ವಿಜಯಪುರ: ಲೋಕಸಭಾ ಚುನಾವಣೆ: ಜಿಲ್ಲಾಧಿಕಾರಿಗಳಿಂದ ಸೈನಿಕಶಾಲೆಗೆ ಭೇಟಿ

ವಿಜಯಪುರ 29: ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಪಟ್ಟಂತೆ ನಾಗಠಾಣ ವಿಧಾನಸಭಾ ಕ್ಷೇತ್ರದ ಮಸ್ಟರಿಂಗ್ ಡಿಮಸ್ಟರಿಂಗ್ ಹಾಗೂ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟ ಮತ ಏಣಿಕೆಗೆ ಮಾಡಿಕೊಳ್ಳಬೇಕಾದ ಸಿದ್ಧತೆಗಳ ಕುರಿತು ಪರಿಶೀಲಿಸಲು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಇಂದು ನಗರದ ಸೈನಿಕ್ ಶಾಲೆಗೆ ಭೇಟಿ ನೀಡಿ ವೀಕ್ಷಣೆ ನಡೆಸಿದರು. 

ಶುಕ್ರವಾರ ಸಂಜೆ ನಗರದ ಸೈನಿಕ್ ಶಾಲೆಗೆ ಭೇಟಿ ನೀಡಿ ನಾಗಠಾಣ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ಮಸ್ಟರಿಂಗ್ ಮತ್ತು ಡಿಮಸ್ಟರಿಂಗ್ ಕಾರ್ಯವು ಸೈನಿಕ್ ಶಾಲೆಯಲ್ಲಿ ನಡೆಯಲಿದ್ದು, ಅದರಂತೆ ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಪಟ್ಟ ಮತ ಏಣಿಕೆ ಕಾರ್ಯವು ಸೈನಿಕ್ ಶಾಲೆಯಲ್ಲಿ ನಡೆಯಲಿದ್ದು, ಇದೇ ಏಪ್ರಿಲ್ 12 ರಿಂದ ಶಾಲೆಯಲ್ಲಿ ಭದ್ರತಾ ಕೊಠಡಿ ಸ್ಥಾಪನೆ ಮತ್ತು ಇತರೆ ಚುನಾವಣಾ ಕಾರ್ಯಗಳ ಅನುಕೂಲಕ್ಕಾಗಿ ಸುಪದರ್ಿಗೆ ಪಡೆಯಲು ಜಿಲ್ಲಾಧಿಕಾರಿಗಳೂ ಅಧಿಕಾರಿಗಳಿಗೆ ಸೂಚಿಸಿದರು. 

ಸೈನಿಕ್ ಶಾಲೆಯ ಪ್ರಾಂಶುಪಾಲ ಕ್ಯಾಪ್ಟನ್ ವಿನಯ ತಿವಾರಿ, ಉಪ ಪ್ರಾಂಶುಪಾಲ ರವಿಕಾಂತ, ಆಡಳಿತಾಧಿಕಾರಿ ಮೇಜರ್ ವಿಕ್ರಂ ಅವರೊಂದಿಗೆ ಮಾಡಬೇಕಾದ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಪ್ರಕಾಶ ನಿಕ್ಕಂ, ಅಪರ ಜಿಲ್ಲಾಧಿಕಾರಿ ಎಚ್. ಪ್ರಸನ್ನ ಉಪಸ್ಥಿತರಿದ್ದು, ಮುಂಬರುವ ಲೋಕಸಭಾ ಚುನಾವಣೆ ಅಂಗವಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚಚರ್ಿಸಿದರು. 

ಇದೇ ಸಂದರ್ಭದಲ್ಲಿ ಸೈನಿಕ ಶಾಲೆಯಲ್ಲಿ ಭದ್ರತಾ ಕೊಠಡಿಗಳ ಸುಸ್ಥಿತಿಯ ಬಗ್ಗೆ ಹಾಗೂ ನಾಗಠಾಣ ಕ್ಷೇತ್ರದ ಮಸ್ಟರಿಂಗ್ ಮತ್ತು ಡಿ ಮಸ್ಟರಿಂಗ್ ಕಾರ್ಯ ಸಂದರ್ಭದಲ್ಲಿ ಸಿಬ್ಬಂದಿಗಳಿಗೆ ಇವಿಎಂ ವಿವಿಪ್ಯಾಟ್ಗಳ ನಿರ್ವಹಣೆ ಮತ್ತು ಇತರೆ ಸೌಕರ್ಯಗಳ ಅನುಕೂಲತೆಗಳ ಬಗ್ಗೆ ಪರಿಶೀಲಿಸಿದರು. ಇದೇ ಸಂದರ್ಭದಲ್ಲಿ ನಾಗಠಾಣ ಮತಕ್ಷೇತ್ರ ಹೊರತುಪಡಿಸಿ ಇತರೆ ವಿಧಾನಸಭಾ ಕ್ಷೇತ್ರಗಳ ಮಸ್ಟರಿಂಗ್ ಮತ್ತು ಡಿ ಮಸ್ಟರಿಂಗ್ ಕಾರ್ಯವು ಆಯಾ ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯಲಿದೆ ಎಂದು ತಿಳಿಸಿದರು. ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿದರ್ೇಶಕ ಟಿ.ಸಿದ್ದಣ್ಣ, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಅಭಿಯಂತರ ಪಾಟೀಲ, ಸಹಾಯಕ ಕಾರ್ಯನಿರ್ವಾಹಕ  ಅಭಿಯಂತರ ಇನಾಂದಾರ, ಸೈನಿಕ ಶಾಲೆಯ ಅಧೀಕ್ಷಕ ಜೊಸೆಫ್ ರಾಜು, ನಿರ್ಮಿತಿ  ಕೇಂದ್ರದ ಅಧಿಕಾರಿ ಮಲಜಿ  ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.