ನವದೆಹಲಿ, ಫೆ 20, ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಮರಣದಂಡನೆಗೆ ಒಳಗಾಗಿರುವ ನಾಲ್ವರು ಅಪರಾಧಿಗಳಲ್ಲೊಬ್ಬನಾದ ವಿನಯ್ ತಿಹಾರ್ ಜೈಲಿನ ಗೋಡೆಗೆ ತಲೆ ಚಚ್ಚಿಕೊಂಡು ಗಾಯ ಮಾಡಿಕೊಂಡಿರುವ ಘಟನೆ ನಡೆದಿದೆ ಫೆಬ್ರವರಿ 16ರಂದು ಈ ಹೈಡ್ರಾಮಾ ನಡೆದಿದೆ. ಜೈಲು ಕೋಣೆಗೆ ತಲೆ ಚಚ್ಚಿಕೊಳ್ಳುತ್ತಿದ್ದುದನ್ನು ಗಮನಿಸಿದ ತಕ್ಷಣವೇ ಜೈಲು ಅಧಿಕಾರಿಗಳು ತಡೆದಿದ್ದಾರೆ.
ಗೋಡೆಗೆ ಬಲವಾಗಿ ತಲೆ ಚಚ್ಚಿಕೊಂಡಿದ್ದರಿಂದ ವಿನಯ್ ಶರ್ಮಾಗೆ ಗಾಯವಾಗಿದ್ದು, ಚಿಕಿತ್ಸೆ ಕೊಡಿಸಲಾಗಿದೆ ಎಂದು ತಿಳಿದು ಬಂದಿದೆ ನಿರ್ಭಯಾ ಅತ್ಯಾಚಾರಿಗಳ ಪೈಕಿ ಒಬ್ಬನಾಗಿರುವ ವಿನಯ್ ಶರ್ಮಾ ಗೋಡೆಗೆ ತಲೆ ಚೆಚ್ಚಿಕೊಂಡಿರುವುದು ಸತ್ಯ, ತಲೆಗೆ ಗಾಯವಾಗಿದೆ ಎಂದು ಜೈಲಿನ ಮೂಲಗಳು ಖಚಿತಪಡಿಸಿವೆ. ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ಅಪರಾಧಿಗಳನ್ನು ಮಾರ್ಚ್ 3ರಂದು ಗಲ್ಲಿಗೇರಿಸುವಂತೆ ದೆಹಲಿ ನ್ಯಾಯಾಲಯ ಸೋಮವಾರ ಆದೇಶಿಸಿದೆ. ಮುಖೇಶ್ ಕುಮಾರ್ ಸಿಂಗ್(32), ಪವನ್ ಗುಪ್ತಾ(25), ವಿನಯ್ ಕುಮಾರ್ ಶರ್ಮಾ(26), ಅಕ್ಷಯ್ ಕುಮಾರ್(31) ಈ ನಾಲ್ವರು ಅಪರಾಧಿಗಳು ಗಲ್ಲು ಶಿಕ್ಷೆಗೆ ಗುರಿಯಾಗಿದ್ದಾರೆ.