ಬೆಂಗಳೂರು, ಮೇ 11,ರಾಜ್ಯದಲ್ಲಿ ಸೋಮವಾರ ಮಂಗಳವಾರ ಭಾರಿ ಗಾಳಿ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳು,ಕರಾವಳಿ ಹಾಗೂ ಮಲೆನಾಡಿನ ಭಾಗದಲ್ಲಿ ಮಳೆಯಾಗಲಿದೆ. ಮಹಾರಾಷ್ಟ್ರ ದಿಂದ ತಮಿಳುನಾಡಿನ ವರೆಗೆ ಟ್ರಫ್ ಏರ್ಪಟ್ಟಿದೆಅರಬ್ಬೀ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿರುವ ಕಾರಣ ಬೆಂಗಳೂರು,ಮೈಸೂರು, ಮಂಡ್ಯ ಭಾಗದಲ್ಲೂ ಮಳೆಯಾಗುವ ಸಾಧ್ಯತೆಯಿದೆ ಎಂದೂ ಇಲಾಖೆ ಮುನ್ಸೂಚನೆ ನೀಡಿದೆ.