ವಿಜಯಪುರ: ತಿಂಗಳು ಅಂತ್ಯ ಸಾಧನೆಯ ಪ್ರಗತಿ ಸಭೆ

ವಿಜಯಪುರ 16; ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯ ಭೂ ಒಡೆತನ ಯೋಜನೆಯಡಿ ಅವಶ್ಯಕವಿರುವ ಅನುದಾನ-ಜಮೀನು ಕುರಿತ  ಪ್ರಸ್ತಾವನೆಯನ್ನು ಒಂದು ವಾರದಲ್ಲಿ ಸರ್ಕಾರಕ್ಕೆ ಕಳುಹಿಸಿಕೊಡಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ದಿ ನಿಗಮದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ 2019-20ನೇ ಸಾಲಿನ ಎಸ್ಸಿಪಿ-ಟಿಎಸ್ಪಿ ಯೋಜನೆಯಡಿ ಕೇಂದ್ರ, ರಾಜ್ಯ ಹಾಗೂ ಜಿಲ್ಲಾ ವಲಯ ಕಾರ್ಯಕ್ರಮಗಳಲ್ಲಿ ನವೆಂಬರ್ ಅಂತ್ಯಕ್ಕೆ ಸಾಧಿಸಿದ ಪ್ರಗತಿ ಕುರಿತು ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಭೂ ಒಡೆತನ ಯೋಜನೆಯಡಿ ಒಟ್ಟು 40 ಕೋಟಿ ರೂ. ವೆಚ್ಚದ 226 ಎಕರೆ ಜಮೀನಿಗೆ ಸಂಬಂಧಪಟ್ಟಂತೆ ಪ್ರಸ್ತಾವನೆ ಸಲ್ಲಿಸಬೇಕಾಗಿದ್ದು, ಈ ಪೈಕಿ 100 ಎಕರೆ ಜಮೀನಿಗೆ ಮಾತ್ರ ಪ್ರಸ್ತಾವನೆ ಸಲ್ಲಿಸಲಾಗಿದೆ. ಕಾರಣ ಬಾಕಿ ಉಳಿದಿರುವ ಜಮೀನು ಸಹ ಅರ್ಹ ಫಲಾನುಭವಿಗಳಿಗೆ ದೊರೆಯಲು ಅನುಕೂಲವಾಗುವಂತೆ ಸಕರ್ಾರಕ್ಕೆ ತಕ್ಷಣ ಪ್ರಸ್ತಾವನೆ ಕಳುಹಿಸಿಕೊಡುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು. 

ವಿಜಯಪುರ-ಕಲ್ಬುರ್ಗಾ  ಹಾಗೂ ರಾಯಚುರು ಜಿಲ್ಲೆಗಳಲ್ಲಿ ಭೂ ಒಡೆತನ ಯೋಜನೆಯಡಿ ಫಲಾನುಭವಿಗಳಿಂದ ಬೇಡಿಕೆ ಹೆಚ್ಚಾಗಿದ್ದು, ಜಮೀನು ಕೂಡ ಇಲ್ಲಿ ಲಭ್ಯವಿರುವುದರಿಂದ ಅರ್ಹ ಫಲಾನುಭವಿಗಳಿಗೆ ಈ ಯೋಜನೆಯ ಲಾಭ ದೊರೆಯಲು ಅನುಕೂಲವಾಗುವಂತೆ ಪ್ರಸ್ತಾವನೆ ರೂಪಿಸಿ ಕಳುಹಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಫಲಾನುಭವಿಗಳೆಲ್ಲರೂ ಈ ಯೋಜನೆಯ ಲಾಭ ಪಡೆಯುವಂತೆ ನೋಡಿಕೊಳ್ಳಲು ಸೂಚನೆ ನೀಡಿದರು. 

