ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಅಭಾವವಾಗದಿರಲಿ: ಜಿಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ

There should be no shortage of drinking water in summer: ZP CEO Muhammad Haris Sumer instructs

ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಅಭಾವವಾಗದಿರಲಿ: ಜಿಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ 

ಬಳ್ಳಾರಿ 06: ಬೇಸಿಗೆ ಕಾಲ ಆರಂಭವಾಗಿರುವುದರಿಂದ ಕುರುಗೋಡು ತಾಲ್ಲೂಕಿನ ಎಲ್ಲಾ ಕೆರೆಗಳಲ್ಲಿ ಕುಡಿಯುವ ನೀರು ಸಂಗ್ರಹಣೆ ಮಾಡಿಕೊಳ್ಳಬೇಕು. ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರು ಅಭಾವವಾಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಹೇಳಿದರು.ಅವರು ಗುರುವಾರದಂದು ಕುರುಗೋಡು ತಾಲ್ಲೂಕು ಪಂಚಾಯತ್ ಗೆ ಭೇಟಿ ನೀಡಿ ವಿವಿಧ ವಿಷಯಗಳ ಕುರಿತು ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಪ್ರಗತಿ ಪರೀಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.ತಾಲ್ಲೂಕು ಭಾಗದಲ್ಲಿ ಸ್ವಚ್ಛಭಾರತ್ ಮಿಷನ್ ಯೋಜನೆ ಕುರಿತು  ಮಾಹಿತಿ ಪಡೆದುಕೊಂಡ ಅವರು, ಸಂಪೂರ್ಣವಾಗಿ ಅನುಷ್ಠಾನಗೊಳಿಸಬೇಕು ಎಂದು ಸೂಚಿಸಿದರು. ಮುಂದಿನ ದಿನಗಳಲ್ಲಿ ನರೇಗಾ ಯೋಜನೆಯು ಅನುಷ್ಠಾನಗೊಳ್ಳಲಿದೆ. ಇದಕ್ಕೆ ಬೇಕಾದ ಸೂಕ್ತ ಕಾರ್ಯಯೋಜನೆ ರೂಪಿಸಿಕೊಳ್ಳಬೇಕು ಎಂದು ಜಿಪಂ ಸಿಇಒ ಅವರು ನಿರ್ದೇಶನ ನೀಡಿದರು.ಸಭೆಯಲ್ಲಿ ತೆರಿಗೆ ವಸೂಲಾತಿ, ವಸತಿ ಯೋಜನೆ, ಎನ್‌ಆರ್‌ಎಲ್‌ಎಂ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸಿ ಮಾಹಿತಿ ಪಡೆದುಕೊಂಡರು.ಈ ಸಂದರ್ಭದಲ್ಲಿ ಕುರುಗೋಡು ತಾಪಂ ಕಾರ್ಯನಿರ್ವಾಹಕ ಅಧಿಕಾರಿ, ಕೆ.ವಿ.ನಿರ್ಮಲ, ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಸಹಾಯಕ ನಿರ್ದೇಶಕ ಪಿ.ಶಿವರಾಮರೆಡ್ಡಿ, ತಾಲ್ಲೂಕು ಯೋಜನಾಧಿಕಾರಿ ರಾಧಿಕ, ಪಂಚಾಯತ್ ರಾಜ್ ಅಭಿವೃದ್ಧಿಯ ಸಹಾಯಕ ನಿರ್ದೇಶಕ ಅನೀಲ್ ಕುಮಾರ್ ಸೇರಿದಂತೆ ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ತಾಲ್ಲೂಕು ನರೇಗಾ ಸಿಬ್ಬಂದಿಯವರು ಹಾಗೂ ತಾಲ್ಲೂಕು ಪಂಚಾಯತ್ ಸಿಬ್ಬಂದಿ ಹಾಜರಿದ್ದರು.