ಹಾವೇರಿ15: ಕೋವಿಡ್ ನಿಯಂತ್ರಣಕ್ಕೆ ಯಾವುದೇ ಕೊರತೆಯಾಗಬಾರದು. ಅಗತ್ಯವಾದ ಎಲ್ಲ ವೈದ್ಯಕೀಯ ಉಪಕರಣಗಳನ್ನು ವಿಪತ್ತು ನಿರ್ವಹಣಾ ಅನುದಾನದಲ್ಲಿ ಖರೀದಿಸುವಂತೆ ಜಿಲ್ಲಾಡಳಿತಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಬಿ.ಶ್ರೀರಾಮುಲು ಅವರು ನಿದರ್ೆಶನ ನೀಡಿದರು.
ಕೋವಿಡ್ -19 ಕುರಿತಂತೆ ಜಿಲ್ಲಾಡಳಿತ ಕೈಗೊಂಡಿರುವ ಕ್ರಮದ ಬಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಪರಿಶೀಲನಾ ಸಭೆ ನಡೆಸಿದ ಅವರು ಮುಂದಿನ ಎರಡು ವಾರಗಳ ಕಾಲ ಅತ್ಯಂತ ಕ್ರೂಷಿಯಲ್ ಸಮಯ. ಈ ಸಂದರ್ಭದಲ್ಲಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಕೋವಿಡ್ ಸೋಂಕು ಪತ್ತೆಯಾದ ತಕ್ಷಣ ಅವರನ್ನು ಸಾಗಾಣಿಕೆಗೆ ಪ್ರತ್ಯೇಕವಾದ ಅಂಬ್ಯುಲನ್ಸ್ಗಳನ್ನು ಕಾಯ್ದಿರಿಸಿಕೊಳ್ಳಬೇಕು. ಜಿಲ್ಲೆಯ ಯಾವುದೇ ಮೂಲೆಯಿಂದ ಕರೆ ಬಂದರೂ ಅರ್ಧತಾಸಿನೊಳಗೆ ಆ ಸ್ಥಳದಲ್ಲಿ ಅಂಬ್ಯುಲನ್ಸ್ಗಳು ಧಾವಿಸಬೇಕು. ಜನರಿಗೆ ಯಾವುದೇ ತರದ ಸಮಸ್ಯೆಯಾಗದಂತೆ ಮುಂಜಾಗ್ರತೆ ವಹಿಸುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದರು.
ಈಗಾಗಲೇ ಸಕರ್ಾರ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗಳ ನೇಮಕಾತಿಗಾಗಿ ಅನುಮತಿ ನೀಡಿದೆ. ತುತರ್ಾಗಿ ಕೊರತೆ ಇರುವ ವೈದ್ಯರನ್ನು ನೇಮಕಮಾಡಿಕೊಳ್ಳುವಂತೆ ಸಲಹೆ ನೀಡಿದರು. ಮಾಸ್ಕ್, ವೆಂಟಿಲೇಟರ್, ಕೇಂದ್ರೀಕೃತ ಆ್ಯಕ್ಸಿಜನ್ ವ್ಯವಸ್ಥೆಗೆ ಯಾವುದೇ ತರಹದ ಹಿಂಜರಿಕೆ ಬೇಡ. ಅಗತ್ಯವಾದ ಉಪಕರಣಗಳನ್ನು ಖರೀದಿಸುವಂತೆ ಸೂಚನೆ ನೀಡಿದರು.
ಹೊರ ರಾಜ್ಯ ಹಾಗೂ ಹೊರ ಜಿಲ್ಲೆಯ ಪ್ರಯಾಣಿಕರನ್ನು ಕಡ್ಡಾಯವಾಗಿ ತಪಾಸಣೆಗೊಳಪಡಿಸಿ. ಯಾವುದೇ ಸಂದರ್ಭದಲ್ಲೂ ಮಾಹಿತಿ ಇಲ್ಲದೆ ಗಡಿಯೊಳಗೆ ನುಸುಳಬಾರದು. ಗಡಿ ಚೆಕ್ ಪೋಸ್ಟ್ಗಳನ್ನು ಬಿಗಿಗೊಳಿಸಿ ಕಡ್ಡಾಯವಾಗಿ ತಪಾಸಣೆಮಾಡಿ. ಸಂಶಯಾತ್ಮಕ ವ್ಯಕ್ತಿಗಳನ್ನು ತಪಾಸಣೆಗೊಳಪಡಿಸಿ ಎಂದು ಸೂಚನೆ ನೀಡಿದರು.
