ಲೋಕದರ್ಶನ ವರದಿ
ಪಿಯುಸಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ
ಕಂಪ್ಲಿ 28: ಬಾಲ್ಯ ವಿವಾಹ ಮಾಡದೇ, ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಿ, ಭವಿಷ್ಯ ರೂಪಿಸಬೇಕು. ಶಿಕ್ಷಣದಲ್ಲಿ ವಿದ್ಯಾರ್ಥಿಗಳ ಭವಿಷ್ಯ ಅಡಗಿದ್ದು, ಅದರಂತೆ ಮಕ್ಕಳು ಶಿಕ್ಷಣದ ಮೌಲ್ಯಗಳೊಂದಿಗೆ ನಾಡಿನ ಉತ್ತಮ ಪ್ರಜೆಗಳಾಗಿ ಹೊರ ಹೊಮ್ಮಬೇಕು ಎಂದು ಶಾಸಕ ಜೆ.ಎನ್.ಗಣೇಶ ಹೇಳಿದರು. ಸ್ಥಳೀಯ ಸಾಂಗಾತ್ರಯ ಸಂಸ್ಕೃತ ಪಾಠ ಶಾಲಾ ಆವರಣದಲ್ಲಿ ಪುರಸಭೆ ಸದಸ್ಯ ಸಿ.ಆರ್.ಹನುಮಂತ ನೇತೃತ್ವದಲ್ಲಿ ವಿಧಾನಸಭಾ ಕ್ಷೇತ್ರದ ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಬೆಂಬಲಿಗರ ಕಾಂಗ್ರೆಸ್ ಸೇರೆ್ಡ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕಂಪ್ಲಿ ವಿಧಾನಸಭಾ ಕ್ಷೇತ್ರದ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದುವ ಜತೆಗೆ ಪೋಷಕರ ಆಸೆ, ಆಕಾಂಸೆಗಳಂತೆ ಉನ್ನತ ಹುದ್ದೆಗಳನ್ನು ಹೊಂದಬೇಕು. ವಿದ್ಯೆ ಎಂಬ ಜ್ಞಾನದೊಂದಿಗೆ ಭವಿಷ್ಯ ವೃದ್ಧಿಸಿಕೊಳ್ಳಬೇಕು. ಮತ್ತು ಶಿಕ್ಷಣ ಜತೆಗೆ ಸಂಸ್ಕೃತಿ, ಸಂಸ್ಕಾರಗಳನ್ನು ಬೆಳೆಸಿಕೊಳ್ಳಬೇಕು ಎಂದರು. ನಂತರ ಪುರಸಭೆ ಸದಸ್ಯ ಸಿ.ಆರ್.ಹನುಮಂತ ಮಾತನಾಡಿ, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜತೆಗೆ ಉತ್ತಮ ಸಂಸ್ಕಾರ ನೀಡಿದಾಗ ಮಾತ್ರ ಮಕ್ಕಳ ಉಜ್ವಲ ಭವಿಷ್ಯ ರೂಪಗೊಳ್ಳಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ತಮಗೆ ಲಭಿಸಿದ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಪೋಷಕರು ತಮ್ಮ ಮಕ್ಕಳ ಶೈಕ್ಷಣಿಕ ಪ್ರಗತಿ ಬಗ್ಗೆ ಗಮನ ಹರಿಸಬೇಕು. ಸ್ಥಳೀಯ ಶಾಸಕ ಗಣೇಶ ಅವರು ಶಿಕ್ಷಣಕ್ಕೆ ಹೆಚ್ಚಿನ ಆಧ್ಯತೆ ನೀಡುತ್ತಾ ಬಂದಿದ್ದಾರೆ ಎಂದರು ಕಂಪ್ಲಿ ಪಟ್ಟಣ ಸೇರಿದಂತೆ ಕ್ಷೇತ್ರದ ಸುಮಾರು 60 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ, ಸನ್ಮಾನದೊಂದಿಗೆ ಗೌರವಿಸಲಾಯಿತು. ತದನಂತರದ ಕಂಪ್ಲಿ, ಕುರುಗೋಡು, ರಾಮಸಾಗರ, ಬೆಳಗೋಡಹಾಳ್, ಸಣಾಪುರ, ಜವುಕು, ಸುಗ್ಗೇನಹಳ್ಳಿ, ಮಾವಿನಹಳ್ಳಿ, ವದ್ದಟ್ಟಿ, ಬಾದನಹಟ್ಟಿ, ಸಿದ್ದಮ್ಮನಹಳ್ಳಿ, ಎಮ್ಮಿಗನೂರು, ಹಂಪಾದೇವನಹಳ್ಳಿ, ಗುತ್ತಿಗನೂರು ಸೇರಿದಂತೆ ನಾನಾ ಗ್ರಾಮಗಳ ಸಿ.ಆರ್.ಹನುಮಂತ ಅವರ ಬೆಂಬಲಿಗರು ಕಾಂಗ್ರೆಸ್ ಪಕ್ಷಕ್ಕೆ ಸೇರೆ್ಡಗೊಂಡರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀನಿವಾಸರಾವ್, ಚನ್ನಬಸವರಾಜ, ಎಪಿಎಂಸಿ ಅಧ್ಯಕ್ಷ ಹಬೀಬ್ ರೆಹಮಾನ್, ಪುರಸಭೆ ಅಧ್ಯಕ್ಷ ಭಟ್ಟ ಪ್ರಸಾದ್, ಸದಸ್ಯರು, ಮುಖಂಡರಾದ ಬಿ.ನಾರಾಯಣಪ್ಪ, ಬಿ.ಸಿದ್ದಪ್ಪ, ಷಣ್ಮುಕಪ್ಪ, ಎಂ.ಸಿ.ಮಾಯಪ್ಪ ಸೇರಿದಂತೆ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.