ವಾರಣಾಸಿ, ಡಿ23 - ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿ ವಿರುದ್ಧ ಪೊಲೀಸರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ ಸಂತ್ರಸ್ತೆ ಹಾಗೂ ಆಕೆಯ ಪೋಷಕರು ಪೊಲೀಸ್ ಠಾಣೆ ಎದುರೇ ವಿಷ ಸೇವಿಸಿದ ಘಟನೆ ವಾರಣಾಸಿಯಲ್ಲಿ ನಡೆದಿದೆ.
ತಕ್ಷಣ ಈ ಮೂವರನ್ನು ದೀನ್ ದಯಾಳ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.
ಸಂತ್ರಸ್ತ ಯುವತಿ ಮತ್ತು ಆಕೆಯ ಪೋಷಕರು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಡ ಹೇರುತ್ತಿದ್ದರು. ಈ ಸಂಬಂಧ ಈಗಾಗಲೇ ಇಬ್ಬರನ್ನು ಬಂಧಿಸಲಾಗಿದೆ. ಆದರೆ ಇನ್ನೋರ್ವ ಆರೋಪಿ ವಿರುದ್ಧ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ಇಂತಹ ವಿಪರೀತದ ಕ್ರಮ ಕೈಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಚಿತ್ರನಲ್ಲಿ ನಟಿಸಲು ಅವಕಾಶ ಕಲ್ಪಿಸುವುದಾಗಿ ತನ್ನನ್ನು ಮುಂಬೈಗೆ ಕರೆದೊಯ್ದಿದ್ದ ಮೂವರು ಯುವಕರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಈ ಸಂದರ್ಭದಲ್ಲಿ ಆಕೆಯ ಸಹೋದರನನ್ನು ಹತ್ಯೆ ಮಾಡಿ ಗಂಗಾ ನದಿಗೆ ಎಸೆದಿದ್ದಾರೆ ಎಂದು ಆಕೆ ಸಲ್ಲಿಸಿರುವ ದೂರಿನಲ್ಲಿ ಆರೋಪಿಸಲಾಗಿದೆ.