ಕೊಪ್ಪಳ 12: ಮಕ್ಕಳು ಈ ದೇಶದ ಸಂಪತ್ತು. ಅವರ ಆರೋಗ್ಯ ಕಾಪಾಡುವುದು ಪಾಲಕರ ಮತ್ತು ಇಲಾಖೆಗಳ ಜವಾಬ್ದಾರಿಯಾಗಿದ್ದು, 05 ರಿಂದ 16 ವರ್ಷದ ಮಕ್ಕಳಿಗೆ ತಮ್ಮ ಸಮೀಪದ ಶಾಲೆಗಳಲ್ಲಿ ಡಿ.ಪಿ.ಟಿ & ಟಿ.ಡಿ ಲಸಿಕೆಯನ್ನು ಕಡ್ಡಾಯವಾಗಿ ಹಾಕಿಸಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಲಿಂಗರಾಜು ಟಿ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕೇಂದ್ರೀಯ ವಿದ್ಯಾಲಯ, ಶಾಸಕರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೊಪ್ಪಳ ಇವರ ಸಂಯುಕ್ತ ಆಶ್ರಯದಲ್ಲಿ ಡಿ. 11ರಿಂದ ಡಿ. 31ವರೆಗೆ ಹಮ್ಮಿಕೊಳ್ಳಲಾದ ಡಿ.ಪಿ.ಟಿ & ಟಿ.ಡಿ ಶಾಲಾ ಲಸಿಕಾ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಹಾಗೂ ಜಿಲ್ಲೆಯಲ್ಲಿ ಡಿಪ್ತೀರಿಯಾ ಪ್ರಕರಣ ಕಂಡುಬಂದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ 05 ರಿಂದ 06 ವರ್ಷದ ಸಕರ್ಾರಿ, ಅನುದಾನಿತ, ಖಾಸಗಿ ಶಾಲೆಗಳ ಮಕ್ಕಳಿಗೆ ಡಿ.ಪಿ.ಟಿ ಲಸಿಕೆ ಹಾಗೂ 07 ರಿಂದ 16 ವರ್ಷದ ಸಕರ್ಾರಿ, ಅನುದಾನಿತ, ಖಾಸಗಿ ಶಾಲೆಗಳ ಮಕ್ಕಳಿಗೆ ಟಿ.ಡಿ ಲಸಿಕೆಯನ್ನು ಅಭಿಯಾನದ ಮುಖಾಂತರ ಆಯೋಜಿಸಲಾಗಿದೆ. ಈ ಲಸಿಕೆ ಹಾಕಿಸುವುದರಿಂದ ಗಂಟಲುಮಾರಿ, ನಾಯಿಕೆಮ್ಮು ಮತ್ತು ಧನರ್ುವಾಯು ಖಾಯಿಲೆಯನ್ನು ತಡೆಗಟ್ಟಬಹುದು. ಲಸಿಕೆ ಹಾಕಿಸದಿದ್ದರೆ ಈ ರೋಗಗಳಿಗೆ ತುತ್ತಾಗುವ ಸಾಧ್ಯತೆ ಇರುತ್ತದೆ. ಈಗಾಗಲೇ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಕಾರ್ಯಕ್ರಮ ಯಶಸ್ವಿಗೊಳಿಸಲು ಕ್ರಿಯಾಯೋಜನೆ ತಯಾರಿಸಿಕೊಂಡು ಆಶಾ ಕಾರ್ಯಕತರ್ೆಯರಿಗೆ, ಕಿ.ಆ.ಸ(ಮ/ಪು), ಹಿ.ಆ.ಸ(ಮ/ಪು), ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳು, ವೈದ್ಯಾಧಿಕಾರಿಗಳಿಗೆ, ಇನ್ನುಳಿದ ಇತರೆ ಸಿಬ್ಬಂದಿಗೆ ತರಬೇತಿ ನೀಡಲಾಗಿದ್ದು, ಕಾರ್ಯಕ್ರಮ ಜಿಲ್ಲೆಯಾದ್ಯಂತ ನಡೆಯಲಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಜಂಬಯ್ಯ ಬಿ, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ. ಎಸ್.ಕೆ ದೇಸಾಯಿ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಮಹೇಶ ಎಂ.ಜಿ, ಜಿಲ್ಲಾ ಸವರ್ೇಕ್ಷಣಾಧಿಕಾರಿ ಡಾ. ಪ್ರಕಾಶ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರಾಮಾಂಜನೇಯ, ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ ಸೊನ್ನದ, ಶಾಸಕರ ಸ.ಹಿ.ಮಾ.ಪ್ರಾ.ಶಾಲೆಯ ಮುಖ್ಯೋಪಾಧ್ಯಾಯರಾದ ಶಿವರೆಡಿ,್ಡ ಡಾ. ಮಹೇಶ ಉಮಚಗಿ, ಕಿ.ಆ.ಸ (ಮ\ಪು), ಆಶಾ ಕಾರ್ಯಕತರ್ೆಯರು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಶಾಲಾ ವಿದ್ಯಾಥರ್ಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು. ಕ್ಷೇ.ಆ.ಶಿ ಗಂಗಮ್ಮ ಕಾರ್ಯಕ್ರಮ ನಿರೂಪಿಸಿದರು, ಹಿ.ಆ.ಸ ಎಸ್.ಬಿ ಚಿಕ್ಕನರಗುಂದ ಸ್ವಾಗತಿಸಿ ವಂದಿಸಿದರು.