ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 425ಕ್ಕೆ ಏರಿಕೆ

ಬೆಂಗಳೂರು, ಏ.22, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಮತ್ತೆ 7 ಹೊಸ ಪ್ರಕರಣಗಳು ದೃಢಪಡುವ ಮೂಲಕ ಸೋಂಕಿತರ ಸಂಖ್ಯೆ  425ಕ್ಕೆ ಏರಿಕೆ ಕಂಡಿದೆ.ಈ ಕುರಿತು ಆರೋಗ್ಯ ಸಚಿವ ಬಿ ಶ್ರೀರಾಮುಲು ಅವರು ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.ಕರ್ನಾಟಕದಲ್ಲಿ  ನಿನ್ನೆಯಿಂದ ಇಂದು ಮಧ್ಯಾಹ್ನದವರೆಗೆ 7 ಹೊಸ #ಕೋವಿಡ್‌19 ಪ್ರಕರಣಗಳು ಖಚಿತವಾಗಿದ್ದು,  ಒಟ್ಟಾರೆ ಸೊಂಕಿತರ ಸಂಖ್ಯೆ 425ಕ್ಕೆ ಏರಿದೆ.  #ಮನೆಯಲ್ಲೇ ಇರಿ ಎಂದು ಸಚಿವರು  ಜನತೆಯಲ್ಲಿ ಮನವಿ ಮಾಡಿದ್ದಾರೆ‌.ಬುಧವಾರ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 2 ಹಾಗೂ ಸೂರ್ಯ ನಗರಿ ಕಲಬುರಗಿ ಜಿಲ್ಲೆಯಲ್ಲಿ ಐದು ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿವೆ.