ಶೀಘ್ರದಲ್ಲಿ ಬಾಗಲಕೋಟೆಗೆ ವಂದೇ ಭಾರತ ರೈಲು : ಸೋಮಣ್ಣ

Vande Bharat train to Bagalkot soon: Somanna

ಪುನರಾಭಿವೃದ್ಧಿಗೊಂಡ ಬಾಗಲಕೋಟೆ ರೈಲು ನಿಲ್ದಾಣ ಲೋಕಾರ್ಪಣೆಗೊಳಿಸಿದ ಪಿಎಂ 

ಬಾಗಲಕೋಟೆ, ರಾಜ್ಯದ 12 ಜಿಲ್ಲೆಗಳಲ್ಲಿ ಈಗಾಗಲೇ ವಂದೇ ಭಾರತ ರೈಲು ಸಂಚರಿಸುತ್ತಿದ್ದು, ಶೀಘ್ರದಲ್ಲಿಯೇ ಬಾಗಲಕೋಟೆಯಲ್ಲೂ ಕೂಡಾ ಸಂಚರಿಸಲಿದೆ ಎಂದು ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು. 

ಬಾಗಲಕೋಟೆ ರೈಲ್ವೆ ನಿಲ್ದಾಣದಲ್ಲಿ ಗುರುವಾರ ನಡೆದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವರ್ಚ್ಯೂವಲ್ ವೇದಿಕೆ ಮೂಲಕ ಅಮೃತ ಭಾರತ ನಿಲ್ದಾಣ ಯೋಜನೆ ಅಡಿಯಲ್ಲಿ ಪುನರಾಭಿವೃದ್ದಿಗೊಂಡ 103 ರೈಲ್ವೆ ನಿಲ್ದಾಣಗಳ ಮತ್ತು ಇತರೆ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು ರೈಲ್ವೆ ಇಲಾಖೆಯಲ್ಲಿ ಕಳೆದ 10 ವರ್ಷಗಳಲ್ಲಿ ಸಾಕಷ್ಟು ಅಭಿವೃದ್ದಿ ಕಾರ್ಯ ನಡೆದಿದ್ದು, ಮುಂದಿನ ಜನಾಂಗ ಭವಿಷ್ಯ ರೂಪಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ರೈಲ್ವೆ ಇಲಾಖೆಯ ಮಹತ್ತರವಾದ ಸಂದೇಶ ಹಾಗೂ ಕಾರ್ಯಗಳನ್ನು ದೇಶವಾಸಿಗಳು ಗಮಿನಿಸುತ್ತಿದ್ದಾರೆ ಎಂದರು. 

ಇಂದು ದೇಶದಾದ್ಯಂತ 103 ರೈಲ್ವೆ ನಿಲ್ದಾಣಗಳನ್ನು ಅಮೃತ ಭಾರತ ನಿಲ್ದಾಣ ಯೋಜನೆಯಡಿ 15000 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರು ಲೋಕಾರೆ​‍್ಣಗೊಳಿಸಿದ್ದಾರೆ. ಅದರಲ್ಲಿ ರಾಜ್ಯದ ಬಾಗಲಕೋಟೆ, ಮುನರಾಬಾದ್, ಗದಗ, ದಾರವಾಡ ಹಾಗೂ ಗೋಕಾಕ ಸೇರಿದ್ದು, ಈ ಭಾಗದ 13ಕ್ಕೂ ಹೆಚ್ಚು ರೈಲ್ವೆ ನಿಲ್ದಾಣಗಳಿಗೆ 300 ಕೋಟಿ ವೆಚ್ಚದಲ್ಲಿ ಆಧುನಿಕರಣಗೊಳಿಸಲಾಗುತ್ತಿದೆ. ಗದಗ-ವಾಡಿ, ಕುಡಚಿ-ಬಾಗಲಕೋಟೆ ಸೇರಿದಂತೆ ಇನ್ನು ಅನೇಕ ಯೋಜನೆಗಳ ಬಗ್ಗೆ ಈಗಾಗಲೇ ಹೇಳಿದ ಹಾಗೆ ಈಡೀ ರಾಷ್ಟ್ರದಲ್ಲಿ 444000 ಕಿ.ಮೀಗಳಿಗೆ 7.50 ಲಕ್ಷ ಕೋಟಿ ರೂ.ಗಳ ಯೋಜನೆ ಕೈಗೆತ್ತಿಗೊಳ್ಳಲಾಗಿದೆ ಎಂದರು. 

ಈ ಯೋಜನೆಯಲ್ಲಿ ರಾಜ್ಯದಲ್ಲಿ 43 ಸಾವಿರ ಕೋಟಿ ರೂ.ಗಳ ವೆಚ್ಚದಲ್ಲಿ ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಅದರಲ್ಲಿ 11 ಯೋಜನೆಗಳನ್ನು ತ್ವರಿತವಾಗಿ ಮುಗಿಸಲು ಕ್ರಮಕೈಗೊಳ್ಳಲಾಗುತ್ತಿದೆ. ಈ 11 ಯೋಜನೆಗಳಲ್ಲಿ ಬಾಗಲಕೋಟೆ-ಕುಡಚಿ, ಗದಗ-ಹುಟಗಿ, ಗದಗ-ವಾಡಿ, ರಾಯಚೂರು-ಗಿಣಿಗೇರಾ ಒಳಗೊಂಡ ಕಾಮಗಾರಿಗಳನ್ನು 33 ಸಾವಿರ ಕೋಟಿ ರೂ.ಗಳಲ್ಲಿ ಹಂತ ಹಂತವಾಗಿ ಪೂರ್ಣಗೊಳಿಸಲಾಗುವುದೆಂದು ತಿಳಿಸಿದರು. 

ಸಂಸದ ಪಿ.ಸಿ.ಗದ್ದಿಗೌಡರ ಮಾತನಾಡಿ ಬಾಗಲಕೋಟೆ-ಕುಡಚಿ ಮಾರ್ಗ ತೀರ್ವಗತಿಯಲ್ಲಿ ಪ್ರಗತಿ ನಡೆದಿದೆ. ಇದರಿಂದ ಬಾಗಲಕೋಟೆಯ ವ್ಯಾಪಾರ ವಹಿವಾಟು ಉತ್ತಮವಾಗಿ ನಡೆದು, ಇಲ್ಲಿಯ ಉತ್ಪನ್ನಗಳಾದ ಸಕ್ಕರೆ ಸಿಮೆಂಟ್, ಇಳಕಲ್ಲ ಸೀರೆ ಹಾಗೂ ಪ್ರವಾಸೋದ್ಯಮ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದರು. 

ವಿಧಾನ ಪರಿಷತ್ ಶಾಸಕ ಪಿ.ಎಚ್‌.ಪೂಜಾರ ಮಾತನಾಡಿ ಬಾಗಲಕೋಟೆ ನಗರ ಆಗಾದವಾಗಿ ಬೆಳೆಯುತ್ತಿದ್ದು, ಇಲ್ಲಿಯ ಕಾರ್ಮಿಕರು, ಸಾರ್ವಜನಿಕರು ಹಾಗೂ ವ್ಯಾಪಾರಸ್ಥರು ಗುಜರಾತ ಮತ್ತು ರಾಜ್ಯಸ್ಥಾನಕ್ಕೆ ತೆರಳುತ್ತಿದ್ದು, ಅವರಿಗೆ ರೈಲು ಸೇವೆ ಒದಗಿಸಬೇಕು. ಬೆಂಗಳೂರಿನಿಂದ ಹುಬ್ಬಳ್ಳಿಗೆ ಜನಶತಾಬ್ದಿ ಎಕ್ಸಪ್ರೇಸ್ ಸೇವೆ, ಗೋಲಗುಂಬಜ ಎಕ್ಸಪ್ರೇಸ್‌ನಲ್ಲಿ 1 ಟೈಯರ್ ಎಸಿ, 2 ಟೈಯರ ಎಸಿ ಕೋಚ್‌ಗಳು ಒಟ್ಟಿಗೆ ಇರುತ್ತಿದ್ದು, ಅವುಗಳನ್ನು ಪ್ರತ್ಯೇಕ ಮಾಡುವಂತೆ ಮನವಿ ಮಾಡಿದರು. 

ತೇರದಾಳ ಶಾಸಕ ಸಿದ್ದು ಸವದಿ ಮಾತನಾಡಿ ರೈಲ್ವೆ ಇಲಾಖೆ ಇತ್ತೀಚಿನ ದಿನಗಳಲ್ಲಿ ಅನೇಕ ಜನಪರ ಕಾರ್ಯಗಳನ್ನು ಮಾಡುತ್ತಿದ್ದು, ಮೊದಲು ರೈಲ್ವೆ ನಿಲ್ದಾಣಕ್ಕೆ ಬಂದಾಗ ಗಬ್ಬು ವಾಸನೆ ಸ್ವಾಗತಿಸುತ್ತಿದ್ದು, ಇಂದು ಪ್ರಧಾನಮಂತ್ರಿಗಳ ಮುತುವರ್ಜಿಯಿಂದಾಗಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈ ಭಾಗದ ಪ್ರಮುಖ ಯೋಜನೆಯಾದ ಕುಡಚಿ-ಬಾಗಲಕೋಟೆ ರೈಲ್ವೆ ಮಾರ್ಗ ಪೂರ್ಣಗೊಳಿಸಲು ಮನವಿ ಮಾಡಿಕೊಂಡರು. 

ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ, ವಿಧಾನ ಪರಿಷತ್ ಶಾಸಕ ಹಣಮಂತ ನಿರಾಣಿ, ಮಾಜಿ ಸಚಿವ ಮುರುಗೇಶ ನಿರಾಣಿ, ಮಾಜಿ ಶಾಸಕ ವೀರಣ್ಣ ಚರಂತಿಮಠ, ನಗರಸಭೆ ಅಧ್ಯಕ್ಷೆ ಸವಿತಾ ಲೆಂಕಣ್ಣವರ, ಉಪಾದ್ಯಕ್ಷೆ ಶೋಭಾ ದಾಸ್, ಹುಬ್ಬಳ್ಳಿ ರೈಲ್ವೆ ವಿಭಾಗದ ವ್ಯವಸ್ಥಾಪಕಿ ಬೆಲಾ ಮೀನಾ, ಜಿಲ್ಲಾಧಿಕಾರಿ ಜಾನಕಿ ಕೆ.ಎಂ, ಜಿ.ಪಂ ಸಿಇಒ ಶಶಿಧರ ಕುರೇರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ಬಾಗಲಕೋಟೆ ರೈಲ್ವೆ ನಿಲ್ದಾಣದ ಎಸ್‌ಆರ್ ಅರವಿಂದ ಹೆರೇ​‍್ಲ ಸೇರಿದಂತೆ ಇತರರು ಉಪಸ್ಥಿತರಿದ್ದರು.