ಮಗಳು ಪರಾರಿ; ಮನನೊಂದು ಒಂದೇ ಕುಟುಂಬದ ಮೂವರು ನೀರಿಗೆ ಹಾರಿ ಆತ್ಮಹತ್ಯೆ

Three members of the same family commit suicide by jumping into water

ಎಚ್.ಡಿ.ಕೋಟೆ 24: ಪಟ್ಟಣದ ಹೆಬ್ಬಾಳ ಜಲಾಶಯದಲ್ಲಿ ನೀರಿಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶನಿವಾರ ಮುಂಜಾನೆ ಜಲಾಶಯಕ್ಕೆ ಆಗಮಿಸಿದ ಮೂವರೂ ಡೆತ್ನೋಟ್ಬರೆದು, ದಡದಲ್ಲಿ ಬೈಕ್ನಿಲ್ಲಿಸಿ, ನೀರಿಗೆ ಹಾರಿದ್ದಾರೆ. ಗ್ರಾಮಸ್ಥರು ಮಾರ್ಗವಾಗಿ ಸಂಚರಿಸುವಾಗ ಬೈಕ್ ನಿಲ್ಲಿಸಿರುವುದನ್ನು ಗಮನಿಸಿ, ಚಪ್ಪಲಿಗಳೂ ದಡದಲ್ಲಿ ಬಿಟ್ಟಿರುವುದನ್ನು ನೋಡಿ ಪರಿಶೀಲಿಸಿದಾಗ ಬೈಕ್ನಲ್ಲಿ ಡೆತ್ ನೋಟ್ ಪತ್ತೆಯಾಗಿದೆ. ನಂತರ ಅವರು ಪೊಲೀಸರಿಗೆ ಮತ್ತು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದರು.

ಈಚೆಗೆ ಮಹದೇವಸ್ವಾಮಿ ದಂಪತಿಯ ಮೊದಲನೇ ಮಗಳು ಮನೆ ಬಿಟ್ಟು ಹೋಗಿದ್ದರು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಡೆತ್ನೋಟ್ಪರಿಶೀಲನೆ ಮಾಡಿದ ಬಳಿಕ ಕಾರಣ ಗೊತ್ತಾಗಲಿದೆಎಂದು ಪೊಲೀಸರು ತಿಳಿಸಿದರು.ಎಚ್.ಡಿಕೋಟೆ ತಾಲ್ಲೂಕಿನ ಬೂದನೂರು ಗ್ರಾಮದ ನಿವಾಸಿ ಮಹದೇವಸ್ವಾಮಿ (55), ಪತ್ನಿ ಮಂಜುಳಾ (42), ಪುತ್ರಿ ಹರ್ಷಿತಾ ಮೃತಪಟ್ಟವರು.