ದಲಿತ ಬಾಲಕನ ಮೇಲೆ ಮೂತ್ರ ವಿಸರ್ಜನೆ: ಮನನೊಂದ ಬಾಲಕ ಆತ್ಮಹತ್ಯೆ

Urine on dalit boy: offended boy commits suicide

ಬಳ್ಳಾರಿ 25: ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದ ದಲಿತ ಬಾಲಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ ಹೇಯ ಘಟನೆ ವರದಿಯಾಗಿದೆ. ಘಟನೆ ಕುರಿತು ಪೊಲೀಸರಿಗೆ ದೂರು ಇಡಲಾಗಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕೇಳಿ ಬಂದಿದೆ. ಇದರಿಂದ ಮನನೊಂದ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.  

ಜಾತಿ ಕಾರಣಕ್ಕೆ ಮನುಷ್ಯನೊಬ್ಬನನ್ನು ಅತ್ಯಂತ ಅಮಾನವೀಯವಾಗಿ ನಡೆಸಿಕೊಂಡ ಈ ಘಟನೆ ಸಮಾಜದಲ್ಲಿನ ಕರಾಳತೆಗೆ ಮತ್ತು ಆಡಳಿತದ ವೈಫಲ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಈ ಘಟನೆಯನ್ನು ಎಐಡಿಎಸ್‌ಓ ಬಳ್ಳಾರಿ ಜಿಲ್ಲಾ ಸಮಿತಿಯು ಅತ್ಯಂತ ಕಟುವಾದ ಪದಗಳಲ್ಲಿ ಖಂಡಿಸುತ್ತದೆ. ತಪ್ಪಿತಸ್ಥರಿಗೆ ಕೂಡಲೇ ಉಗ್ರ ಶಿಕ್ಷೆ ವಿಧಿಸುವಂತೆ ಸರ್ಕಾರವನ್ನು ಆಗ್ರಹಿಸುತ್ತದೆ.