ಇಂದು ಪಟ್ಟಣದಲ್ಲಿ ವಿಶ್ವಗುರು ಬಸವಣ್ಣನವರ ಜಯಂತಿ ಆಚರಣೆ

Vishwaguru Basavanna's Jayanti celebrated in the city today

ಇಂದು ಪಟ್ಟಣದಲ್ಲಿ ವಿಶ್ವಗುರು ಬಸವಣ್ಣನವರ ಜಯಂತಿ ಆಚರಣೆ  

ತಾಳಿಕೋಟಿ 29: ಕರ್ನಾಟಕ ಸಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ 892ನೇ ಜಯಂತೋತ್ಸವವನ್ನು ತಾಲೂಕಾಡಳಿತ, ತಾಲೂಕ ಪಂಚಾಯತ, ಪುರಸಭೆ ಹಾಗೂ ಬಸವೇಶ್ವರ ಉತ್ಸವ ಸಮಿತಿ ಇವರ ಸಹಯೋಗದಲ್ಲಿ ಇಂದು ಆಚರಿಸಲಾಗುವುದು. ಜಯಂತಿ ಅಂಗವಾಗಿ ಮುಂಜಾನೆ 8-.0 ಗಂಟೆಗೆ ಪಟ್ಟಣದ ರಾಜವಾಡೆಯಿಂದ ಬಸವಣ್ಣನವರ ಭಾವಚಿತ್ರದ ಭವ್ಯ ಮೆರವಣಿಗೆಯು ಬಸವೇಶ್ವರ ವೃತ್ತದವರೆಗೆ ನಡೆಯುವುದು.  

ನಂತರ ಅಲ್ಲಿಯೇ ವೇದಿಕೆ ಕಾರ್ಯಕ್ರಮ ಜರಗುವುದು. ವೇದಿಕೆ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಉದ್ಘಾಟಿಸುವರು. ಕೆ.ಎಸ್‌.ಡಿ.ಎಲ್‌.ಅಧ್ಯಕ್ಷ,ಶಾಸಕ ಅಪ್ಪಾಜಿ ನಾಡಗೌಡರು ಅಧ್ಯಕ್ಷತೆ ಹಾಗೂ ದೇವರ ಹಿಪ್ಪರಗಿ ಶಾಸಕ ಭೀಮನಗೌಡ ಪಾಟೀಲ ಸಹ ಅಧ್ಯಕ್ಷತೆ ವಹಿಸುವರು. ಸಾಹಿತಿ ಅಶೋಕ ಹಂಚಲಿ ವಿಶೇಷ ಉಪನ್ಯಾಸ ನೀಡುವರು. ಮುಖ್ಯ ಅತಿಥಿಗಳಾಗಿ ಸಚಿವ ಶಿವಾನಂದ ಎಸ್‌.ಪಾಟೀಲ, ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಎನ್, ಪ್ರಕಾಶ ಬಿ.ಹುಕ್ಕೇರಿ, ಸಂಸದ ರಮೇಶ ಜಗಜಣಿಗಿ, ರಾಜ್ಯಸಭಾ ಸಂಸದೆ ಡಾ.ಸುಧಾ ಮೂರ್ತಿ, ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ, ಸುನೀಲಗೌಡ ಪಾಟೀಲ, ಪಿ.ಎಚ್‌.ಪೂಜಾರ, ಕೇಶವ ಪ್ರಸಾದ್ ಎಸ್, ಕೌಶಲ್ಯಾಭಿವೃದ್ಧಿ ನಿಗಮ ಅಧ್ಯಕ್ಷೆ ಕಾಂತಾ ನಾಯಕ, ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಪುರಸಭೆ ಅಧ್ಯಕ್ಷೆ ಜುಬೇದಾ ಹುಸೇನಬಾಷಾ ಜಮಾದಾರ, ಉಪಾಧ್ಯಕ್ಷೆ ಗೌರಮ್ಮ ಕುಂಬಾರ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಸಂಗಮೇಶ ದೇಸಾಯಿ ಆಗಮಿಸಲಿದ್ದು, ತಹಶೀಲ್ದಾರ್ ಡಾ.ವಿನಯಾ ಹೂಗಾರ, ಪುರಸಭೆ ಮುಖ್ಯಾಧಿಕಾರಿ ಮೋಹನ ಜಾಧವ, ತಾಪಂ ಇಒ ನಿಂಗಪ್ಪ ಮಸಳಿ, ಬಿಇಒ ಬಿ.ಎಸ್‌.ಸಾವಳಗಿ, ಸಿಪಿಐ ಮೊಹಮ್ಮದ್ ಫಸಿವುದ್ದೀನ ಉಪಸ್ಥಿತರಿರುವರು ಎಂದು ತಾಲೂಕ ಆಡಳಿತದ ಪ್ರಕಟಣೆ ತಿಳಿಸಿದೆ.