ಪರಿಶಿಷ್ಟ ಜಾತಿಯ ಒಳಮೀಸಲಾತಿ ವರ್ಗಿಕರಣ ಸಮೀಕ್ಷೆತಾಲೂಕು ಮಟ್ಟದ ತರಬೇತಿದಾರರಿಗೆ ತರಬೇತಿ ಕಾರ್ಯಾಗಾರ
ಗದಗ 28: ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಗದಗ ಜಿಲ್ಲೆ ಇವರುಗಳ ಸಹಯೋಗದಲ್ಲಿ ಪರಿಶಿಷ್ಟ ಜಾತಿಯ ಒಳಮೀಸಲಾತಿ ವರ್ಗಿಕರಣ ಸಮೀಕ್ಷೆ ಕುರಿತು ತಾಲೂಕು ಮಟ್ಟದ ತರಬೇತಿದಾರರಿಗೆ ತರಬೇತಿ ಕಾರ್ಯಾಗಾರ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ ದಲ್ಲಿ ಆಯೋಜಿಸಲಾಗಿತ್ತು.
ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಅವರು ಮಾತನಾಡಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಕಲ್ಪಿಸುವ ಸಂಬಂಧ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ ದಾಸ್ ನೇತೃತ್ವದ ಏಕಸದಸ್ಯ ವಿಚಾರಣಾ ಆಯೋಗದ ಮದ್ಯಂತರ ವರದಿಗೆ ಒಪ್ಪಿಗೆ ಸೂಚಿಸಲಾಗಿದ್ದು ರಾಜ್ಯ ಸರ್ಕಾರದ ಮಹತ್ವದ ಹೆಜ್ಜೆಯಾಗಿದೆ. ಈ ಹಿನ್ನೆಲೆಯಲ್ಲಿ ದತ್ತಾಂಶ ಸಂಗ್ರಹಕ್ಕೆ ಸಮೀಕ್ಷೆ ನಡೆಸಲಾಗುತ್ತಿದೆ. ದಿನಾಂಕ 5-5-2025 ರಿಂದ 17-5-2025 ರವರೆಗೆ ಸಮೀಕ್ಷೆದಾರರು ಮನೆ ಮನೆಗೆ ಭೇಟಿ ನೀಡಿ ಸಮೀಕ್ಷೆ ಕೈಗೊಳ್ಳುವುದು ಹಾಗೂ ದಿನಾಂಕ 19-5-2025 ರಿಂದ 21-5-2025 ರವರೆಗೆ ಸಮೀಕ್ಷೆ ಬ್ಲಾಕ್ ಗಳಲ್ಲಿ ವಿಶೇಷ ಶಿಬಿರಗಳನ್ನು ಕೈಗೊಂಡು ಮನೆ ಮನೆಗೆ ಭೇಟಿ ಅವಧಿಯಲ್ಲಿ ಬಿಟ್ಟು ಹೋದ ಪರಿಶಿಷ್ಟ ಜಾತಿ ಕುಟುಂಬಗಳ ಮಾಹಿತಿಯನ್ನು ಸಂಗ್ರಹಿಸಲಾಗುವುದು ಎಂದರು.
ಸರ್ಕಾರದ ಸೌಲಭ್ಯಗಳು ಪರಿಶಿಷ್ಟ ಜಾತಿಯ ಒಳಪಂಗಡಗಳಿಗೆ ಸಮಾನವಾಗಿ ತಲುಪಬೇಕು ಎನ್ನುವ ಹಿನ್ನೆಲೆಯಲ್ಲಿ ಈ ಸಮೀಕ್ಷೆ ಕೈಗೊಳ್ಳಲಾಗುತ್ತಿದೆ. ಮನೆ ಮನೆಗೆ ಹೋಗಿ ಸಮೀಕ್ಷೆದಾರರು ಸಮೀಕ್ಷೆ ಮಾಡುವಾಗ ಸಹನೆಯಿಂದ ತಾಳ್ಮೆಯಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಅಪರ ಜಿಲ್ಲಾಧಿಕಾರಿ ಶ್ರೀಮತಿ ಅನ್ನಪೂರ್ಣ ಎಂ, ಉಪವಿಭಾಗಾಧಿಕಾರಿ ಗಂಗಪ್ಪ ಎಂ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಮಹೇಶ ಪೋತದಾರ, ತಾಲೂಕು ಮಟ್ಟದ ತರಬೇತಿದಾರರು ಹಾಜರಿದ್ದರು.
ಸಂಪನ್ಮೂಲ ವ್ಯಕ್ತಿ ಬಿ.ಜಿ.ಗಿರಿತಿಮ್ಮಣ್ಣವರ ಸೇರಿದಂತೆ ಮಾಸ್ಟರ್ ಟ್ರೈನರ್‌ಗಳು ತರಬೇತಿದಾರರಿಗೆ ತರಬೇತಿ ನಡೆಸಿಕೊಟ್ಟರು.