ಕುನ್ನೂರ ಕರಿಯಮ್ಮ ದೇವಿ ಜಾತ್ರಾ ಮಹೋತ್ಸವದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು
ಶಿಗ್ಗಾವಿ 26: ತಾಲೂಕಿನ ಕುನ್ನೂರ ಗ್ರಾಮದ ಕರಿಯಮ್ಮ ದೇವಿ ಮೂರ್ತಿ ಪ್ರಾಣಪ್ರತಿಷ್ಟಾಪನೆ ಹಾಗೂ ಜಾತ್ರಾ ಮಹೋತ್ಸವ ಏಪ್ರಿಲ್ 28 ರಿಂದ ಮೇ 2 ವರೆಗೆ ನಡೆಯಲಿದ್ದು ವಿವಿಧ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ಏ.28 ರಂದು ಬೆಳಿಗ್ಗೆ ದೇವಿಯ ಮೂರ್ತಿ ಮೆರವಣಿಗೆಯು ಗ್ರಾಮದ ಪ್ರಮುಖ ಬಿದಿಗಳಲ್ಲಿ ಕುಂಭಮೇಳ ಹಾಗೂ ಸಕಲ ವಾದ್ಯ ವೈಭವಗಳೊಂದಿಗೆ ಜರುಗುವುದು ನಂತರ ಸಾಯಂಕಾಲ ನಡೆಯಲಿರುವ ಧಾರ್ಮಿಕ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಚಿತ್ರದುರ್ಗದ ಮಾದರ ಚನ್ನಯ ಪೀಠದ ಶ್ರೀ ಬಸವಮೂರ್ತಿ ಮಾದರ ಚನ್ನಯ್ಯ ಸ್ವಾಮಿಗಳು ವಹಿಸಿಕೊಳ್ಳಲಿದ್ದು, ವೇ.ಮೊ. ಸೋಮಯ್ಯ ಹಿರೇಮಠ ಸಾನಿಧ್ಯ ವಹಿಸಲಿದ್ದಾರೆ. ಕಾರ್ಯಕ್ರಮವನ್ನು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಉದ್ಘಾಟಿಸುವರು.
ಏ.29 ರಂದು ದೇವಸ್ಥಾನದಲ್ಲಿ ವಾಸಾಧಿಗಳಿಗೆ ಹೋಮ-ಹವನ, ನವಗ್ರಹ ಪೂಜೆ ಮತ್ತು ರುದ್ರಾಭಿಷೇಕ ಜರುಗುವುದು ಸಂಜೆ ನಡೆಯಲಿರುವ ಧಾರ್ಮಿಕ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶಿಗ್ಗಾವಿ ವಿರಕ್ತಮಠದ ಸಂಗನಬಸವ ಸ್ವಾಮಿಗಳು ವಹಿಸಿಕೊಳ್ಳಲಿದ್ದು, ವೇ.ಮೊ. ಸೋಮಯ್ಯ ಹಿರೇಮಠ ಸಾನಿಧ್ಯ ವಹಿಸಲಿದ್ದಾರೆ. ಕಾರ್ಯಕ್ರಮವನ್ನು ಶಾಸಕ ಯಾಸೀರಅಹ್ಮದ್ ಖಾನ ಉದ್ಘಾಟಿಸುವರು. ಏ.30 ಬೆಳಿಗ್ಗೆ ದೇವಿ ಮೂರ್ತಿಗಳ ಪ್ರಾಣಪ್ರತಿಷ್ಟಾಪನೆ ಮತ್ತು ಕಳಸಾರೋಹಣ ಜರಗುವುದು ಸಂಜೆ ನಡೆಯಲಿರುವ ಧಾರ್ಮಿಕ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಹಿರೇಮಣಕಟ್ಟಿ ಶ್ರೀ ಮುರುಘೇಂದ್ರ ಮಠದ ಷ.ಬ್ರ. ವಿಶ್ವಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ವಹಿಸಿಕೊಳ್ಳಲಿದ್ದು, ವೇ.ಮೊ. ಸೋಮಯ್ಯ ಹಿರೇಮಠ ಸಾನಿಧ್ಯ ವಹಿಸಲಿದ್ದಾರೆ. ಕಾರ್ಯಕ್ರಮವನ್ನು ಮಾಜಿ ಶಾಸಕ, ಹೆಸ್ಕಾಂ ಅಧ್ಯಕ್ಷ ಸೈಯದ ಅಜೀಮಪೀರ್ ಖಾದ್ರಿ ಉದ್ಘಾಟಿಸುವರು.
ಮೇ.1 ರಂದು ಬೆಳಿಗ್ಗೆ ಪಲ್ಲಕ್ಕಿ ಉತ್ಸವ ಹಾಗೂ ಉಡಿ ತುಂಬುವ ಕಾರ್ಯಕ್ರಮ ಜರಗುವುದು. ಸಂಜೆ ನಡೆಯಲಿರುವ ಧಾರ್ಮಿಕ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ನರಸೀಪುರ ಶಾಂತಭೀಷ್ಮ ಮಹಾಸ್ವಾಮಿಗಳು ವಹಿಸಿಕೊಳ್ಳಲಿದ್ದು, ವೇ.ಮೊ. ಸೋಮಯ್ಯ ಹಿರೇಮಠ ಸಾನಿಧ್ಯ ವಹಿಸಲಿದ್ದಾರೆ. ಕಾರ್ಯಕ್ರಮವನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಉದ್ಘಾಟಿಸುವರು. ಮೇ.2 ರಂದು ಬೆಳಿಗ್ಗೆ ಅಗ್ನಿ ಪ್ರವೇಶ ಕಾರ್ಯಕ್ರಮ ಜರಗುವುದು ಸಂಜೆ ನಡೆಯಲಿರುವ ಧಾರ್ಮಿಕ ಕಾರ್ಯಕ್ರಮ ದಿವ್ಯ ಸಾನಿಧ್ಯವನ್ನು ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ಜಗದ್ಗುರು ಪ್ರಸನ್ನಾನಂದಪುರಿ ಸ್ವಾಮಿಗಳು ವಹಿಸಿಕೊಳ್ಳಲಿದ್ದು, ವೇ.ಮೊ. ಶ್ರೀ ಸೋಮಯ್ಯ ಹಿರೇಮಠ ಸಾನಿಧ್ಯ ವಹಿಸಲಿದ್ದಾರೆ. ಕಾರ್ಯಕ್ರಮವನ್ನುಭಾರತ ಸೇವಾ ಸಂಸ್ಥೆ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ ಉದ್ಘಾಟಿಸುವರು ಎಂದು ಕರಿಯಮ್ಮ ದೇವಿ ದೇವಸ್ಥಾನದ ಆಡಳಿತ ಮಂಡಳಿ ಪ್ರಕಟಣೆಗೆ ತಿಳಿಸಿದೆ.