ಲೋಕದರ್ಶನ ವರದಿ
ವಿಜಯಪುರ 10: ವಿಜಯಪುರ ಮೀಸಲು ಲೋಕಸಭಾ ಕ್ಷೇತ್ರದಿಂದ ಮೂರನೇ ಬಾರಿ ಬಿಜೆಪಿ ಅಭ್ಯಥರ್ಿಯಾಗಿ ಸ್ಪಧಿಸಿರುವ ಕೇಂದ್ರ ಸಚಿವ ರಮೇಶ ಜಿಗಜಿಣಗಿ ಅವರು ನಿಶ್ಚಿತವಾಗಿ ಗೆಲ್ಲುತ್ತಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಚಂದ್ರಶೇಖರ ಕವಟಗಿ ವಿಶ್ವಾಸ ವ್ಯಕ್ತಪಡಿಸಿದರು.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ಜಿಗಜಿಣಗಿ ಗೆಲ್ಲುವುದರಲ್ಲಿ ಯಾವುದೇ ಅನುಮಾನವೇ ಇಲ್ಲ. ಆದರೆ ಅವರು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸುವ ನಿಟ್ಟಿನಲ್ಲಿ ನಾವು ಪ್ರಯತ್ನ ಮಾಡುತ್ತಿದ್ದೇವೆ ಎಂದು ಹೇಳಿದರು.
ದೇಶದಲ್ಲಿ ಮೋದಿ ಸರಕಾರ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕೆಂಬ ಅಭಿಪ್ರಾಯ ಲ್ಲೆಡೆ ವ್ಯಕ್ತವಾಗುತ್ತಿದೆ. ಇದನ್ನು ಗಮನಿಸಿದರೆ ಬಿಜೆಪಿ 300ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತದೆ. ನರೇಂದ್ರ ಮೋದಿ ಅವರು ಮತ್ತೆ ಈ ದೇಶದ ಪ್ರಧಾನಿಯಾಗುತ್ತಾರೆ ಎಂದು ಭವಿಷ್ಯ ನುಡಿದರು.
ಬಿಜೆಪಿ ಅಭ್ಯರ್ಥಿ ಚುನಾವಣಾ ಪ್ರಚಾರಕ್ಕಾಗಿ ಕೇಂದ್ರ ಸಚಿವೆ ಸ್ಮತಿ ಇರಾನಿ ಅವರು ವಿಜಯಪುರಕ್ಕೆ ಆಗಮಿಸುವ ಸಾಧ್ಯತೆ ಇದ್ದು, ಈ ಬಗ್ಗೆ ಒಂದೆರಡು ದಿನಗಳಲ್ಲಿ ದಿನಾಂಕ ನಿಗದಿಯಾಗಲಿದೆ. ಇದೇ ದಿ. 13 ರಂದು ಆರ್.ಎಸ್.ಎಸ್.ರಾಷ್ಟ್ರೀಯ ಸಹ ಸಂಘಟನಾ ಕಾರ್ಯದಶರ್ಿ ಬಿ.ಎಲ್.ಸಂತೋಷ ಅವರು ಆಗಮಿಸಲಿದ್ದು. ಅಂದು ಸಂಜ್ ಎ5.30ಕ್ಕೆ ಐಶ್ವರ್ಯ ನಗರದಲ್ಲಿರುವ ಕಿತ್ತೂರ ಚನ್ನಮ್ಮ ಸಮುದಾಯ ಭವನದಲ್ಲಿ ನಡೆಯುವ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಮುಖಂಡರಾದ ಭೀಮಾಶಂಕರ ಹದನೂರ, ಸಂಗಮೇಶ ಹೌದೆ, ವಿಜಯ ಜೋಶಿ, ಬಾಪುಸಿಂಗ್ ರಜಪೂತ, ಗೂಳಪ್ಪ ಶೆಟಗಾರ, ಶಿವಶರಣ ಮುಂತಾದವರು ಉಪಸ್ಥಿತರಿದ್ದರು.