ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

Talent award for children who have achieved success in the field of education

ಕಂಪ್ಲಿ 08;  ಸ್ಥಳೀಯ ನಿಮಿಚಾಂಬ ದೇವಸ್ಥಾನ ಆವರಣದಲ್ಲಿ ನಿಮಿಷಾಂಬ ದೇವಿಯ 39ನೇ ಜಯಂತ್ಯೋತ್ಸವ ನಿಮಿತ್ಯ ಸೋಮವಂಶ ಆರ್ಯ ಕ್ಷತ್ರಿಯ (ಚಿತ್ರಗಾರ)ಸಮಾಜದಿಂದ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಬುಧವಾರ ಗೌರವಿಸಲಾಯಿತು.

ವೀರಶೈವ ಸಮಾಜದ ತಾಲೂಕು ಅಧ್ಯಕ್ಷ ಪಿ.ಮೂಕಯ್ಯಸ್ವಾಮಿ ಇವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ಕೊಡಿಸುವಲ್ಲಿ ಪಾಲಕರು ಮುಂದಾಗಬೇಕು. ಇತ್ತೀಚಿನ ದಿನಮಾನದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಮಹತ್ವವಿದ್ದು, ಈ ನಿಟ್ಟಿನಲ್ಲಿ ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು. ಸಮಾಜದವರು ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸುವ ಮೂಲಕ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆಧ್ಯತೆ ನೀಡುವ ಜತೆಗೆ ಸಮಾಜ ಸೇವೆ ಮಾಡಿಕೊಂಡು ಬರುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದೆ ಎಂದರು. ಸೋ.ಆ.ಕ್ಷ.ಸಮಾಜದ ಅಧ್ಯಕ್ಷ ಮಾರುತಿ ಚಿತ್ರಗಾರ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದರು. ಇಲ್ಲಿನ ವೇದಿಕೆ ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ಸಂಜಾನ ಬುಸಾರೆ, ಸಿ.ಪೂಜಾ ಬುಸಾರೆ, ವರುಣ ಚಿತ್ರಗಾರ, ನಿಖಿಲ್, ಸಂಗೀತಾ, ಪ್ರವೀಣ್ ಕುಮಾರ ಇವರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಇಲ್ಲಿನ ದೇವಸ್ಥಾನದಲ್ಲಿ ಗಾಯತ್ರಿ ಹೋಮ, ಪೂರ್ಣಾಹುತಿ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ದೆಯಿಂದ ಜರುಗಿದವು. ಈ ಸಂದರ್ಭದಲ್ಲಿ ಸೋ.ಆ.ಕ್ಷ.ಸಮಾಜದ ಉಪಾಧ್ಯಕ್ಷ ನಾಗರಾಜ ಉಭಾಳೆ, ಕಾರ್ಯದರ್ಶಿ ಷಣ್ಮುಖಪ್ಪ ಚಿತ್ರಗಾರ, ಖಜಾಂಚಿ ಶಿವಾನಂದ ಉಭಾಳೆ, ಗೌರವಾಧ್ಯಕ್ಷರಾದ ಸುಬ್ರಮಣ್ಯ ಉಭಾಳೆ, ಕೃಷ್ಣಪ್ಪ, ಸದಸ್ಯ ವೆಂಕಟೇಶ ಚಿತ್ರಗಾರ, ಮುಖಂಡರಾದ ಡಿ..ರವಿ, ಎಸ್‌.ಎಸ್‌.ಮಾರುತಿ, ವೆಂಕಟೇಶ ಚಿತ್ರಗಾರ, ಬಿ.ರಾಜಣ್ಣ ಸೇರಿದಂತೆ ಸಮಾಜದವರು ಪಾಲ್ಗೊಂಡಿದ್ದರು.  

ಸಂಜೆ ರಥೋತ್ಸವ ಸಂಭ್ರಮದಿಂದ ಜರುಗಿತು.