ಲೋಕದರ್ಶನ ವರದಿ
ವಿಜಯಪುರ 23: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರೇ ಪ್ರಭುಗಳು. ಅವರು ನೀಡಿದ ತೀಪರ್ಿಗೆ ನಾವು ವಿನಮ್ರತೆಯಿಂದ ತಲೆ ಬಾಗುತ್ತೇವೆ ಎಂದು ರಾಜ್ಯದ ಗೃಹ ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ.
ಲೋಕಸಭೆ ಚುನಾವಣೆ ಫಲಿತಾಂಶದ ಕುರಿತು ಹೇಳಿಕೆ ನೀಡಿರುವ ಅವರು, ಲೋಕಸಭಾ ಚುನಾವಣೆಯಲ್ಲಿ ದೇಶದ ಮತದಾರರು ಭಾರತೀಯ ಜನತಾ ಪಕ್ಷ ಮತ್ತು ಪ್ರಧಾನಿ ನರೇಂದ್ರ ಮೋದಿಯವರಿಗೆ ಭಾರಿ ಬಹುಮತ ನೀಡಿದ್ದಾರೆ. ಎಂದು ಹೇಳಿದ್ದಾರೆ. ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷ ಪ್ರಜಾತಂತ್ರ ಆಶಯಗಳಿಗೆ ಬದ್ಧವಾಗಿ ತನ್ನ ಕಾರ್ಯ ನಿರ್ವಹಿಸಲಿದೆ ಎಂದು ಅವರು ತಿಳಿಸಿದ್ದಾರೆ.