುಲ್ ಶಿಂಧೆ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ ಸೇರಿಯಂತೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಖಜಠಿಟಥಿಈಠತಿಚಿಡಿಜಂಜಜ ಡಿಜಚಿಛಿಣಠ ಉಪನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