ವಿಜಯಪುರ 14: ಮಹಾರಾಷ್ಟ್ರ ರಾಜ್ಯ ವಿಧಾನ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯದ ಗೃಹ ಇಲಾಖೆಯ ಮಾಜಿ ಸಚಿವರು, ಹಾಲಿ ಶಾಸಕರಾದ ಎಂ.ಬಿ.ಪಾಟೀಲ ಅವರನ್ನು ಲಾತೂರ ಜಿಲ್ಲೆಯ ಚುನಾವಣಾ ವೀಕ್ಷಕರನ್ನಾಗಿ ಹಾಗೂ ಮಾಜಿ ಶಾಸಕ ಪ್ರೊ. ರಾಜು ಆಲಗೂರ ಅವರನ್ನು ಲಾತೂರ ಗ್ರಾಮೀಣ ಮತಕ್ಷೇತ್ರದ ಚುನಾವಣಾ ವೀಕ್ಷಕರನ್ನಾಗಿ ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು ನೇಮಕ ಮಾಡಿದೆ ಎಂದು ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರವಿಗೌಡ ಪಾಟೀಲ ತಿಳಿಸಿದ್ದಾರೆ.