ವಿಜಯಪುರ 20: ಅಲ್ಪಸಂಖ್ಯಾತ ವಿವಿಧ ವೃತ್ತಿಪರ ಕೋರ್ಸ್ಗಳ ಕಲಿಕೆ ಸೇರಿದಂತೆ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಪ್ರವೇಶ ದಾಖಲಾತಿ ಪ್ರಮಾಣ ಹೆಚ್ಚಿಸಲು ಪ್ರಧಾನಮಂತ್ರಿಗಳ 15 ಅಂಶಗಳ ಕುರಿತು ಜಾಗೃತಿ ಮೂಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ ನೀಡಿದರು.
ಮಂಗಳವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ ಅನುಷ್ಠಾನಗೊಳಿಸುವ ಕುರಿತು ಪರೀಶೀಲನಾ ಸಮಿತಿಯ 4ನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಐ.ಟಿ.ಐ ಕಾಲೇಜಿನ ಕೆಲವು ವಿದ್ಯಾರ್ಥಿಗಳು ತಮ್ಮ ಕಲಿಕೆಯನ್ನು ಅರ್ಧಕ್ಕೆ ನಿಲ್ಲಿಸುತ್ತಿರುವು ಕಂಡು ಬಂದಿದೆ. ಇಂತಹ ವಿದ್ಯಾರ್ಥಿಗಳ ಮನವೊಲಿಸಿ ಕಲಿಕೆ ಮುಂದುವರೆಸುಲು ಸೂಕ್ತ ಅರಿವು ಮೂಡಿಸಿ ಕಾಲೇಜು ದಾಖಲಾತಿ ಕಡಿಮೆಯಾಗದಂತೆ ಕ್ರಮ ವಹಿಸುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಧಾನ ಮಂತ್ರಿಗಳ ಹೊಸ ಹದಿನೈದು ಅಂಶಗಳ ಕಾರ್ಯಕ್ರಮದಡಿ ಮೆಟ್ರಿಕ್ ಪೂರ್ವ ಒಟ್ಟು 21438 ವಿದ್ಯಾರ್ಥಿಗಳ ಖಾತೆಗೆ ರೂ,3,04,23000, ಮೆಟ್ರಿಕ್ ನಂತರದ 3305ವಿದ್ಯಾರ್ಥಿಗಳಿಗೆ 5,13,06,228 ಹಾಗೂ ಡಿ.ಎಡ್ ಮತ್ತು ಬಿ.ಎಡ್ ವಿದ್ಯಾರ್ಥಿಗಳಿಗೆ ಪ್ರತಿ ವಿದ್ಯಾರ್ಥಿಗೆ 25 ಸಾರಿವರ ಪ್ರೋತ್ಸಾಹಧನ ರೂಪದಲ್ಲಿ 112 ವಿದ್ಯಾರ್ಥಿಗಳಿಗೆ ರೂ.28,0000 ವೇತನವನ್ನು ಡಿ.ಬಿ.ಟಿ ಮೂಲಕ ವಿತರಿಸಲಾಗಿದೆ ಎಂದು ಅವರು ಹೇಳಿದರು.
ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ ಅನುಷ್ಠಾನಗೊಳಿಸುವ ಕುರಿತು ಪರೀಶೀಲನಾ ಸಮಿತಿಯ ಸಭೆಯ ಸದಸ್ಯರಾದ ಅಲ್ಲಾಬಕ್ಷ ಬಿಜಾಪುರ ಮಾತನಾಡಿ ಜಿಲ್ಲೆಯಲ್ಲಿ ಐಟಿಐ ಕಾಲೇಜುಗಳಿಂದ ಪ್ರತಿ ವರ್ಷ ಹಲವಾರು ವಿದ್ಯಾರ್ಥಿಗಳು ತೇರ್ಗಡೆ ಹೊಂದಿ, ಉದ್ಯೋಗಕ್ಕಾಗಿ ಬೇರೆಡೆ ಹೋಗದಂತೆ ಜಿಲ್ಲೆಯ ಕೂಡಗಿಯ ಬೃಹತ್ ಎನ್.ಟಿ.ಪಿ.ಸಿ ಉದ್ದಿಮೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರಥಮ ಆಧ್ಯತೆ ನೀಡಿ ಉದ್ಯೋಗ ದೊರಕಿಸಲು ಕ್ರಮ ವಹಿಸಬೇಕು. ನಗರದ ಬಸ್ ನಿಲ್ದಾಣ ಹತ್ತಿರ ಚರಂಡಿ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು, ಬರುವ ಶೈಕ್ಷಣಿಕ ವಾಹೆಯಲ್ಲಿ ಮೌಲಾನಾ ಅಬ್ದುಲ್ ಕಲಾಂ ವಸತಿ ಶಾಲೆ ಕಟ್ಟಡ ಪೂರ್ಣಗೊಳಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವಂತೆ ಅವರು ಸಭೆಗೆ ತಿಳಿಸಿದರು.
ಇನ್ನೋರ್ವ ಸದಸ್ಯರಾದ ಜಂಬುಕುಮಾರ ಬಾಗೇವಾಡಿ ಮಾತನಾಡಿ ಜಿಲ್ಲೆಯಲ್ಲಿರುವ ಜೈನ್ ಬಸದಿಗಳ ಮಾಹತಿ ಹಾಗೂ ಅಲ್ಲಿಯ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರ ಮಾಹಿತಿ ಈಗಾಗಲೇ ಒದಗಿಸಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಯೋಜನಾಧಿಕಾರಿಗಳಾದ ನಿಂಗಪ್ಪ ಗೋಠೆ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಶಾಂತ ಪೂಜಾರಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.