‘ಏ. 22ರಂದು 22 ನಿಮಿಷದಲ್ಲಿ¸ ಸೇನೆ ಸೇಡು ತೀರಿಸಿಕೊಂಡಿದೆ’

The army took revenge in 22 minutes

ನವದೆಹಲಿ 22: ಪಾಕಿಸ್ತಾನದ ವಿರುದ್ಧ ಯಶಸ್ವಿ ಸೇನಾ ಕಾರ್ಯಾಚರಣೆ ನಡೆಸಿದ ಭಾರತದ ಸಶಸ್ತ್ರ ಪಡೆಗಳ ಕಾರ್ಯವೈಖರಿಯನ್ನು ಪ್ರಶಂಸಿದ ಪ್ರಧಾನಿ ನರೇಂದ್ರ ಮೋದಿ, ‘ಸಿಂಧೂರವುಸಿಡಿಮದ್ದಾಗಿ ಬದಲಾದಾಗ ಏನಾಗುತ್ತದೆ ಎಂಬುದನ್ನು ಶತ್ರು ದೇಶಗಳು ನೋಡಿದ್ದಾರೆಎಂದು ಹೇಳಿದರು.

ಆಪರೇಷನ್ಸಿಂಧೂರ ಸೇನಾ ಕಾರ್ಯಾಚರಣೆ ನಂತರ ಮೊದಲ ಬಾರಿಗೆ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ‘ಸಿಂಧೂರವನ್ನು ಅಳಿಸಲು ಹೊರಟವರು ದೂಳಾಗಿ ಹೋದರುಎಂದರು.‘ಸಿಂಧೂರವು ಬಂದೂಕಿನ ಸಿಡಿಮದ್ದಾಗಿ ಬದಲಾದಾಗ ಏನಾಗುತ್ತದೆ ಎಂಬುವುದನ್ನು ಜಗತ್ತು ಮತ್ತು ದೇಶದ ಶತ್ರುಗಳು ನೋಡಿದ್ದಾರೆ. ನನ್ನ ರಕ್ತನಾಳಗಳಲ್ಲಿ ಹರಿಯುತ್ತಿರುವುದು ರಕ್ತವಲ್ಲ, ಸಿಂಧೂರಎಂದು ತಿಳಿಸಿದರು.

ಇದೇ ವೇಳೆ ಆಪರೇಷನ್ಸಿಂಧೂರ ಕಾರ್ಯಾಚರಣೆಯ ಯಶಸ್ಸಿಗೆ ಕಾರಣವಾದ ಸಶಸ್ತ್ರ ಪಡೆಗಳನ್ನು ಶ್ಲಾಘಿಸಿದ ಅವರು, ‘ಪ್ರತೀಕಾರದ ವಿಷಯದಲ್ಲಿ ಸ್ವತಂತ್ರ ನಿರ್ಧಾರ ತೆಗೆದುಕೊಳ್ಳಲು ಮೂರು ಸಶಸ್ತ್ರ ಪಡೆಗಳಿಗೆ ನಮ್ಮ ಸರ್ಕಾರ ಅವಕಾಶ ನೀಡಿತ್ತು. ಮೂರು ಪಡೆಗಳು ಒಟ್ಟಾಗಿ ಭಾರತದ ಎದುರು ಪಾಕಿಸ್ತಾನ ಮಂಡಿಯೂರುವಂತೆ ಮಾಡಿವೆಎಂದು ಹೇಳಿದರು.

ಪಾಕಿಸ್ತಾನದೊಂದಿಗೆ ವ್ಯಾಪಾರವಾಗಲಿ, ಮಾತುಕತೆ ನಡೆಸುವುದಾಗಲಿ ಮಾಡುವುದಿಲ್ಲ. ಮಾತುಕತೆ ನಡೆಸುವುದಾದರೆ ಅದು ಪಾಕ್ಆಕ್ರಮಿತ ಕಾಶ್ಮೀರದ ಬಗ್ಗೆ ಮಾತ್ರ ಎಂದು ಮೋದಿ ಹೇಳಿದರು.

ಪಾಕಿಸ್ತಾನದ ಪರಮಾಣು ಬೆದರಿಕೆಗೆ ಭಾರತವು ಸೊಪ್ಪು ಹಾಕುವುದಿಲ್ಲ. ಅಲ್ಲದೇ ಭಯೋತ್ಪಾದಕರನ್ನು ಮತ್ತು ಅವರನ್ನು ಪೋಷಿಸುವ ದೇಶವನ್ನು ಪ್ರತ್ಯೇಕವಾಗಿ ನೋಡುವುದಿಲ್ಲಎಂದರು.

ಭಾರತದ ವಿರುದ್ಧ ನೇರ ಹೋರಾಟದಲ್ಲಿ ಪಾಕಿಸ್ತಾನ ಎಂದಿಗೂ ಗೆಲ್ಲಲು ಸಾಧ್ಯವಿಲ್ಲ. ನೇರವಾಗಿ ಯುದ್ಧಕ್ಕೆ ಬಂದರೆ ಸೋಲಬೇಕಾಗುತ್ತದೆ ಎಂದೇ ಅದು ಭಯೋತ್ಪಾದನೆಯನ್ನು ಭಾರತದ ವಿರುದ್ಧ ಹೋರಾಡಲು ಅಸ್ತ್ರವನ್ನಾಗಿ ಮಾಡಿಕೊಂಡಿದೆಎಂದು ತಿಳಿಸಿದರು.

ಏಪ್ರಿಲ್ 22 ರಂದು ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಭಾರತವು ಕೇವಲ 22 ನಿಮಿಷಗಳಲ್ಲಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ಹಲವಾರು ಸ್ಥಳಗಳನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕ ಅಡಗುತಾಣಗಳನ್ನು ನಾಶಪಡಿಸುವ ಮೂಲಕ ತ್ವರಿತವಾಗಿ ಮತ್ತು ನಿರ್ಣಾಯಕವಾಗಿ ಸೇಡು ತೀರಿಸಿಕೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ.

ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂದೂರ ಕಾರ್ಯಾಚರಣೆ ಬಳಿಕ ಪ್ರಧಾನಿ ಮೋದಿ ಮೊದಲ ಬಾರಿಗೆ ರಾಜಸ್ಥಾನದ ಬಿಕಾನೇರ್ ಗೆ ಭೇಟಿ ನೀಡಿದರು. ಇಲ್ಲಿ ಅವರು ದೇಶ್ನೋಕ್ನಲ್ಲಿರುವ ಕರ್ಣಿ ಮಾತಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು ಇದಾದ ನಂತರ ಪ್ರಧಾನಿ ಮೋದಿ ಪಲಾನದಲ್ಲಿ ಅಮೃತ್ ಭಾರತ್ ನಿಲ್ದಾಣ ಯೋಜನೆಯಡಿಯಲ್ಲಿ ದೇಶಾದ್ಯಂತ ಅಭಿವೃದ್ಧಿಪಡಿಸಲಾದ 103 ನಿಲ್ದಾಣಗಳ ಉದ್ಘಾಟನೆ ನಡೆಸಿ ಮಾತನಾಡಿದ ಅವರು ಏಪ್ರಿಲ್ 22 ರಂದು ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿ ಕೇವಲ ವ್ಯಕ್ತಿಗಳ ಮೇಲೆ ನಡೆದ ದಾಳಿಯಲ್ಲ ಬದಲಾಗಿ ರಾಷ್ಟ್ರದ ಆತ್ಮದ ಮೇಲೆ ನಡೆದ ದಾಳಿಯಾಗಿದೆ, ಏಪ್ರಿಲ್ 22 ರಂದು ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ನಾವು 22 ನಿಮಿಷಗಳಲ್ಲಿ ಸೇಡು ತೀರಿಸಿಕೊಂಡಿದ್ದೇವೆ ಅದರಂತೆ ನಮ್ಮ ಸೇನೆ ಕೇವಲ 22 ನಿಮಿಷಗಳಲ್ಲಿ ಪಾಕ್ 9 ಭಯೋತ್ಪಾದಕ ಅಡಗುತಾಣಗಳನ್ನು ನಾಶಪಡಿಸಿದೆ ಎಂದು ಹೇಳಿದರು.

ನಮ್ಮ ಸಹೋದರಿಯರ, ತಾಯಂದಿರ ಸಿಂದೂರ ಅಳಿಸಲು ಬಂದವರು ಮಣ್ಣಿನಡಿ ಹೂತು ಹೋದರು, ತಮ್ಮ ಆಯುಧಗಳ ಬಗ್ಗೆ ಹೆಮ್ಮೆ ಪಡುತ್ತಿದ್ದ ಉಗ್ರರು ಅದೇ ಆಯುಧಗಳ ಅವಶೇಷಗಳ ರಾಶಿಯಲ್ಲಿ ಹೂತುಹೋಗಿದ್ದಾರೆ. ಇದು ನಮ್ಮ ಸೇನೆ ನಡೆಸಿದ ಆಪರೇಷನ್ ಸಿಂದೂರ ಕಾರ್ಯಾಚರಣೆ ಎಂದು ಪ್ರಧಾನಿ ಒತ್ತಿ ಹೇಳಿದರು.

ಪರಮಾಣು ಬಾಂಬ್ ಬೆದರಿಕೆಗಳಿಗೆ ಭಾರತ ಹೆದರುವುದಿಲ್ಲ, ಕಾಲುಕೆರೆದು ಬಂದ ಪಾಕ್ ಗೆ ಭಾರತೀಯ ಸೇನೆ ತಕ್ಕ ಉತ್ತರ ನೀಡಿ ಭಾರತದೆದುರು ಮಂಡಿಯೂರುವಂತೆ ಮಾಡಿದೆ ಇದು ನಮ್ಮ ಸೇನೆಯ ಹೆಮ್ಮೆ ಎಂದರು.

ಸಿಂಧೂ ಜಲ ಒಪ್ಪಂದ ಅಮಾನತು ಪುನರುಚ್ಚರಿಸಿರುವ ಪ್ರಧಾನಿ ನರೇಂದ್ರ ಮೋದಿ, 'ನಮಗೆ ನದಿಗಳ ಮೇಲೆ ಸಂಪೂರ್ಣ ಹಕ್ಕು ಇದ್ದು, ಪಾಕಿಸ್ತಾನ ನೀರು ಪಡೆಯಲು ಬಿಡಲಾರೆವು' ಎಂದು ಹೇಳಿದ್ದಾರೆ.

ಏಪ್ರಿಲ್ 22ರಂದು ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಗೆ ಪ್ರತ್ಯುತ್ತರವಾಗಿ ಪಾಕಿಸ್ತಾನದ ಜೊತೆಗಿನ ಐತಿಹಾಸಿಕ ಸಿಂಧೂ ಜಲ ಒಪ್ಪಂದವನ್ನು ಭಾರತ ಅಮಾನತುಗೊಳಿಸಿತ್ತು.

ರಾಜಸ್ಥಾನದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಸಿಂಧೂ ಜಲ ಒಪ್ಪಂದ ಅಮಾನತು ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಪುನರುಚ್ಚರಿಸಿದ್ದಾರೆ.

ಪ್ರತಿಯೊಂದು ಭಯೋತ್ಪಾದಕ ದಾಳಿಗೂ ಪಾಕಿಸ್ತಾನ ಭಾರಿ ಬೆಲೆ ತೆರಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.