ಕೃಷ್ಣಾ ಭಾಗ್ಯ ಜಲನಿಗಮದ ವತಿಯಿಂದ ಆಲಮಟ್ಟಿ ಹಾಗೂ ರಾಂಪೂರ ವಲಯದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಯೋಜನೆಯಡಿ ಬೊರವೆಲ್ ಸಿಸಿ ರಸ್ತೆ, ತೆರೆದ ಬಾವಿ, ಸೇರಿದಂತೆ ನಿಗದಿತ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಯೋಜನೆ ರೂಪಿಸಿಕೊಂಡು ಜಾರಿಗೊಳಿಸಬೇಕು. ಮುಂಬರುವ ಸಭೆಗಳಲ್ಲಿ ಸಂಬಂಧಿಸಿದ ಅಧಿಕಾರಿಗಳೂ ವರ್ಷವಾರು ಸಾಧಿಸಿದ ಆಥರ್ಿಕ ಮತ್ತು ಭೌತಿಕ ಪ್ರಗತಿ ಮಾಹಿತಿಯನ್ನು ನೀಡುವ ಜೊತೆಗೆ ವಿವಿಧ ಯೋಜನೆಗಳಡಿ ಪ್ರಗತಿಯನ್ನು  ಶೇಕಡಾ ನೂರರಷ್ಟು  ಸಾಧಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿ 2015-16ರಿಂದ ಬಾಕಿ ಇರುವ ಪ್ರವಾಸಿ ಟ್ಯಾಕ್ಸಿ ಯೋಜನೆಯಡಿ ಸೌಲಭ್ಯ ಕಲ್ಪಿಸಬೇಕು. ದೇವರಾಜ ಅರಸು ನಿಗಮ, ಅಂಬೇಡ್ಕರ ಅಭಿವೃದ್ದಿ ನಿಗಮ, ಕೃಷ್ಣಾ ಭಾಗ್ಯ ಜಲನಿಗಮ ಸೇರಿದಂತೆ ವಿವಿಧ ಇಲಾಖೆಗಳು ವಿಶೇಷವಾಗಿ ಬೊರವೆಲ್ ಕೊರೆಯಿಸುವುದಕ್ಕೆ ಸಂಬಂಧಪಟ್ಟಂತೆ ಫಲಾನುಭವಿಗಳ ಪುನರಾವರ್ತನೆ ಆಗದಂತೆ ನೋಡಿಕೊಳ್ಳಬೇಕು. ಅಧಿಕಾರಿಗಳೆಲ್ಲರೂ ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸುವ ಜೊತೆಗೆ ನಿರಾಪೇಕ್ಷಣಾ ಪತ್ರ ನೀಡುವ ಸಂದರ್ಭದಲ್ಲಿ ಪರಿಶೀಲಿಸಿ ನೀಡುವಂತೆ ಸೂಚನೆ ನೀಡಿದರು. 

ಆಯುಷ್ ಇಲಾಖೆ ವ್ಯಾಪ್ತಿಯಲ್ಲಿ ಮನೆ ಮದ್ದು ಕಾರ್ಯಕ್ರಮದಡಿಯಲ್ಲಿ ನಿಗದಿತ ಆರ್ಥಿಕ ಹಾಗೂ ಭೌತಿಕ ಸಾಧನೆ ಮಾಡಬೇಕು. ಸಭೆಗೆ ಗೈರು ಹಾಜರಾಗಿರುವ ಪಂಚಾಯತ್ ರಾಜ್ ಇಂಜಿನೀಯರಿಂಗ್ ವಿಭಾಗದ ಕಾರ್ಯನಿವರ್ಾಹಕ ಅಭಿಯಂತರರಿಗೆ  ಕಾರಣ ಕೇಳಿ ನೋಟಿಸ್ ಜಾರಿಗೊಳಿಸುವ ಜೊತೆಗೆ ಮುಂದಿನ ಸಭೆಯಲ್ಲಿ ಮುಖ್ಯಸ್ಥರೇ ಹಾಜರಾಗಿ ಸಾಧಿಸಿರುವ ಪ್ರಗತಿಯ ಜೊತೆಗೆ ಶೇಕಡಾ ನೂರರಷ್ಟು ಅನುದಾನ ಎಸ್ಸಿಪಿ-ಟಿಎಸ್ಪಿಯಡಿ ಬಳಸಿರುವ ಬಗ್ಗೆ ಮಾಹಿತಿ ನೀಡಬೇಕು. 

ಸಂಸದ ರಮೇಶ ಜಿಗಜಿಣಗಿ ಮಾತನಾಡಿ, 4-5 ವರ್ಷಗಳ ಹಿಂದೆ ಗಂಗಾಕಲ್ಯಾಣ ಯೋಜನೆ, ಎಸ್ಸಿಪಿ ಮತ್ತು ಟಿಎಸ್ಪಿ ಯೋಜನೆಯಡಿಯಲ್ಲಿ ಆಯ್ಕೆಯಾದ ಫಲಾನುಭವಿಗಳ ಬೊರವೆಲ್ಗಳ ಪಂಪಸೆಟ್ಗಳಿಗೆ ಶೀಘ್ರವಾಗಿ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಸಭೆಯಲ್ಲಿ ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು. ಸಮಾಜ ಕಲ್ಯಾಣ ಇಲಾಖೆ ಉಪನಿದರ್ೇಶಕ ಮಹೇಶ ಪೋದ್ದಾರ ಸ್ವಾಗತಿಸಿದರು.