ಹಾವೇರಿ06: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಅರಣ್ಯ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಸಸಿ ನೆಡುವ ಕಾರ್ಯಕ್ರಮ ಜೂನ್ 7 ರಂದು ಬೆಳಿಗ್ಗೆ 9-30ಕ್ಕೆ ನಗರದ ಲಯನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ (ಬಸವೇಶ್ವರನಗರ) ಜರುಗಲಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀಮತಿ ಎಸ್.ಎಚ್.ರೇಣುಕಾದೇವಿ ಅವರು ಉದ್ಘಾಟನೆ ನೆರವೇರಿಸಲಿದ್ದಾರೆ.
ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ, ಜಿ.ಪಂ.ಮುಖ್ಯ ಕಾರ್ಯನಿವರ್ಾಹಣಾಧಿಕಾರಿ ಕೆ.ಲೀಲಾವತಿ, ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಸಿ.ಸದಾನಂದಸ್ವಾಮಿ, ಪ್ರಧಾನ ಹಿರಿಯ ಸವಿಲ್ ನ್ಯಾಯಾಧೀಶರಾದ ಎ.ವಿ.ಪಾಟೀಲ, ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ವಿ.ಆರ್.ಗುಡಿ, ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಶ್ರೀಮತಿ ಲಕ್ಷ್ಮೀ ಎನ್.ಗರಗ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಎಸ್.ಎಂ.ಧನುರಾಜ, ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಕೆ.ಸಿ.ಪಾವಲಿ, ಕಾರ್ಯದಶರ್ಿ ಪಿ.ಎಂ.ಬೆನ್ನೂರ, ಪ್ರಾದೇಶಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಮಹೇಶ ಕುಮಾರ, ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪಿ.ಕೆ.ಚೌಧರಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿದರ್ೆಶಕ ಅಂದಾನೆಪ್ಪ ವಡಗೇರಿ ಇತರರು ಭಾಗವಸಲಿದ್ದಾರೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯಕಾರ್ಯದಶರ್ಿ ಕೆ.ಶ್ರೀವಿದ್ಯಾ ಅವರು ತಿಳಿಸಿದ್ದಾರೆ.