ಗಡಿ ಪ್ರದೇಶದಲ್ಲಿ ತುತರ್ು ಆರೋಗ್ಯ ಸೇವೆಗಳಿಗೆ ಯಾವುದೇ ತೊಂದರೆಯಾಗುವುದು ಬೇಡ. ಖಾಸಗಿ ಆಸ್ಪತ್ರೆಗಳ ಸೇವೆಯನ್ನು ಆರಂಭಿಸಲು ಕ್ರಮವಹಿಸಿ. ಖಾಸಗಿ ಆಸ್ಪತ್ರೆಗಳು ತೆರೆಯದಿದ್ದರೆ ಸಕರ್ಾರಿ ಆಸ್ಪತ್ರೆಗಳ ಮೇಲೆ ಒತ್ತಡ ಹೆಚ್ಚಾಗುತ್ತದೆ. ಈಗಾಗಲೇ ರಾಜ್ಯ ಮಟ್ಟದಲ್ಲಿ ವೈದ್ಯಕೀಯ ಸಂಘಗಳೊಂದಿಗೆ ಮಾತುಕತೆ ನಡೆಸಲಾಗಿದೆ. ಸ್ಥಳೀಯವಾಗಿ ಆಸ್ಪತ್ರೆಗಳು ತೆರೆಯಬೇಕು. ಆಸ್ಪತ್ರೆ ತೆರೆಯದ ಖಾಸಗಿ ಕ್ಲಿನಿಕ್ಗಳ ಮೇಲೆ ಕ್ರಮವಹಿಸಿ ಎಂದು ಸೂಚನೆ ನೀಡಿದರು.
ಅಗತ್ಯ ವಸ್ತುಗಳ ಸಾಗಾಣಿಕೆ ವಾಹನಗಳನ್ನು ಕಡ್ಡಾಯ ತಪಾಸಣೆಮಾಡಿ ಮೂರು ಜನರಗಿಂತ ಹೆಚ್ಚು ಜನರು ಪ್ರಯಾಣಿಸದಂತೆ ಕ್ರಮವಹಿಸಿ. ಈಗಾಗಲೇ ಜಿಲ್ಲೆಯಲ್ಲಿ ಒಳ್ಳೆಯ ನಿಯಂತ್ರಣ ಮಾಡಲಾಗಿದೆ. ಮತ್ತಷ್ಟು ಬಿಗಿ ಕ್ರಮಗಳನ್ನು ಕೈಗೊಂಡು ಕೋವಿಡ್ ಸೋಂಕು ಪತ್ತೆಯಾಗದಂತೆ ಕ್ರಮವಹಿಸಿ ಎಂದು ಹೇಳಿದರು.
ವಲಸೆ ಕಾಮರ್ಿಕರಿಗೆ ವಸತಿ, ಊಟದ ವ್ಯವಸ್ಥೆಮಾಡಿ, ಯಾರೂ ಹಸಿವಿನಿಂದ ಬಳಲಬಾರದು. ಸಕರ್ಾರಿ ವಸತಿ ನಿಲಯಗಳಲ್ಲಿ ವ್ಯವಸ್ಥೆಮಾಡಿ, ಜಿಲ್ಲಾಡಳಿತದಿಂದ ಆಹಾರ ಪೂರೈಸಲು ಕ್ರಮವಹಿಸಿ ಎಂದು ಹೇಳಿದರು.
ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ಆರೋಗ್ಯ ಇಲಾಖೆಯ ಮಾರ್ಗಸೂಚಿಯಂತೆ ಕೋವಿಡ್ ನಿಯಂತ್ರಣಕ್ಕೆ ಐಸೋಲೇಷನ್ ವಾಡರ್್, ಫಿವರ್ ಕ್ಲಿನಿಕ್ ವ್ಯವಸ್ಥೆ, ಸ್ಕ್ರಿನಿಂಗ್ ವ್ಯವಸ್ಥೆ, ಕೋವಿಡ್ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಯಲ್ಲಿ ಕೈಗೊಂಡಿರುವ ಸಿದ್ಧತೆ, ಅಂಬ್ಯುಲೆನ್ಸ್ ವ್ಯವಸ್ಥೆ, ವೆಂಟಿಲೇಟರ್ ವ್ಯವಸ್ಥೆ ಕುರಿತಂತೆ ವಿವರಿಸಿದರು.
ಮನೆ ಮನೆಗೆ ಆರೋಗ್ಯ ತಪಾಸಣೆ ಕಾರ್ಯಕ್ರಮಗಳ ಕುರಿತಂತೆ ಸಚಿವರಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವರ್ಾಹಣಾಧಿಕಾರಿ ರಮೇಶ ದೇಸಾಯಿ ಅವರು ವಿವರಿಸಿದರು.
ಸಭೆಯಲ್ಲಿ ಭಾಗವಹಿಸಿದ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ, ಶಾಸಕರಾದ ನೆಹರು ಓಲೇಕಾರ, ವಿರುಪಾಕ್ಷಪ್ಪ ಬಳ್ಳಾರಿ, ಅರುಣಕುಮಾರ ಗುತ್ತೂರ ಅವರು ಸಭೆಯಲ್ಲಿ ಮಾತನಾಡಿ, ಲಾಕ್ಡೌನ್ ವ್ಯವಸ್ಥೆಯನ್ನು ಮತ್ತಷ್ಟು ಬಿಗಿಗೊಳಿಸಬೇಕು. ಗಡಿ ಭಾಗದಲ್ಲಿ ತಪಾಸಣೆಯನ್ನು ಮತ್ತಷ್ಟು ಬಿಗಿಗೊಳಿಸಬೇಕು. ಕೆಲವು ಹಳ್ಳಿಗಳಿಗೆ ಹೊರ ರಾಜ್ಯದಿಂದ ವ್ಯಕ್ತಿಗಳು ಆಗಮಿಸುತ್ತಿದ್ದಾರೆ. ಇವರಿಗೆ ಯಾವುದೇ ತಪಾಸಣೆ ನಡೆದಿರುವುದಿಲ್ಲ. ಜನರು ಅನಗತ್ಯ ಆತಂಕಕ್ಕೆ ಒಳಗಾಗುತ್ತಿದ್ದಾರೆ. ಗಡಿ ಭಾಗದಲ್ಲೇ ಇವರನ್ನು ಕಡ್ಡಾಯವಾಗಿ ತಡೆದು ಸ್ಕ್ರೀನಿಂಗ್ ಮಾಡಬೇಕು. ಸಾರ್ವಜನಿಕರಿಗೆ ತ್ವರಿತವಾಗಿ ಅಂಬ್ಯಲೆನ್ಸ್ ಸೇವೆ ದೊರಕಬೇಕು. ಮದ್ಯ ಮಾರಾಟ ನಿಷೇಧದಿಂದ ಗ್ರಾಮೀಣ ಭಾಗದಲ್ಲಿ ಕಳ್ಳಭಟಿ ಮಾರಾಟ ಹೆಚ್ಚಾಗಿದೆ. ಅಬಕಾರಿ ಇಲಾಖೆ ನಿಯಂತ್ರಣಕ್ಕೆ ಕ್ರಮವಹಿಸಬೇಕು. ಉಚಿತ ಹಾಲು ವಿತರಣೆ ಪ್ರಮಾಣವನ್ನು ಹೆಚ್ಚಳಮಾಡಬೇಕು ಎಂದು ಮನವಿ ಮಾಡಿಕೊಂಡರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ.ದೇವರಾಜ, ಅಪರ ಜಿಲ್ಲಾಧಿಕಾರಿ ಯೋಗೇಶ್ವರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಂದ್ರ ದೊಡ್ಮನಿ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಆಸ್ಪತ್ರೆ ಭೇಟಿ- ಪರಿಶೀಲನೆ: ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ಬಿ.ಶ್ರೀರಾಮುಲು ಅವರು ಕೋವಿಡ್ ಚಿಕಿತ್ಸೆಗಾಗಿ ಸಿದ್ಧಪಡಿಸಿರುವ ವಿಶೇಷ ವಾಡರ್್ ಹಾಗೂ ಐಸೋಲೇಷನ್ ವಾಡರ್್ಗಳನ್ನು ಪರಿಶೀಲಸಲನೆ ನಡೆಸಿದರು. ವೈದ್ಯರು ಹಾಗೂ ದಾದಿಯರೊಂದಿಗೆ ಮಾತನಾಡಿ ಅವರಿಗೆ ಆತ್ಮವಿಶ್ವಾಸ ತುಂಬಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಹಾಗೂ ಜಿಲ್ಲಾ ಶಸ್ತ್ರ ಚಿಕಿತ್ಸಕ ನಾಗರಾಜ ನಾಯಕ್, ಸಿದ್ಧತೆಗಳ ಕುರಿತಂತೆ ಮಾಹಿತಿ ನೀಡಿದರು.