ವಿಜಯಪುರ 23: ಕೈಗಾರಿಕೆ, ಮೂಲ ಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರ ಪ್ರಯತ್ನದ ಫಲವಾಗಿ ಬಬಲೇಶ್ವರ ಪಟ್ಡಣದಲ್ಲಿ ತಾಲೂಕು ಕ್ರೀಡಾಂಗಣ ನಿರ್ಮಾಣಕ್ಕೆ ಮಂಜೂರಾತಿ ಸಿಕ್ಕಿದೆ.
ಬಬಲೇಶ್ವರ ಪಟ್ಡಣದಲ್ಲಿ ಎಂಟು ಎಕರೆ ಜಮೀನು ಲಭ್ಯವಿದ್ದು ಈ ಜಮೀನಿನಲ್ಲಿ ತಾಲೂಕು ಕ್ರೀಡಾಂಗಣ ನಿರ್ಮಿಸಲು ಪ್ರಸಕ್ತ ಬಜೆಟ್ ನಲ್ಲಿ ಘೋಷಿಸಿದಂತೆ ಈಗ ಮಂಜೂರಾತಿ ದೊರೆತಿದೆ. ಈ ಕ್ರೀಡಾಂಗಣ ನಿರ್ಮಾಣಕ್ಕೆ ಒಟ್ಟು ರೂ. 2 ಕೋಟಿ ಅನುದಾನ ಸಿಗಲಿದೆ. ತಾಲೂಕು ಕ್ರೀಡಾಂಗಣಕ್ಕೆ ಮಂಜೂರಾತಿ ದೊರೆತಿರುವುದಕ್ಕೆ ಬಬಲೇಶ್ವರ ತಾಲೂಕಿನ ಜನತೆ ಸಂತಸ ವ್ಯಕ್ತಪಡಿಸಿದ್ದಾರೆ. ಇದರಿಂದಾಗಿ ತಾಲೂಕಿನ ಕ್ರೀಡಾಪಟುಗಳಿಗೆ ಅನುಕೂಲವಾಗಲಿದ್ದು, ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಲು ನೆರವಾಗಲಿದೆ.
ಈ ಕ್ರೀಡಾಂಗಣ ಮಂಜೂರಾಗಲು ಕ್ರಮ ಕೈಗೊಂಡಿರುವ ಸಚಿವ ಎಂ. ಬಿ. ಪಾಟೀಲ ಅವರಿಗೆ ಬಬಲೇಶ್ವರ ತಾಲೂಕಿನ ಜನತೆ ಕೃತಜ್ಞತೆ ಸಲ್ಲಿಸಿದ್ದಾರೆ.